ಬೆಂಗಳೂರು : ಹಿರಿಯ ನಟ ನಿರ್ಮಾಪಕ ನಿರ್ದೇಶಕ ದ್ವಾರಕೀಶ್ ಅವರ ನಿಧನದ ಹಿನ್ನೆಲೆಯಲ್ಲಿ ಇಂದು ಸ್ವಯಂ ಪ್ರೇರಿತವಾಗಿ ಕನ್ನಡ ಚಿತ್ರರಂಗ ಬಂದ್ ಮಾಡಲು ನಿರ್ಧರಿಸಲಾಗಿದೆ ಎಂದು ಫಿಲಂ ಚೆಂಬರ್ ಅಧ್ಯಕ್ಷ ಎಂ. ಎನ್ ಸುರೇಶ್ ತಿಳಿಸಿದರು.
ಇಂದು ದ್ವಾರಕೀಶ್ ಅವರ ನಿಧನದ ಹಿನ್ನೆಲೆ ಇವತ್ತು ಒಂದು ದಿನ ಸಿನಿಮಾ ಚಟುವಟಿಕೆಗಳನ್ನು ನಿಲ್ಲಿಸಿ, ಸ್ವಯಂ ಪ್ರೇರಿತರಾಗಿ ಬಂದ್ ಆಚರಿಸೋಣ, ಅವರನ್ನು ಗೌರವಯುತವಾಗಿ ಕಳಿಸಿಕೊಡೋಣ.ಅಲ್ಲದೇ ಅಲ್ಲದೇ ದ್ವಾರಕೀಶ್ ಅಂತ್ಯಕ್ರಿಯೆಗೆ ಸಂಬಂಧಿಸಿದಂತೆ ಸರ್ಕಾರದೊಂದಿಗೂ ಮಾತಾಡುವೆ ಎಂದು ಎನ್,ಎಂ ಸುರೇಶ್ ಹೇಳಿದ್ರು.
ಹಾಗಾಗಿ ಇಂದು 10:30ರ ಶೋಗಳನ್ನು ಬಂದ್ ಮಾಡಲಾಗಿದ್ದು ಇಂದು ಮಧ್ಯಾಹ್ನ 1:00 ನಂತರ ಚಲನಚಿತ್ರ ಪ್ರದರ್ಶನ ನಡೆಯಲಿದೆ. ಸಿಂಗಲ್ ಸ್ಕ್ರೀನ್ ಮಲ್ಟಿಪ್ಲೆಕ್ಸ್ ನಲ್ಲಿ ಒಂದು ಶೋ ಬಂದ್ ಮಾಡಲು ನಿರ್ಧರಿಸಲಾಗಿದೆ. ಶೋ ಬಂದ್ ಬಗ್ಗೆ ಪ್ರದರ್ಶಕರ ವಲಯದಿಂದ ಮಾಹಿತಿ ಪಡೆಯಲಾಗಿದೆ ಎಂದು ಸುರೇಶ್ ತಿಳಿಸಿದರು.
ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಇಂದು ಬೆಳಗ್ಗೆ 7 ಗಂಟೆಯಿಂದ 11 ಗಂಟೆಗೆ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಇಂದು ಬೆಳಗ್ಗೆ ಪಾರ್ಥಿವ ಶರೀರ ರವಾನೆ ಮಾಡಲಾಗುತ್ತದೆ. 11 ಗಂಟೆವರೆಗೂ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನದ ನಂತ್ರ ಚಾಮರಾಜಪೇಟೆ ರುದ್ರಭೂಮಿಯಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ದ್ವಾರಕೀಶ್ ಪುತ್ರ ಯೋಗಿ ದ್ವಾರಕೀಶ್ ತಿಳಿಸಿದ್ರು.