ಬೆಂಗಳೂರು: ದೀಪಿಕಾ ಪಡುಕೋಣೆ ಅಭಿಯನ ಹೊಸ ಸಿನಿಮಾವೊಂದರ ಹಾಡೊಂದರಲ್ಲಿ ಕೇಸರಿ ಬಟ್ಟೆಯನ್ನು ತೊಟ್ಟಿರುವುದು ಈಗ ವಿವಾದಕ್ಕೆ ಕಾರಣವಾಗಿದೆ. ಈ ನಡುವೆ ಹಿಂದೂಪರ ಸಂಘಟನೆಗಳು ಸಿನಿಮಾವನ್ನು ಬ್ಯಾನ್ ಮಾಡುವಂತೆ ಆಗ್ರಹ ಮಾಡುತ್ತಿದ್ದಾರೆ.
ಈ ನಡುವೆ ಬಾಲಿವುಡ್ ನಟಿ ಕಂಗನಾ ರಣಾವತ್ಗೂ ಕೇಸರಿ ಕಂಟಕ ಎದುರಾಗಿದ್ದು, ಅವರ ಹೊಸ ರಿಯಾಲಿಟಿ ಶೋ ವೊಂದರ ಪೋಸ್ಟರ್ನಲ್ಲಿ ಕೇಸರಿ ಬಣ್ಣದ ಬಟ್ಟೆಯನ್ನು ಹಾಕಿಕೊಂಡಿರುವ ವ್ಯಕ್ತಿ ಮೇಲೆ, ಕಾಲಿಟ್ಟಿರುವುದು ಈಗ ವಿವಾದಕ್ಕೆ ಕಾರಣವಾಗಿದೆ. ಈ ಬಗ್ಗೆ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಪದ್ಮಶ್ರೀ ಪುರಸ್ಕೃತ ನಟಿ ಕಂಗನಾರನ್ನ ಚಿತ್ರರಂಗದಿಂದ ಬ್ಯಾನ್ (Ban) ಮಾಡಿ ಅಂತಾ ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.