ಬೆಂಗಳೂರು : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳ ಒಂದೆಲ್ಲ ಒಂದು ಯಡವಟ್ಟು ಮಾಡಿಕೊಂಡು ಬರುತ್ತಲೇ ಇರುತ್ತಾರೆ. ಯಾರು ಶಾಸಕರು ಯಾರು ಮಾಜಿ ಶಾಸಕರು ಎಂಬುದು ಅಧಿಕಾರಿಗಳಿಗೆ ಗೊತ್ತೇ ಇರುವುದಿಲ್ಲ ಇಸರಿಗೆ ಮಾತ್ರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಗಿರುತ್ತದೆ.
ಇಂಥದೊಂದು ಎಡವಟ್ಟು ಘಟನೆಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಾಡಿದ್ದು ಮಾಜಿ ಶಾಸಕರ ಹೆಸರನ್ನು ಹಾಲಿ ಶಾಸಕರು ಎಂದು ಕರಪತ್ರದಲ್ಲಿ ಮುದ್ರಿಸಿ ಯಡವಟ್ಟು ಮಾಡಿಕೊಂಡಿದ್ದಾರೆ.
ಹೌದು ನಾಳೆ ಆಗಸ್ಟ್.26ರಂದು ಶ್ರೀಕೃಷ್ಣ ಜನ್ಮಾಷ್ಟಮಿ ಆಚರಿಸಲಾಗುತ್ತಿದ್ದು, ಸರ್ಕಾರದ ವತಿಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಈ ಕಾರ್ಯಕ್ರಮ ನಡೆಯಲಿದೆ.
ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯ ಸಚಿವರು ಹಾಗೂ ಕೇಂದ್ರ ಸಚಿವ ಸೇರಿದಂತೆ ಗೊಲ್ಲ ಸಮುದಾಯದ ಮುಖಂಡರು ಹಾಜರಿರಲಿದ್ದಾರೆ.
ಆದರೆ ವಿಶೇಷ ಆಹ್ವಾನಿತರ ಪಟ್ಟಿಯಲ್ಲಿ ಹಿರಿಯೂರಿನ ಮಾಜಿ ಶಾಸಕಿ ಕೆ. ಪೂರ್ಣಿಮಾ ಶ್ರೀನಿವಾಸ್ ಅವರ ಹೆಸರು ನಮೂದಿಸಿದ್ದಾರೆ. ಕಳೆದ ಚುನಾವಣೆಯಲ್ಲಿ ಸೋತಿದ್ದಾರೆ. ಆದರೆ ಇಲಾಖೆ ಅಧಿಕಾರಿಗಳು
ಶ್ರೀಮತಿ ಕೆ ಪೂರ್ಣಿಮಾ ಶ್ರೀನಿವಾಸ್ ಮಾನ್ಯ ಮಹಿಳಾ ಅಧ್ಯಕ್ಷರು ಅಖಿಲ ಭಾರತ ನವದೆಹಲಿ ಮತ್ತು ಶಾಸಕರು ಹಿರಿಯೂರು ವಿಧಾನಸಭಾ ಕ್ಷೇತ್ರ ಎಂದು ನಮೂದಿಸಿ ಯಡವಟ್ಟು ಮಾಡಿಕೊಂಡಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿಗಳಿಗೆ ಯಾರು ಹಾಲಿ?, ಯಾರು ಮಾಜಿ? ಎಂಬುದು ಗೊತ್ತಿಲ್ಲವೇ ಎಂಬುದು ಸಾರ್ವಜನಿಕರ ಪ್ರಶ್ನೆಯಾಗಿದೆ.