ನವದೆಹಲಿ: ಹಿಮಾಚಲ ಪ್ರದೇಶದ ಸಚಿವ ಜಗತ್ ಸಿಂಗ್ ನೇಗಿ ಬುಧವಾರ ಬಿಜೆಪಿ ಸಂಸದೆ ಕಂಗನಾ ರನೌತ್ ಬಗ್ಗೆ ನೀಡಿದ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ರಾಜ್ಯ ವಿಧಾನಸಭೆಯಲ್ಲಿ ಮಾತನಾಡಿದ ನೇಗಿ, “ಕಂಗನಾ ರನೌತ್ ಮಳೆ ಪೀಡಿತ ಮಂಡಿಗೆ ಭೇಟಿ ನೀಡಲಿಲ್ಲ ಏಕೆಂದರೆ ಅವರ ಮೇಕಪ್ ಕೊಚ್ಚಿಹೋಗುತ್ತದೆ… ಈ ಪ್ರದೇಶದಲ್ಲಿ ಪರಿಸ್ಥಿತಿಗಳು ಸುಧಾರಿಸಿದ ನಂತರ ಅವರು ಸ್ಥಳಕ್ಕೆ ಭೇಟಿ ನೀಡಿ ಮೊಸಳೆ ಕಣ್ಣೀರು ಸುರಿಸಿದರು ಅಂತ ಹೇಳಿದ್ದಾರೆ.
ಹಿಮಾಚಲ ಪ್ರದೇಶವು ಮಳೆಯಿಂದಾಗಿ ತೀವ್ರವಾಗಿ ಬಾಧಿತವಾಗಿದೆ. ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ 707 ಸೇರಿದಂತೆ 109 ರಸ್ತೆಗಳನ್ನು ಮುಚ್ಚಲಾಗಿದೆ ಎಂದು ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ ತಿಳಿಸಿದೆ. ಚಂಬಾ, ಕಾಂಗ್ರಾ, ಮಂಡಿ, ಶಿಮ್ಲಾ, ಸಿರ್ಮೌರ್, ಸೋಲನ್, ಕುಲ್ಲು ಮತ್ತು ಕಿನ್ನೌರ್ನ ಕೆಲವು ಭಾಗಗಳಲ್ಲಿ ಮಂಗಳವಾರದವರೆಗೆ ಕಡಿಮೆ ಮತ್ತು ಮಧ್ಯಮ ಪ್ರವಾಹದ ಅಪಾಯವಿದೆ ಎಂದು ಸ್ಥಳೀಯ ಹವಾಮಾನ ಕಚೇರಿ ಎಚ್ಚರಿಸಿದೆ. ಮಂಗಳವಾರದವರೆಗೆ ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆ, ಗುಡುಗು ಮತ್ತು ಮಿಂಚಿನ ‘ಹಳದಿ’ ಎಚ್ಚರಿಕೆಯನ್ನು ಸಹ ಅದು ನೀಡಿದೆ