BREAKING: ಕನ್ನಡ ಚಲನಚಿತ್ರ ನಿರ್ಮಾಪಕ, ಉದಯ ಟಿವಿ ಅಧ್ಯಕ್ಷ ಸೆಲ್ವಂ ಇನ್ನಿಲ್ಲ

ಬೆಂಗಳೂರು: ಕನ್ನಡದ ಮೊದಲ ಉಪಗ್ರಹ ವಾಹಿನಿ ಉದಯ ಟಿವಿಯ ಅಧ್ಯಕ್ಷರು, ಹಲವು ಕನ್ನಡ ಸಿನಿಮಾಗಳ ನಿರ್ಮಾಪಕರಾಗಿದ್ದಂತ ಸೆಲ್ವಂ ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಈ ಮೂಲಕ ಉದಯ ಟಿವಿಯ ಅಧ್ಯಕ್ಷ ಸೆಲ್ವಂ(84) ಇನ್ನಿಲ್ಲವಾಗಿದ್ದಾರೆ. ಹಲವು ಕನ್ನಡ ಸಿನಿಮಾಗಳ ನಿರ್ಮಾಪಕರಾಗಿ, ಕನ್ನಡದ ಮೊಟ್ಟ ಮೊದಲ ಉಪಗ್ರಹ ವಾಹಿನಿ ಉದಯ ಟಿವಿ ಅಧ್ಯಕ್ಷರಾಗಿದ್ದಂತವರು ಸೆಲ್ವಂ ಇಂದು ಬೆಳಿಗ್ಗೆ ಹೃದಯಾಘಾತಕ್ಕೆ ಒಳಗಾಗಿದ್ದರು. ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ಕೊಂಡೊಯ್ದು ಚಿಕಿತ್ಸೆ ಕೊಡಿಸಲಾಯಿತು. ಆದರೇ ಚಿಕಿತ್ಸೆ ಫಲಿಸದೇ ಸೆಲ್ವಂ ನಿಧನರಾಗಿರುವುದಾಗಿ ತಿಳಿದು ಬಂದಿದೆ. … Continue reading BREAKING: ಕನ್ನಡ ಚಲನಚಿತ್ರ ನಿರ್ಮಾಪಕ, ಉದಯ ಟಿವಿ ಅಧ್ಯಕ್ಷ ಸೆಲ್ವಂ ಇನ್ನಿಲ್ಲ