ಶಿವಮೊಗ್ಗ : ಕನ್ನಡ ನಾಡು ಸಾಹಿತ್ಯ, ಸಾಂಸ್ಕೃತಿಕ ಹಾಗೂ ಸೌಜನ್ಯತೆಯ ನೆಲವೀಡಾಗಿದ್ದು, ಕನ್ನಡಿಗರು ಎಲ್ಲಾ ಕ್ಷೇತ್ರಗಳಲ್ಲೂ ಅದ್ವಿತೀಯ ಸಾಧನೆ ಮಾಡುತ್ತಿದ್ದಾರೆ ಎಂದು ಸಾಗರ ಉಪವಿಭಾಗಾಧಿಕಾರಿ ವಿರೇಶ್ ಕುಮಾರ್ ತಿಳಿಸಿದರು.
ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ನೆಹರೂ ಮೈದಾನದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ನಗರಸಭೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ 70ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದಂತ ಅವರು, ದೇವರಾಜ ಅರಸು ಅವರು ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ 1973ನೇ ನವೆಂಬರ್ 1ರಂದು ಕರ್ನಾಟಕ ಎಂದು ನಾಮಕರಣಗೊಂಡ ನಮ್ಮ ಕನ್ನಡ ನಾಡು ವಿಶ್ವದಾದ್ಯಂತ ತನ್ನ ಶ್ರೇಷ್ಟತೆಯ ಮೂಲಕ ಜನಮಾನಸದಲ್ಲಿ ನೆಲೆಯೂರಿದೆ. ಕನ್ನಡಿಗರು ಎಂಬ ಹೆಮ್ಮೆ ಸದಾ ನಮ್ಮಲ್ಲಿ ಇರಬೇಕು. ನಾಡುನುಡಿ ಅಸ್ತಿತ್ವವನ್ನು ಉಳಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬ ಕನ್ನಡಿಗ ಕಟಿಬದ್ದರಾಗಿರಬೇಕು. ರಾಜ್ಯ ಸರ್ಕಾರ ಕನ್ನಡ ಭಾಷೆ ಬೆಳವಣಿಗೆಗೆ ವಿಶೇಷ ಆದ್ಯತೆ ನೀಡುತ್ತಿದೆ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು, ಕನ್ನಡ ಭಾಷೆ ಅತ್ಯಂತ ಸುಂದರ ಭಾಷೆ. ಮೈಸೂರಿನ ನಂತರ ಸಾಗರ ಸಾಂಸ್ಕೃತಿಕವಾಗಿ ಅತ್ಯಂತ ಶ್ರೀಮಂತ ತಾಲ್ಲೂಕು ಎಂಬ ಹೆಗ್ಗಳಿಕೆ ಹೊಂದಿದೆ. ಡಾ. ರಾಜಕುಮಾರ್ ನೇತೃತ್ವದಲ್ಲಿ ನಡೆದ ಗೋಕಾಕ ಚಳುವಳಿ ನಂತರ ಕನ್ನಡ ನಾಡು ಅತ್ಯಂತ ಸದೃಢವಾಗಿದೆ. ಸಾಗರ ತಾಲ್ಲೂಕಿನ ಜಾನಪದ ಕಲಾವಿದ ಬಿ.ಟಾಕಪ್ಪ ಸೇರಿ ಜಿಲ್ಲೆಯ ಮೂವರಿಗೆ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದ್ದು, ಅವರಿಗೆ ಕ್ಷೇತ್ರದ ಜನತೆ ಪರವಾಗಿ ಅಭಿನಂದನೆ ಸಲ್ಲಿಸುತ್ತಿದ್ದೇನೆ ಎಂದ ಅವರು, ಸಾಗರ ಕ್ಷೇತ್ರದ ಅಭಿವೃದ್ದಿಗೆ ಹೆಚ್ಚಿನ ಆದ್ಯತೆ ಸರ್ಕಾರ ನೀಡುತ್ತಿದೆ. ತಾಲ್ಲೂಕಿನ ಶಿರವಂತೆ, ತ್ಯಾಗರ್ತಿ, ಬ್ಯಾಕೋಡು ಭಾಗಕ್ಕೆ ಕೆಪಿಎಸ್‌ಸಿ ಶಾಲೆ ಮಂಜೂರಾಗಿದೆ. ಆವಿನಹಳ್ಳಿ, ಹಿರೇಬಿಲಗುಂಜಿ, ಕಾನ್ಲೆ, ಭೀಮನೇರಿ, ಕುದುರೂರು ಗ್ರಾಮಗಳನ್ನು ಕಾಯಕ ಗ್ರಾಮ ಎಂದು ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು.
ಈ ವೇಳೆ ಸಾಗರ ನಗರಸಭೆ ಅಧ್ಯಕ್ಷೆ ಮೈತ್ರಿ ವಿರೇಂದ್ರ ಪಾಟೀಲ್ ಮಾತನಾಡಿದರು. ಉಪಾಧ್ಯಕ್ಷೆ ಸವಿತಾ ವಾಸು, ತಹಶೀಲ್ದಾರ್ ರಶ್ಮಿ ಜೆ.ಎಚ್., ಪೌರಾಯುಕ್ತ ಎಚ್.ಕೆ.ನಾಗಪ್ಪ, ಕಾರ್ಯನಿರ್ವಾಹಣಾಧಿಕಾರಿ ಶಿವಪ್ರಕಾಶ್ ಬಿ.ಎಲ್., ಕ್ಷೇತ್ರ ಶಿಕ್ಷಣಾಧಿಕಾರಿ ಪರಶುರಾಮಪ್ಪ, ಎಎಸ್‌ಪಿ ಡಾ. ಬೆನಕ ಪ್ರಸಾದ್ ಇನ್ನಿತರರು ಹಾಜರಿದ್ದರು. ನಂತರ ಆರಕ್ಷಕ, ಗೃಹರಕ್ಷಕ, ಎನ್.ಸಿ.ಸಿ. ಸೇರಿ ವಿವಿಧ ತಂಡಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು.
ಅಕ್ಟೋಬರ್‌ನಲ್ಲಿ ಭಾರತದಲ್ಲಿ GST ಸಂಗ್ರಹ ಶೇ.4.6ರಷ್ಟು ಏರಿಕೆಯಾಗಿ 1.95 ಲಕ್ಷ ಕೋಟಿ ಕಲೆಕ್ಷನ್ | GST Collection
BIG NEWS : ಕರ್ನಾಟಕದ ಮದರಸಾಗಳಲ್ಲಿ `ಕನ್ನಡ’ ಕಲಿಸಲು ಆದ್ಯತೆ : CM ಘೋಷಣೆ








