ಬೆಂಗಳೂರು : ಪ್ರತಿಷ್ಟಿತ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆಗೆ ಸಾಧಕರಿಗೆ ನಿಗದಿಪಡಿಸಲಾದ ವಯೋಮಿತಿಯನ್ನು ತೆರವುಗೊಳಿಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದರು.
2022 ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ವಿವಿಧ ಸಾಧಕರಿಗೆ ರಾಜ್ಯ ಸರ್ಕಾರ ಇಂದು ಪ್ರದಾನ ಮಾಡಿದೆ. ನವೆಂಬರ್ 1 ರಾಜ್ಯೋತ್ಸವದ ಹಿನ್ನೆಲೆ ಇಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ67 ಮಂದಿ ಸಾಧಕರಿಗೆ ಸಿಎಂ ಬಸವರಾಜ ಬೊಮ್ಮಾಯಿ ಪ್ರಶಸ್ತಿ ಪ್ರದಾನ ಮಾಡಿದರು.
ನಂತರ ಮಾತನಾಡಿದ ಸಿಎಂ ಬೊಮ್ಮಾಯಿ ‘ಸಾಧನೆಗೂ ವಯಸ್ಸಿಗೂ ಯಾವುದೇ ಸಂಬಂಧ ಇಲ್ಲ, ಪ್ರತಿಷ್ಟಿತ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆಗೆ ಸಾಧಕರಿಗೆ ನಿಗದಿಪಡಿಸಲಾದ ವಯೋಮಿತಿಯನ್ನು ತೆರವುಗೊಳಿಸಲಾಗುವುದು, ಪ್ರಶಸ್ತಿ ಆಯ್ಕೆ ಮಾಡುವ ಸಾಧಕರಿಗೆ ವಯಸ್ಸು ಮಿತಿಗೊಳಿಸಿರುವುದು ತಪ್ಪು ಎಂದರು. ಅದೇ ರೀತಿ ಪ್ರಶಸ್ತಿಗೆ ಭಾಜನರಾದ ಸಾಧಕರಿಂದ ಅಭಿಪ್ರಾಯ ಮತ್ತು ಅನುಭವಗಳನ್ನು ಒಳಗೊಂಡ ಮಾರ್ಗದರ್ಶಿ ಕೃತಿ ಹೊರ ತರಲಾಗುವುದು’ ಎಂದು ಹೇಳಿದರು.
ಇಸ್ರೋ ಮಾಜಿ ನಿರ್ದೆಶಕ ಶಿವನ್, ಸಾಹಿತಿ ಆ.ರಾ. ಮಿತ್ರ, ನಟರಾದ ದತ್ತಣ್ಣ, ಸಿಹಿಕಹಿ ಚಂದ್ರು, ನಿವೃತ್ತ ಐಎಎಸ್ ಅಧಿಕಾರಿ ಎಂ.ಮದನ್ ಗೋಪಾಲ್, ಶಿಕ್ಷಣ ತಜ್ಞ ಸುಬ್ಬರಾವ್ ಶೆಟ್ಟಿ ಸೇರಿ 67 ಮಂದಿ ಸಾಧಿಕರಿಗೆ ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗಿದೆ.
ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಗಣ್ಯ ವ್ಯಕ್ತಿಗಳಿಗೆ ಪ್ರತಿ ವರ್ಷವು ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡುವ ಸಂಪ್ರದಾಯವನ್ನು ಸರ್ಕಾರವು ಅನುಸರಿಸಿಕೊಂಡು ಬಂದಿದ್ದು, ಅದರಂತೆ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿರುವ ಗಣ್ಯರಿಗೆ 2022ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಈ ವೇಳೆ ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನೀಲ್ ಕುಮಾರ್ ಮತ್ತಿತರರಿದ್ದರು.
ಚಂದ್ರು ಎಲ್ಲಿದ್ದೀಯ ಬಾರೋ: ಅಣ್ಣನ ಮಗನನ್ನು ನೆನೆದು ಬಿಕ್ಕಿ ಬಿಕ್ಕಿ ಕಣ್ಣೀರಿಟ್ಟ ‘ಶಾಸಕ ಎಂ.ಪಿ ರೇಣುಕಾಚಾರ್ಯ’