ಬೆಂಗಳೂರು: ನಗರದ ಈದ್ಗಾ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆ ಆಚರಣೆಯ ಬಳಿಕ, ಇದೀಗ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಬೇಕು ಎನ್ನುವ ಕೂಗು ಎದ್ದಿದೆ. ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಇದಕ್ಕೆ ಅವಕಾಶ ನೀಡಬೇಕೋ ಅಥವಾ ಬೇಡವೋ ಎನ್ನುವ ಬಗ್ಗೆ ಕಾನೂನು ತಜ್ಞರ ಮೊರೆಯನ್ನು ಹೋಗಲಿದೆ.
ಈ ಬಗ್ಗೆ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಇಂದು ಮಾತನಾಡಿದಂತ ಕಂದಾಯ ಸಚಿವ ಆರ್ ಅಶೋಕ್ ( Revenue Minister R Ashok ), ಈದ್ಗಾ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ( Kannada Rajyotsava Celebration ) ಸಂಬಂಧ ಅಡ್ವೋಕೇಟ್ ಜನರಲ್ ಜೊತೆಗೆ ಮಾತನಾಡಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದರು.
ಇನ್ನೂ ರಾಜ್ಯ ಸರ್ಕಾರದಿಂದ ಈದ್ಗಾ ಮೈದಾನದಲ್ಲಿ ( Edga Maidan ) ಕನ್ನಡ ರಾಜ್ಯೋತ್ಸವ ಆಚರಣೆಗೆ ಅವಕಾಶ ನೀಡಬೇಕೋ ಅಥವಾ ಬೇಡವೋ ಎನ್ನುವ ಬಗ್ಗೆ ಕಾನೂನು ಸಲಹೆ ಪಡೆದು, ಮುಂದಿನ ನಿರ್ಧಾರವನ್ನು ಸರ್ಕಾರ ಪ್ರಕಟಿಸಲಿದೆ ಎಂದು ಹೇಳಿದರು.
ಬೆಂಗಳೂರಿನ ಏರ್ ಪೋರ್ಟ್ ಫ್ಲೈ ಓವರ್ ನಲ್ಲಿ ಭೀಕರ ಅಪಘಾತ : ಇಬ್ಬರು ಬೈಕ್ ಸವಾರರ ದುರ್ಮರಣ