ಬೆಳಗಾವಿ: ಬೆಳಕಿನ ಹಬ್ಬ ದೀಪಾವಳಿ ಸಂಭ್ರಮದಲ್ಲಿರಬೇಕಾದ ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೌದು, ಇದು ರಾಮದುರ್ಗದ ಜನರ ಪರಿಸ್ಥಿತಿ.ಕಲುಷಿತ ನೀರು ಸೇವಿಸಿ 4 ದಿನಗಳ ಅಂತರದಲ್ಲಿ 90 ಕ್ಕೂ ಅಧಿಕ ಜನರು ಅಸ್ವಸ್ಥಗೊಂಡಿರುವ ಘಟನೆ ಬೆಳಗಾವಿ (Belagavi) ಜಿಲ್ಲೆಯ ರಾಮದುರ್ಗ ತಾಲೂಕಿನ ಮುದೇನೂರು ಗ್ರಾಮದಲ್ಲಿ ಘಟನೆ ನಡೆದಿದೆ.
ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಓರ್ವ ಮೃತಪಟ್ಟಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದ್ದು, ಈ ಮೂಲಕ ಗ್ರಾಮದಲ್ಲಿ ವೃದ್ದೆ ಸೇರಿ ಇಬ್ಬರು ಮೃತಪಟ್ಟಿದ್ದಾರೆ. ಗ್ರಾಮದ ಶಿವಪ್ಪ (70) ಎಂಬುವವರು ಇಂದು ಮೃತಪಟ್ಟಿದ್ದಾರೆ.
ಕಳೆದ 4 ದಿನಗಳಲ್ಲಿ ಗ್ರಾಮದ 90 ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದಾರೆ.ಅಸ್ವಸ್ಥಗೊಂಡ 90ಕ್ಕೂ ಹೆಚ್ಚು ಜನರಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 5 ಮಂದಿಯ ಸ್ಥಿತಿ ಗಂಭೀರವಿದ್ದು, ಬಾಗಲಕೋಟೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಗ್ರಾಮದಲ್ಲಿ ಕುಡಿಯುವ ನೀರಿನ ಪೈಪ್ ಒಡೆದು ಚರಂಡಿ ನೀರು ಮಿಶ್ರಣವಾಗಿತ್ತು. ಇದನ್ನು ತಿಳಿದರೂ ಗ್ರಾಮ ಪಂಚಾಯಿತಿ ಸಿಬ್ಬಂದಿ ನಿರ್ಲಕ್ಷ್ಯವಹಿಸಿದಕ್ಕೆ ಅವಘಡ ಸಂಭವಿಸಿದೆ ಎಂದು ಗ್ರಾಮಸ್ಥರು ಆರೋಪಿಸುತ್ತಿದ್ದಾರೆ. 44 ಪುರುಷರು, 34 ಮಹಿಳೆಯರು ಅಸ್ವಸ್ಥಗೊಂಡಿದ್ದಾರೆ ಎನ್ನಲಾಗಿದ್ದು, ಇದರಲ್ಲಿ 12 ಬಾಲಕರು , 8 ಮಂದಿ ಬಾಲಕಿಯರು ಅಸ್ವಸ್ಥಗೊಂಡಿದ್ದಾರೆ.
BIG NEWS: ಮಹಾರಾಷ್ಟ್ರದ ಕೆಮಿಕಲ್ ಫ್ಯಾಕ್ಟರಿಯಲ್ಲಿ ಸ್ಫೋಟ: ಮೂವರು ಕಾರ್ಮಿಕರ ದುರ್ಮರಣ, 12 ಮಂದಿಗೆ ಗಾಯ
ಡಾಲಿಯ ‘ಹೆಡ್ ಬುಷ್’ ವಿವಾದ : ‘ಟ್ವಿಟರ್’ ನಲ್ಲಿ ಟ್ರೆಂಡ್ ಆಯ್ತು #WeStandWithDhananjaya ಹ್ಯಾಷ್ ಟ್ಯಾಗ್