ಬೆಂಗಳೂರು: 67ನೇ ಕನ್ನಡ ರಾಜ್ಯೋತ್ಸವದ ( Kannada Rajyotsava ) ಅಂಗವಾಗಿ, ಈ ಬಾರಿ 67 ಸಾಧಕರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತಿದ್ದು, ಇಂದು ಸಂಜೆ 6 ಗಂಟೆಯೊಳಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿ ಪ್ರಕಟ ಮಾಡಲಾಗುತ್ತದೆ.
ಇಂದು ಸಂಜೆ 6 ಗಂಟೆಯೊಳಗೆ ರಾಜ್ಯ ಸರ್ಕಾರ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿಯನ್ನು ಅಧಿಕೃತವಾಗಿ ಬಿಡುಗಡೆ ಮಾಡಲಿದೆ. ಈ ಬಾರಿ 67 ಸಾಧಕರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗುತ್ತಿದೆ. ನವೆಂಬರ್ 1 ಕನ್ನಡ ರಾಜ್ಯೋತ್ಸವದಂದು ಪ್ರಶಸ್ತಿ ಪುರಸ್ಕೃತ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.
ಮತ್ತೊಂದೆಡೆ ನವೆಂಬರ್ 1ರಂದು ಮರಣೋತ್ತರವಾಗಿ ದಿವಂಗತ ನಟ ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತಿದೆ. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಸೂಪರ್ ಸ್ಟಾರ್ ರಜನಿಕಾಂತ್ ಹಾಗೂ ಜೂನಿಯರ್ ಎಂಟಿಆರ್ ಗೆ ರಾಜ್ಯ ಸರ್ಕಾರ ಆಹ್ವಾನ ನೀಡಲಾಗಿದೆ. ಇನ್ನೂ ನಟ ಪುನೀತ್ ರಾಜ್ ಕುಮಾರ್ ಅವರಿಗೆ ನೀಡಲಾಗುತ್ತಿರುವಂತ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭವನ್ನು ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್ ಮೇಲೆ ಅದ್ಧೂರಿಯಾಗಿ ಆಯೋಜಿಸಲಾಗುತ್ತಿದೆ.
ಮೊಬೈಲ್ ಕಳೆದೋದ್ರೆ ಡೋಂಟ್ ವರಿ: ಇಲ್ಲಿದೆ ನೋಡಿ ಪರಿಹಾರ | Mobile Theft Alert
Women’s Constables ; ಗುಡ್ ನ್ಯೂಸ್.. 2626 ‘ಮಹಿಳಾ ಕಾನ್ಸ್ಟೇಬಲ್’ ಹುದ್ದೆಗಳಿಗೆ ಅಧಿಸೂಚನೆ ಬಿಡುಗಡೆ