Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಅರ್ಹರು ಕೈಬಿಡದಂತೆ ಚುನಾವಣಾ ಆಯೋಗಕ್ಕೆ MLC ರಮೇಶ್ ಬಾಬು ಪತ್ರ

ಸ್ಮಾರ್ಟ್‌ಫೋನ್ ಖರೀದಿಸುವಾಗ ಜಾಗ್ರತೆ! ಅಸಲಿ ಮತ್ತು ನಕಲಿ ಮೊಬೈಲ್ ಪತ್ತೆಹಚ್ಚಲು ಪ್ರತಿಯೊಬ್ಬರೂ ತಿಳಿಯಬೇಕಾದ 5 ಸುಲಭ ವಿಧಾನಗಳು ಇಲ್ಲಿವೆ!

BREAKING: ಬೆಳ್ಳಿಯ ಆಮದಿಗೆ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ | silver bar imports

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಐಟಿ, ಬಿಟಿ ಸೇರಿದಂತೆ ಶಾಲಾ, ಕಾಲೇಜುಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ: ಡಿಸಿಎಂ DKS ಸೂಚನೆ
KARNATAKA

ಐಟಿ, ಬಿಟಿ ಸೇರಿದಂತೆ ಶಾಲಾ, ಕಾಲೇಜುಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ: ಡಿಸಿಎಂ DKS ಸೂಚನೆ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: “ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯ ಶಾಲಾ, ಕಾಲೇಜು, ಐಟಿ, ಬಿಟಿ ಸಂಸ್ಥೆಗಳು, ಕಾರ್ಖಾನೆಗಳು ಇತರೇ ಖಾಸಗಿ ಸಂಸ್ಥೆಗಳು ಸೇರಿದಂತೆ ಎಲ್ಲರೂ ನವೆಂಬರ್ 1 ರಂದು ಕರ್ನಾಟಕ ರಾಜ್ಯೋತ್ಸವವನ್ನು ಕನ್ನಡದ ಧ್ವಜಾರೋಹಣ ಮಾಡುವ ಮೂಲಕ ಆಚರಿಸಬೇಕು ಎಂದು ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಸದಾಶಿವನಗರ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಜೊತೆಗೆ ಮಾತನಾಡಿದಂತ ಅವರು, ಮುಂದಿನ ಪೀಳಿಗೆಗೆ ಕನ್ನಡ ಭಾಷೆಯ ಮಹತ್ವ ತಿಳಿಸಲು, ಸರ್ಕಾರಿ ಹಾಗೂ ಖಾಸಗಿ ಶಾಲೆ ಗಳಲ್ಲಿ ಕಾರ್ಯಕ್ರಮ ಆಯೋಜಿಸಬೇಕು. ಇದರ ಜತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಬೆಂಗಳೂರು ನಗರದಲ್ಲಿ ಶೇ.50 ರಷ್ಟು ಮಂದಿ ರಾಜ್ಯದ ಹೊರಗಿನವರು. ಅವರುಗಳು ಕನ್ನಡ ಕಲಿಯಲು ಅವಕಾಶ ಕಲ್ಪಿಸಬೇಕಿದೆ. ಈ ದೃಷ್ಟಿಯಿಂದ ವಿಜಯದಶಮಿ ದಿನದಂದು ಈ ತೀರ್ಮಾನ ಪ್ರಕಟಿಸುತ್ತಿದ್ದೇನೆ ಎಂದರು.

“ಐಟಿ, ಬಿಟಿ ಹಾಗೂ ಕಾರ್ಖಾನೆಯವರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮಾಡದಿದ್ದರೂ, ಕನ್ನಡ ಬಾವುಟ ಹಾರಿಸಿ ರಾಜ್ಯೋತ್ಸವ ಆಚರಿಸಬೇಕು. ರಾಜ್ಯೋತ್ಸವ ಆಚರಣೆ ಮಾಡುವ ಸಂಸ್ಥೆಗಳು ಬಿಬಿಎಂಪಿಯಿಂದ ನೀಡುವ ದೂರವಾಣಿ ಸಂಖ್ಯೆಗೆ ವಾಟ್ಸಪ್ ಮೂಲಕ ಫೋಟೋಗಳನ್ನು ರವಾನಿಸಬೇಕು” ಎಂದು ತಿಳಿಸಿದರು.

“ಈ ಬಾರಿ ರಾಜ್ಯದೆಲ್ಲೆಡೆ 70ನೇ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುತ್ತಿದೆ. ಕನ್ನಡದ ನೆಲದಲ್ಲಿ ಕನ್ನಡ ಕಲಿಯಬೇಕಾಗಿರುವುದು ಪ್ರತಿಯೊಬ್ಬರ ಕರ್ತವ್ಯ. ಬೆಂಗಳೂರು ನಗರ ಜಿಲ್ಲಾ ಉಸ್ತುವಾರಿ ಸಚಿವನಾಗಿ ನಾನು ಈ ತೀರ್ಮಾನ ಪ್ರಕಟಿಸುತ್ತಿದ್ದೇನೆ” ಎಂದು ತಿಳಿಸಿದರು.

ಬೆದರಿಕೆ ಹಾಕಿದರೆ ಕಾನೂನು ಕ್ರಮ:

“ಎಲ್ಲಾ ಸಂಸ್ಥೆಗಳು ಕಡ್ಡಾಯವಾಗಿ ಕರ್ನಾಟಕ ರಾಜ್ಯೋತ್ಸವ ಆಚರಣೆ ಮಾಡಬೇಕು ಎಂದು ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ಹೀಗಾಗಿ ಯಾವುದೇ ಕನ್ನಡಪರ ಸಂಘಟನೆ ಅಥವಾ ಇತರರು ಯಾವುದೇ ಸಂಸ್ಥೆಗೆ ಆಚರಣೆ ಬಗ್ಗೆ ಬೆದರಿಕೆ ಹಾಕುವಂತಿಲ್ಲ. ತೊಂದರೆ ನೀಡುವಂತಿಲ್ಲ. ಒಂದು ವೇಳೆ ತೊಂದರೆ ನೀಡಿದರೆ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ” ಎಂದು ಎಚ್ಚರಿಕೆ ನೀಡಿದರು.

ನಿಮ್ಮ ನೇತೃತ್ವದಲ್ಲಿ ಕೊರೋನಾ ಹಗರಣ ತನಿಖೆಗೆ ಉಪ ಸಮಿತಿ ರಚನೆಯಾಗಿದ್ದು, ಯಾವಾಗಿನಿಂದ ತನಿಖೆ ಆರಂಭಿಸುತ್ತೀರಿ ಎಂದು ಕೇಳಿದಾಗ, “ಗುರುವಾರದಂದು ಈ ಬಗ್ಗೆ ತೀರ್ಮಾನವಾಗಿದೆ. ಮುಂದೆ ಈ ಬಗ್ಗೆ ಮಾಹಿತಿ ನೀಡುತ್ತೇನೆ” ಎಂದು ತಿಳಿಸಿದರು.

ಕೇಂದ್ರದಿಂದ ಜಿಎಸ್ ಟಿ ಪಾಲು ಹಂಚಿಕೆ ಬಗ್ಗೆ ಕೇಳಿದಾಗ, “ವಿಜಯದಶಮಿ ನಂತರ ಈ ವಿಚಾರವಾಗಿ ಮಾತನಾಡುತ್ತೇನೆ” ಎಂದು ತಿಳಿಸಿದರು.

ರಾಜ್ಯದ ಜನತೆಗೆ ವಿಜಯ ದಶಮಿ ಶುಭಾಶಯಗಳು:

“ಕರ್ನಾಟಕ ರಾಜ್ಯದ ಜನತೆಗೆ ವಿಜಯ ದಶಮಿ ಹಬ್ಬದ ಶುಭಾಶಯಗಳು. ಈ ಬಾರಿ ಮೈಸೂರು ದಸರಾ ಕಾರ್ಯಕ್ರಮವನ್ನು ಬಹಳ ವಿಜೃಂಭಣೆಯಿಂದ ಆಚರಣೆ ಮಾಡಲಾಗುತ್ತಿದೆ. ಮೈಸೂರು ದಸರಾ ಕಾರ್ಯಕ್ರಮಕ್ಕೆ ಜನ ಸಾಗರವೇ ಹರಿದುಬಂದಿದೆ. ಮೈಸೂರು ದಸರಾ ವೀಕ್ಷಣೆಗೆ ಆಗಮಿಸಿರುವ ಪ್ರತಿಯೊಬ್ಬರಿಗೂ ಅಭಿನಂದನೆಗಳು” ಎಂದು ಶುಭ ಕೋರಿದರು.

ಮತ್ತೆ ಕೇಂದ್ರ ಸರ್ಕಾರದಿಂದ ತೆರಿಗೆ ಪಾಲು ಬಿಡುಗಡೆಯಲ್ಲಿ ಅನ್ಯಾಯ: ಕನ್ನಡಿಗರನ್ನು ಕೆಣಕುತ್ತಿದೆ: ಡಿ.ಕೆ ಸುರೇಶ್ ಆಕ್ರೋಶ

BREAKING: ಜಪಾನ್ ನ ‘ನಿಹಾನ್ ಹಿಡಾಂಕ್ಯೊ’ಗೆ ಪ್ರತಿಷ್ಠಿತ ‘2024ರ ನೊಬೆಲ್ ಶಾಂತಿ ಪ್ರಶಸ್ತಿ’ ಘೋಷಣೆ | 2024 Nobel Peace Prize

Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಅರ್ಹರು ಕೈಬಿಡದಂತೆ ಚುನಾವಣಾ ಆಯೋಗಕ್ಕೆ MLC ರಮೇಶ್ ಬಾಬು ಪತ್ರ

2 Mins Read

ಬೆಲೆ ಏರಿಕೆ ವಿರುದ್ಧ ಮಂಡ್ಯದಲ್ಲಿ ವಾಟಾಳ್ ನಾಗರಾಜ್ ಎತ್ತಿನಗಾಡಿ ಚಳುವಳಿ: ‘ಕರ್ನಾಟಕ ಬಂದ್’ ಎಚ್ಚರಿಕೆ!

2 Mins Read

ಮಂಡ್ಯದ ಗೆಜ್ಜಲಗೆರೆ ಹೋರಾಟ: ರೈತ ಮುಖಂಡರ ಜೊತೆಗೆ ಶಾಸಕ ಕೆ.ಎಂ. ಉದಯ್ ಚರ್ಚೆ

2 Mins Read
Recent News

ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಅರ್ಹರು ಕೈಬಿಡದಂತೆ ಚುನಾವಣಾ ಆಯೋಗಕ್ಕೆ MLC ರಮೇಶ್ ಬಾಬು ಪತ್ರ

ಸ್ಮಾರ್ಟ್‌ಫೋನ್ ಖರೀದಿಸುವಾಗ ಜಾಗ್ರತೆ! ಅಸಲಿ ಮತ್ತು ನಕಲಿ ಮೊಬೈಲ್ ಪತ್ತೆಹಚ್ಚಲು ಪ್ರತಿಯೊಬ್ಬರೂ ತಿಳಿಯಬೇಕಾದ 5 ಸುಲಭ ವಿಧಾನಗಳು ಇಲ್ಲಿವೆ!

BREAKING: ಬೆಳ್ಳಿಯ ಆಮದಿಗೆ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ | silver bar imports

Shocking: ಕೇವಲ 2,000 ರೂ. ಮನೆ ಬಾಡಿಗೆ ಕೊಡಲಾಗದಿದ್ದಕ್ಕೆ ಪತ್ನಿ, ಅಪ್ರಾಪ್ತ ಮಗಳ ಮೇಲಿನ ಅತ್ಯಾಚಾರಕ್ಕೆ ಸಾಥ್ ನೀಡಿದ ಪಾಪಿ ಪತಿ!

State News
KARNATAKA

ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಅರ್ಹರು ಕೈಬಿಡದಂತೆ ಚುನಾವಣಾ ಆಯೋಗಕ್ಕೆ MLC ರಮೇಶ್ ಬಾಬು ಪತ್ರ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಕೇಂದ್ರ ಚುನಾವಣಾ ಆಯೋಗವು ಮೂರನೇ ಹಂತದ ವಿಶೇಷ ಸಮಗ್ರ ಪರಿಷ್ಕರಣೆ (SIR) ಅಡಿಯಲ್ಲಿ ದೇಶದ 16 ರಾಜ್ಯಗಳು ಹಾಗೂ…

ಬೆಲೆ ಏರಿಕೆ ವಿರುದ್ಧ ಮಂಡ್ಯದಲ್ಲಿ ವಾಟಾಳ್ ನಾಗರಾಜ್ ಎತ್ತಿನಗಾಡಿ ಚಳುವಳಿ: ‘ಕರ್ನಾಟಕ ಬಂದ್’ ಎಚ್ಚರಿಕೆ!

ಮಂಡ್ಯದ ಗೆಜ್ಜಲಗೆರೆ ಹೋರಾಟ: ರೈತ ಮುಖಂಡರ ಜೊತೆಗೆ ಶಾಸಕ ಕೆ.ಎಂ. ಉದಯ್ ಚರ್ಚೆ

ಬಿಡದಿ ಟೌನ್‌ಶಿಪ್ ಪ್ರಾಜೆಕ್ಟ್ ಬಿಟ್ಟುಬಿಡಿ: ಹೆಚ್.ಡಿ. ಕುಮಾರಸ್ವಾಮಿ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯಗೆ ಮಾಜಿ ಪ್ರಧಾನಿ ಹೆಚ್‌ಡಿಡಿ ಪತ್ರ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.