ಬೆಂಗಳೂರು : ರಾಜ್ಯದ ಎಲ್ಲ ಖಾಸಗಿ ಮತ್ತು ಸರ್ಕಾರಿ ಕಟ್ಟಡಗಳಲ್ಲಿ ನವೆಂಬರ್ ತಿಂಗಳಿಡೀ ಕನ್ನಡ ಬಾವುಟ ಹಾರಿಸುವ ಕುರಿತು ಶೀಘ್ರವೇ ಆದೇಶ ಹೊರಡಿಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ವಿಧಾನಸೌಧದ ಆವರಣದಲ್ಲಿ ತಾಯಿ ಭುವನೇಶ್ವರಿ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಕನ್ನಡ ರಾಜ್ಯೋತ್ಸವದ ಮಹತ್ವ ಸಾರುವ ದೃಷ್ಟಿ ಯಿಂದ ಖಾಸಗಿ ಮತ್ತು ಸರ್ಕಾರಿ ಕಟ್ಟಡಗಳಲ್ಲಿ ನವೆಂಬರ್ ತಿಂಗಳಿಡೀ ಕನ್ನಡಬಾವುಟ ಹಾರಿಸುವ ಕುರಿತು ಶೀಘ್ರ ಆದೇಶ ಹೊರಡಿಸಲಾಗುವುದು ತಿಳಿಸಿದ್ದಾರೆ.
ಕನ್ನಡ ಮತ್ತು ಕರ್ನಾಟಕ ಬಗ್ಗೆ ಎಲ್ಲರಿಗೂ ತಿಳಿಯುವಂತೆ ಮಾಡಲು ಖಾಸಗಿ ಮತ್ತು ಸರ್ಕಾರಿ ಕಟ್ಟಡಗಳಲ್ಲಿ ನವೆಂಬರ್ ತಿಂಗಳಿಡೀ ಕನ್ನಡ ಬಾವುಟ ಹಾರಿಸುವಂತೆ ಆದೇಶಿಸುವ ಚಿಂತನೆಯಿದೆ. ಈ ಕುರಿತು ಮುಂದಿನ ಸಚಿವ ಸಂಪುಟದಲ್ಲಿ ಚರ್ಚೆ ನಡೆಸಿ, ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.
ಕನ್ನಡವೇ ಸತ್ಯ, ಕನ್ನಡವೇ ನಿತ್ಯ💛♥️
ಕನ್ನಡ ರಾಜ್ಯೋತ್ಸವ ಪ್ರಯುಕ್ತ ಇಂದು ವಿಧಾನಸೌಧದ ಪಶ್ಚಿಮ ದಿಕ್ಕಿನಲ್ಲಿರುವ ನಾಡದೇವಿ ತಾಯಿ ಭುವನೇಶ್ವರಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದೆ.#ಕನ್ನಡರಾಜ್ಯೋತ್ಸವ pic.twitter.com/i1xX7W87WV
— DK Shivakumar (@DKShivakumar) November 1, 2025








