ರಾಮನಗರ: ಇಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಮತಕ್ಷೇತ್ರ ಕನಕಪುರದಲ್ಲಿ ಘೋರ ದುರಂತವೊಂದು ನಡೆದಿದೆ. ಅದೇ ನಿರ್ಮಾಣ ಹಂತದ ಆರ್ಚ್ ಕುಸಿತಗೊಂಡ ಪರಿಣಾಮ ಅದರಡಿ ಸಿಲುಕಿ ಓರ್ವ ಸಾವನ್ನಪ್ಪಿದ್ದಾರೆ. ಅಲ್ಲದೇ ಹಲವರು ಗಾಯಗೊಂಡಿರೋದಾಗಿ ತಿಳಿದು ಬಂದಿದೆ.
ಕನಕಪುರದ ರೂರಲ್ ಕಾಲೇಜಿನಲ್ಲಿ ನಿರ್ಮಾಣ ಹಂತದ ಆರ್ಚ್ ಏಕಾಏಕಿ ಕುಸಿತಗೊಂಡಿದೆ. ಈ ಘಟನೆಯಲ್ಲಿ ಆರ್ಚ್ ಅಡಿಯಲ್ಲಿ ಸಿಲುಕಿ ಓರ್ವ ಸಾವನ್ನಪ್ಪಿದ್ದಾನೆ. ಇನ್ನೂ ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಆರ್ಚ್ ಕುಸಿತದಿಂದ ಅವಶೇಷಗಳಡಿ ಇನ್ನೂ ಹಲವರು ಸಿಲುಕಿರುವಂತ ಶಂಕೆ ಇದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಆಗಮಿಸಿದ್ದು, ರಕ್ಷಣಾ ಕಾರ್ಯ ಮುಂದುವರೆಸಿದ್ದಾರೆ. ಈ ದುರಂತಕ್ಕೆ ಕಳಪೆ ಕಾಮಗಾರಿಯೇ ಕಾರಣ ಎನ್ನಲಾಗುತ್ತಿದೆ.
BREAKING : ರಾಜ್ಯದ ವಾಹನ ಸವಾರರಿಗೆ ಗುಡ್ ನ್ಯೂಸ್ : ‘HSRP’ ನಂಬರ್ ಪ್ಲೇಟ್ ಅಳವಡಿಕೆ ಮಾ.31ರವರೆಗೆ ವಿಸ್ತರಣೆ
BREAKING : ಬೆಂಗಳೂರಲ್ಲಿ ‘RTO’ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ : 100ಕ್ಕೂ ಹೆಚ್ಚು ಶಾಲಾ ವಾಹನಗಳು ಸೀಜ್!