ಕಲಬುರಗಿ: : ಕಲಬುರಗಿಯಲ್ಲಿ ಬಹಿರ್ದೆಸೆಗೆ ತೆರಳಿದ್ದ ಬಾಲಕಿ ಎಳೆದೊಯ್ದು ಅತ್ಯಾಚಾರ, ಕೊಲೆ ಮಾಡಿರುವ ಘಟನೆಗೆ ಸಂಬಂಧಿಸಿದಂತೆ ಆರೋಪಿ ಅಪ್ರಾಪ್ತ ಬಾಲಕನನ್ನು ಪೊಲೀಸರು ಬಂಧಿಸಿದ್ದಾರೆ.
ಘಟನೆ ನಡೆದ 24 ಗಂಟೆಯೊಳಗೆ ನಳಂದ ಪೊಲೀಸರು ಕಾರ್ಯಾಚರಣೆ ನಡೆಸಿ ಅಪ್ರಾಪ್ತ ಬಾಲಕನನ್ನು ಬಂಧಿಸಿದ್ದಾರೆ. ನಿನ್ನೆ ಕೃತ್ಯವೆಸಗಿ ನಾಪತ್ತೆಯಾಗಿದ್ದ ಆರೋಪಿಯನ್ನು ಇಂದು ಪೊಲೀಸರು ಬಂಧಿಸಿದ್ದಾರೆ.
ಅಫಜಲಪುರ ತಾಲೂಕಿನ 15 ವರ್ಷದ ಬಾಲಕಿಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿದೆ. ಮೃತ ಬಾಲಕಿ ಮಂಗಳವಾರ ಮಧ್ಯಾಹ್ನ ಮೂರು ಗಂಟೆ ಸಮಯದಲ್ಲಿ ಶೌಚಾಲಯಕ್ಕೆ ಹೋಗಿದ್ದ ವೇಳೆಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.
ಕಬ್ಬಿನ ಗದ್ದೆಗೆ ಎಳೆದೊಯ್ದು ಅತ್ಯಾಚಾರವೆಸಗಿ ಕೊಲೆಗೈದಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದ್ದು, ಘಟನ ಸ್ಥಳಕ್ಕೆ ಕಲಬುರಗಿ ಎಸ್ಪಿ ಇಶಾ ಪಂತ್ ಇತರ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಈ ಬಗ್ಗೆ ಆಳಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಮೋಸ್ಟ್ ವಾಂಟೆಡ್ ‘ತುಘೈಲ್’ ಗಾಗಿ ಕೊಡಗು ಪೊಲೀಸರಿಂದ ತೀವ್ರ ಶೋಧ