ನವದೆಹಲಿ:ಭಾಷೆಯ ಹೆಸರಿನಲ್ಲಿ ದೇಶವನ್ನು ವಿಭಜಿಸುವ ಕೆಲಸ ಮಾಡಬಾರದು ಎಂದು ಅಮಿತ್ ಶಾ ಹೇಳಿದ್ದಾರೆ, ಪ್ರಾದೇಶಿಕ ಭಾಷೆಗಳ ಉತ್ತೇಜನಕ್ಕಾಗಿ ಡಿಸೆಂಬರ್ನಿಂದ ರಾಜ್ಯಗಳ ಜತೆ ಅಲ್ಲಿನ ಪ್ರಾದೇಶಿಕ ಭಾಷೆಯಲ್ಲೇ ಪತ್ರ ವ್ಯವಹಾರ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಅದರಂತೆ, ಕರ್ನಾಟಕ ಸರ್ಕಾರದ ಜತೆ ಕನ್ನಡದಲ್ಲಿ, ತಮಿಳುನಾಡು ಸರ್ಕಾರದ ಜತೆ ತಮಿಳು ಹಾಗೂ ಬೇರೆ ಬೇರೆ ರಾಜ್ಯಗಳ ಜತೆ ಅಲ್ಲಿನ ಭಾಷೆಯಲ್ಲೇ ಪತ್ರ ವ್ಯವಹಾರ ನಡೆಯಲಿದೆ ಎಂದು ಅಮಿತ್ ಶಾ ಹೇಳಿದರು.
ಹಿಂದಿ ಹೇರಿಕೆ ಮಾಡಲಾಗುತ್ತಿದೆ ಎಂದು ಆರೋಪಿಸುವವರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಸಭೆಯಲ್ಲಿ ಉತ್ತರ ನೀಡಿದ್ದಾರೆ.
ಬಿಜೆಪಿ ದಕ್ಷಿಣ ಭಾರತದ ಭಾಷೆಗಳನ್ನು ವಿರೋಧಿಸುತ್ತದೆ ಎಂಬ ಆರೋಪಗಳನ್ನು ತಿರಸ್ಕರಿಸಿದ ಅಮಿತ್ ಶಾ, ‘ಅವರು ಏನು ಹೇಳುತ್ತಿದ್ದಾರೆ? ನಾವು ದಕ್ಷಿಣದ ಭಾಷೆಗಳನ್ನು ವಿರೋಧಿಸುತ್ತೇವೆಯೇ? ಇದು ಹೇಗೆ ಸಾಧ್ಯ? ನಾನು ಗುಜರಾತ್‌ನಿಂದ ಬಂದವನು. ನಿರ್ಮಲಾ ಸೀತಾರಾಮನ್ ತಮಿಳುನಾಡಿನವರು. ಹೀಗಿದ್ದಾಗ ನಾವು ಪ್ರಾದೇಶಿಕ ಭಾಷೆಗಳನ್ನು ಹೇಗೆ