ಬಳ್ಳಾರಿ : ಇದೇ ಏಪ್ರಿಲ್ 16 ರಂದು ಕಲಬುರಗಿಯಲ್ಲಿ “ ಕಲ್ಯಾಣ ಕರ್ನಾಟಕ ಉದ್ಯೋಗ ಮೇಳ” ಆಯೋಜಿಸಿದ್ದು, ಈ ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳುವ ಉದ್ಯೋಗಾಕಾಂಕ್ಷಿಗಳ ಅನುಕೂಲಕ್ಕಾಗಿ ಬಳ್ಳಾರಿಯಿಂದ ಏ.15 ರಂದು ಜನದಟ್ಟಣೆಯ ಮೇರೆಗೆ ಕಕರಸಾನಿ ಬಳ್ಳಾರಿ ವಿಭಾಗದಿಂದ ಹೆಚ್ಚುವರಿ ಸಾರಿಗೆ ಸೌಕರ್ಯ ಒದಗಿಸಲಾಗುತ್ತಿದೆ.
ಈ ಹೆಚ್ಚುವರಿ ಸಾರಿಗೆ ಸೇವೆಯನ್ನು ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳುವ ಉದ್ಯೋಗಾಕಾಂಕ್ಷಿಗಳು ಹಾಗೂ ಸಾರ್ವಜನಿಕ ಪ್ರಯಾಣಿಕರು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬಳ್ಳಾರಿ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಇನಾಯತ್ ಬಾಗ್ ಬಾನ್ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.