ಬೆಂಗಳೂರು: ವಯೋಸಹಜ ಕಾಯಿಲೆಯಿಂದ ಇಂದು ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್ ನಿಧನ ಹೊಂದಿದ್ದಾರೆ. ಅವರ ನಿವಾಸದಲ್ಲಿ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೂ ವ್ಯವಸ್ಥೆ ಮಾಡಲಾಗಿದೆ. ಈ ಬಳಿಕ ನಾಳೆ ಅಂತ್ಯಕ್ರಿಯೆ ನೆರವೇರಿಸಲಾಗುತ್ತಿದೆ. ಈ ಹಿನ್ನಲೆಯಲ್ಲಿ ನಾಳೆ ಒಂದು ದಿನ ಕನ್ನಡ ಚಿತ್ರರಂಗದ ಎಲ್ಲಾ ಕಾರ್ಯವನ್ನು ಬಂದ್ ಮಾಡಿ, ಸಂತಾಪ ಸೂಚಿಸೋ ನಿರ್ಧಾರ ಕೈಗೊಳ್ಳಲಾಗಿದೆ.
ಈ ಕುರಿತಂತೆ ನಟ ದ್ವಾರಕೀಶ್ ಅಂತಿಮ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾಹಿತಿ ಹಂಚಿಕೊಂಡ ಫಿಲ್ಮಂ ಚೇಂಬರ್ ಅಧ್ಯಕ್ಷ ಎನ್ ಎಂ ಸುರೇಶ್ ಅವರು, ನಾಳೆ ಕನ್ನಡ ಚಿತ್ರರಂಗ ಬಂದ್ ಮಾಡೋದಕ್ಕೆ ನಿರ್ಧಾರ ಕೈಗೊಳ್ಳಲಾಗಿದೆ. ಈ ಮೂಲಕ ಹಿರಿಯ ನಟ ದ್ವಾರಕೀಶ್ ಅವರ ನಿಧನಕ್ಕೆ ಸಂತಾಪ ಸೂಚಿಸಲಾಗುತ್ತಿದೆ ಎಂದರು.
ಎಲ್ಲಾ ಕಲಾವಿಧರಿಗೂ ನಾನು ಮನವಿ ಮಾಡುತ್ತೇನೆ. ನಾಳೆ ಒಂದು ದಿನ ಚಿತ್ರರಂಗದ ಎಲ್ಲಾ ಕಾರ್ಯವನ್ನು ಬಂದ್ ಮಾಡಲು ಮನವಿ ಮಾಡುವೆ. ನಾಳೆ ಸ್ವಯಂ ಪ್ರೇರಿತವಾಗಿ ಬಂದ್ ಮಾಡಲು ಮನವಿ ಮಾಡುತ್ತೇನೆ ಎಂದರು.
ನಟ ದ್ವಾರಕೀಶ್ ಅವರ ಅಂತ್ಯಕ್ರಿಯೆ ಬಗ್ಗೆ ಸರ್ಕಾರದ ಜೊತೆ ಮಾತನಾಡ್ತಿದ್ದೇವೆ. ಅವರನ್ನು ಗೌರವಪೂರ್ವಕವಾಗಿ ಕಳುಹಿಸಿಕೊಡಬೇಕಿದೆ. ಆ ಕೆಲವನ್ನು ಸರ್ಕಾರ ಮಾಡೋ ನಿರೀಕ್ಷೆಯಿದೆ ಎಂದರು.
BREAKING : ಪಾಟ್ನಾದಲ್ಲಿ ಭೀಕರ ರಸ್ತೆ ಅಪಘಾತ : ಜೆಸಿಬಿಗೆ ಆಟೋ ಡಿಕ್ಕಿಯಾಗಿ 7 ಮಂದಿ ಸ್ಥಳದಲ್ಲೇ ಸಾವು