‘ಕನ್ನಡ ಪುಸ್ತಕ ಪ್ರಾಧಿಕಾರ’ದಿಂದ ಯುವ ಬರಹಗಾರರ ಚೊಚ್ಚಲ ಕೃತಿಗೆ ‘ಧನಸಹಾಯ’ಕ್ಕಾಗಿ ಅರ್ಜಿ ಆಹ್ವಾನ

ಬೆಂಗಳೂರು: ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2025-26ನೇ ಸಾಲಿನ ಯುವಬರಹಗಾರರ ಚೊಚ್ಚಲ ಕೃತಿಗಳನ್ನು ಪ್ರಕಟಿಸಲು ಪ್ರೋತ್ಸಾಹಧನ ನೀಡುವ ಸಲುವಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಆಯ್ಕೆಯಾದ 50 ಯುವ ಬರಹಗಾರರ ಹಸ್ತಪ್ರತಿಗಳ ಪ್ರಕಟಣೆಗೆ ಮಾತ್ರ ರೂ.15,000-00ಗಳ ಪ್ರೋತ್ಸಾಹಧನ ನೀಡಲಾಗುವುದು. ಅರ್ಜಿದಾರರು 18 ರಿಂದ 40 ವರ್ಷ ವಯೋಮಿತಿಯವರಾಗಿರಬೇಕು. ಸ್ವ-ವಿವರವುಳ್ಳ ಪ್ರಾಧಿಕಾರದ ಅರ್ಜಿ ನಮೂನೆಯೊಂದಿಗೆ ದೃಢೀಕೃತ ಎಸ್.ಎಸ್.ಎಲ್.ಸಿ. ಪ್ರಮಾಣ ಪತ್ರದ ಪ್ರತಿ ಅಥವಾ ಅಧಿಕೃತವಾದ, ದೃಢೀಕರಿಸಲ್ಪಟ್ಟ ಜನ್ಮದಾಖಲಾತಿ ಪ್ರಮಾಣ ಪತ್ರದ ಪ್ರತಿಯನ್ನು ಸಲ್ಲಿಸಬೇಕು. ಅಲ್ಲದೆ ಪ್ರಸ್ತುತ ಸಲ್ಲಿಸಲ್ಪಡುತ್ತಿರುವ ಕೃತಿಯು ತಮ್ಮ ಚೊಚ್ಚಲ … Continue reading ‘ಕನ್ನಡ ಪುಸ್ತಕ ಪ್ರಾಧಿಕಾರ’ದಿಂದ ಯುವ ಬರಹಗಾರರ ಚೊಚ್ಚಲ ಕೃತಿಗೆ ‘ಧನಸಹಾಯ’ಕ್ಕಾಗಿ ಅರ್ಜಿ ಆಹ್ವಾನ