ಕಲಬುರ್ಗಿ : ಕಲ್ಬುರ್ಗಿಯಲ್ಲಿ ಯುವಕನೊಬ್ಬ ಬ್ರಿಡ್ಜ್ ಮೇಲಿಂದ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲ್ಬುರ್ಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಕುರಿಕೋಟಾ ಗ್ರಾಮದಲ್ಲಿ ನಡೆದಿದೆ.
ಆತ್ಮಹತ್ಯೆಗೆ ಶರಣಾದ ಯುವಕನನ್ನು ಸಮೀರ್ (23) ಎಂದು ಗುರುತಿಸಲಾಗಿದೆ. ಕಲ್ಬುರ್ಗಿಯ ಮಿಲ್ಲತ್ ನಗರದ ನಿವಾಸಿಯಾಗಿರುವಂತ ಸಮೀರ್ ಆತ್ಮಹತ್ಯೆಗೆ ಶರಣಾಗಿದ್ದಾನೆ. ಘಟನಾ ಸ್ಥಳದಲ್ಲಿ ಸಮೀರ್ ಶವಕ್ಕಾಗಿ ಎಸ್ ಡಿ ಆರ್ ಎಫ್ ಮತ್ತು ಪೊಲೀಸರು ತೀವ್ರ ಹುಡುಕಾಟ ಮುಂದುವರಿಸಿದ್ದಾರೆ, ಮಹಾಗಾಂವ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.