ಬೆಂಗಳೂರು: ಬಾರ್ ಮತ್ತು ವೈನ್ ಸ್ಟೋರ್ಗಳಲ್ಲಿ ತಾಯಿ ಭುವನೇಶ್ವರಿಯ ದೇವಿಯ ಭಾವಚಿತ್ರಗಳನ್ನು ಅಬಕಾರಿ ಇಲಾಖೆ ಹಾಗೂ ಪರಿಷತ್ತಿನ ಹೆಸರಿನಲ್ಲಿ ಮಾರಾಟ ಮಾಡುತ್ತಿರುವ ಸುದ್ದಿ ಕನ್ನಡ ಸಾಹಿತ್ಯ ಪರಿಷತ್ತಿನ ಗಮನಕ್ಕೆ ಬಂದಿದೆ. ಈ ಕೃತ್ಯ ಮಾಡುವರ ವಿರುದ್ಧ ಕನ್ನಡ ಸಾಹಿತ್ಯ ಪರಿಷತ್ತು ಸೂಕ್ತ ಕಾನೂನು ಕ್ರಮಕ್ಕೆ ಮುಂದಾಗಿದೆ, ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ತಿಳಿದ್ದಾರೆ.
BREAKING NEWS: ಮಳೆ ಮಧ್ಯೆ ಪುನೀತ್ ರಾಜಕುಮಾರ್ಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ Puneeth Rajkumar
ಖ್ಯಾತ ಚಿತ್ರ ಕಲಾವಿದ ಬಿ.ಕೆ.ಎಸ್. ಶರ್ಮಾ ಅವರು ಚಿತ್ರಿಸಿದ ತಾಯಿ ಭುವನೇಶ್ವರಿಯ ಭಾವಚಿತ್ರ ಕನ್ನಡ ಸಾಹಿತ್ಯ ಪರಿಷತ್ತು ಕನ್ನಡಿಗರ ಒತ್ತಾಸೆಯಂತೆ ಮಾರಾಟ ಮಳಿಗೆಯಲ್ಲಿ ಮಾರಾಟಕ್ಕಿದೆ. ಜೊತೆಗೆ ಅಂತರ್ಜಾಲ ತಾಣಗಳಲ್ಲಿ ಎಲ್ಲರ ಕೈಗೆಟಕುವ ರೀತಿಯಲ್ಲಿ ಲಭ್ಯವಿದೆ. ಇದನ್ನು ಸಹ ಕೆವಲರು ಡೌನ್ಲೋಡ್ ಮಾಡಿ ಕೆಲವುಕಡೆಗಳಲ್ಲಿ ಹಂಚಿದ್ದು ಕನ್ನಡ ಸಾಹಿತ್ಯ ಪರಿಷತ್ತಿಗೆ ಬಂದಿತ್ತು. ಇದನ್ನೆ ಕೆಲವು ಸಮಾಜ ಘಾತುಕರು ಕನ್ನಡದ ಹೆಸರಿನಲ್ಲಿ ತಾಯಿ ಭುವನೇಶ್ವರಿಯ ಭಾವಚಿತ್ರಗಳನ್ನು ಬಾರ್ ಗಳಿಗೆ ಮಾರಾಟ ಮಾಡುತ್ತಿದ್ದಾರೆ. ಇನ್ನೂ ಕೆಲವು ಕಡೆಗಳಲ್ಲಿ ಅಬಕಾರಿ ಇಲಾಖೆಯವರೇ ಮಾರಿದ್ದಾರೆ ಎನ್ನುವ ಮಾಹಿತಿಗಳು ಮಾದ್ಯಮಗಳಲ್ಲಿ ಸುದ್ದಿಯಾಗುತ್ತಿದೆ.
BREAKING: ಜೆಡಿಎಸ್ ಪಂಚರತ್ನ ರಥಯಾತ್ರೆ ಒಂದು ವಾರ ಮುಂದಕ್ಕೆ – ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ
ಕನ್ನಡ ಸಾಹಿತ್ಯ ಪರಿಷತ್ತಿಗೆ ನಾಡಿನಲ್ಲಿ ಅಪಾರವಾದ ಗೌರವ ಮತ್ತು ಜವಾಬ್ದಾರಿ ಇದೆ. ಈ ಹಿನ್ನೆಲೆಯಲ್ಲಿ ವಿಷಯ ಅರಿತ ತಕ್ಷಣ ಬೆಂಗಳೂರು ಪೊಲೀಸ್ ಆಯುಕ್ತರಿಗೆ ಹಾಗೂ ಅಬಕಾರಿ ಆಯುಕ್ತರಿಗೆ ಕನ್ನಡ ಸಾಹಿತ್ಯ ಪರಿಷತ್ತು ದೂರು ನೀಡಿದ್ದು, ತಕ್ಷಣ ಕನ್ನಡ ತಾಯಿ ಭುವನೇಶ್ವರಿಯ ಭಾವಚಿತ್ರ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಹೆಸರನ್ನು ದುರುಪಯೋಗ ಮಾಡಿಕೊಳ್ಳುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಕನ್ನಡಿಗರ ಭಾವನೆಗಳ ಜೊತೆ ಆಟವಾಡುತ್ತಿರುವವರನ್ನು ಹುಡುಕಿ ಕನೂನು ಕ್ರಮ ಕೈಗೊಳ್ಳಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ತು ದೂರು ನೀಡಿದೆ ಎಂದು ತಿಳಿಸಿದ್ದಾರೆ.
‘ಪ್ರಾಮಾಣಿಕ ಅಭ್ಯರ್ಥಿಗಳ ನೋವು ಆಲಿಸದೇ ಪೊಲೀಸರನ್ನು ಬಿಟ್ಟು ಹೊಡೆಸುತ್ತೀರಾ ಗೃಹ ಸಚಿವರೇ : ಕಾಂಗ್ರೆಸ್ ಕಿಡಿ
ಕನ್ನಡ ಸಾಹಿತ್ಯ ಪರಿಷತ್ತಿನ ಹೆಸರನ್ನು ಅಥವಾ ಮಾತೆ ಭುವನೇಶ್ವರಿಯನ್ನು ಅವಮಾನ ಮಾಡುವದನ್ನು ಯಾವೊಬ್ಬ ಕನ್ನಡಿಗನು ಸಹಿಸುವುದಿಲ್ಲ. ಅದೇ ರೀತಿ ಕನ್ನಡ ಸಾಹಿತ್ಯ ಪರಿಷತ್ತು ಇಂಥ ಅಸಂಬದ್ಧ ವ್ಯಕ್ತಿಗಳು ಯಾರೇ ಆದರೂ ಅವರ ವಿರುದ್ಧ ಕ್ರಮ ನಡೆಯಲೇ ಬೇಕು ಎನ್ನುವುದು ನಮ್ಮ ಮುಖ್ಯ ಉದ್ದೇಶ ಎಂದು ಹೇಳಿದ್ದಾರೆ.