BIG BREAKING NEWS : ಖ್ಯಾತ ಸಾಹಿತಿ ಡಾ.ಸಿದ್ದಲಿಂಗಯ್ಯ ನಿಧನ – #1 Latest News Updates Portal – 24×7 | Kannada News Now

Kannada news, Kannadanewsnow, News in Kannada, Kannada, ಕನ್ನಡ ವಾರ್ತೆಗಳು, ಕನ್ನಡ ಸುದ್ದಿಗಳು, kannada online news portal, Kannada news online, Movie News in Kannada, Sports News in Kannada, Business . politics News in Kannada, jobs News in Kannada, education News in Kannada, tourism News in Kannada, lifestyle News in Kannada, business News in Kannada

suvarna news live, public tv kannada news live, news18 kannada live, public news live, public tv news, tv5 kannada news live, yupptv kannada public tv live, btv kannada live, ಕನ್ನಡ ವಾರ್ತೆಗಳು, kannada online news, Kannada news online portal, Movie News in Kannada, Sports News in Kannada, Business news, politics News in Kannada, jobs News in Kannada, education News in Kannada, tourism News in Kannada, lifestyle News in Kannada, business News in Kannada

kannada news now, kannada news 24x7, online Kannada Newspaper, Online Kannada news portal, kannada live news updates, latest sandalwood cinema News, controversial news, gossips coverage in karnataka, gossips news in Kannada, all Kannada News updates, current Affairs in Karnataka, political news in kannada, news from india in Kannada language, Insurance, Gas/Electricity, Loans, Mortgage, Attorney, Lawyer , Donate, , Conference Call, Degree, Credit, credit card, car loans, home appliances, flipkart home appliances, flipkart , amazon home appliances, online shoping, cricket, onlinegame, medicare, weight loss, hairloss, helthtips, weight loss, online classes, Snapdeal., eBay, Myntra. Shopclues. breaking news, kannada latest news, kannada news, kannada news live, kannada online news, kannadanewsnow.com, kannadanewsnowdotcom, kanndanew newsnow dot com, karnataka latest news, karnataka news, latest news. indianews. Narendra Damodardas Modi, india breaking news, coronavirus, covid 19 india, yeddyurappa, siddaramaiah, Politicians in India, Current affairs, Elections, Political News, Current Affairs politics, Rahul Gandhi, Indian National Congress, Amit Shah, Bharatiya Janata Party, Priyanka Gandhi, Mamata Banerjee All India Trinamool Congress, Arvind Kejriwal, Aam Aadmi Party, Asaduddin Owaisi, All India Majlis-e-Ittehadul Muslimeen, Follow, H D Deve Gowda, Janata Dal (Secular), Harsh Vardhan, Bharatiya Janata Party, KCR, Telangana Rashtra Samithi, Kamal Hassan, Makkal Neethi, MaiamLal, Krishna, Advani, Bharatiya Janata Party, Mamata Banerjee All India Trinamool Congress, Manmohan Singh, Congress, mallikarjun kharge, Indian National Congress, Nirmala Sitharaman, Bharatiya Janata Party, Nitin Gadkari, Bharatiya Janata Party, Raj Thackeray, Maharashtra Navnirman Sena, Uma Bharti, Shivsena, V K Singh, General VK Singh, Sourav Ganguly, MS Dhoni , Virat Kohli, yogi, Adithyanath



KARNATAKA State

BIG BREAKING NEWS : ಖ್ಯಾತ ಸಾಹಿತಿ ಡಾ.ಸಿದ್ದಲಿಂಗಯ್ಯ ನಿಧನ

ಬೆಂಗಳೂರು : ಕೊರೋನಾ ಸೋಂಕಿಗೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ಖ್ಯಾತ ಕವಿ ಡಾ.ಸಿದ್ದಲಿಂಗಯ್ಯ(67) ಚಿಕಿತ್ಸೆ ಫಲಕಾರಿಯಾಗದೇ, ಸಾವನ್ನಪ್ಪಿದ್ದಾರೆ. ಈ ಮೂಲಕ ಕನ್ನಡ ಸಾಹಿತ್ಯ ಲೋಕದ ಕೊಂಡಿಯೊಂದು ಕಳಚಿದಂತೆ ಆಗಿದೆ.

ಕಳೆದ ಮೇ.2ರಂದು ಕೆಮ್ಮ ಹಾಗೂ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದಂತ ಸಾಹಿತಿ ಡಾ.ಸಿದ್ದಲಿಂಗಯ್ಯ ಅವರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿತ್ತು. ಹೀಗಾಗಿ ಚಿಕಿತ್ಸೆಗಾಗಿ ರಂಗದೊರೆ ಆಸ್ಪತ್ರೆ, ಅಪೋಲೋ ಆಸ್ಪತ್ರೆ ಸೇರಿದಂತೆ ಅನೇಕ ಆಸ್ಪತ್ರೆಗಳಿಗೆ ಸುತ್ತಾಡಿದ್ದರೂ ಬೆಡ್ ಸಿಕ್ಕಿರಲಿಲ್ಲ. ಅಂತಿಮವಾಗಿ ಡಿಸಿಎಂ ಡಾ.ಸಿಎನ್ ಅಶ್ವತ್ಥ್ ನಾರಾಯಣಗೆ ವಿಷಯ ತಿಳಿಯುತ್ತಿದ್ದಂತೆ ಕರೆ ಮಾಡಿ, ಬೆಡ್ ವ್ಯವಸ್ಥೆ ಮಾಡಿದ್ದರಿಂದಾಗಿ ಮೇ.3ರಂದು ರಂಗದೊರೆ ಆಸ್ಪತ್ರೆಯಲ್ಲಿ ಕೊರೋನಾ ಸೋಂಕಿನ ಚಿಕಿತ್ಸೆಗಾಗಿ ಬೆಡ್ ದೊರೆತು ಚಿಕಿತ್ಸೆ ಪಡೆಯುತ್ತಿದ್ದರು.

ಮತ್ತೆ ಹೆಚ್ಚಿನ ಚಿಕಿತ್ಸೆಗಾಗಿ ರಂಗದೊರೆ ಆಸ್ಪತ್ರೆಯಿಂದ ಕಳೆದ ಸೋಮವಾರದಂದು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಪಡೆಯುತ್ತಿದ್ದರು. ಕೊರೋನಾ ಸೋಂಕಿನಿಂದ ಗುಣಮುಖರಾಗಿ ಚೇತರಸಿಕೊಂಡರು ಎನ್ನುತ್ತಿರುವಾಗಲೇ, ಇಂದು ಚಿಕಿತ್ಸೆ ಫಲಕಾರಿಯಾಗೇ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ. ಈ ಮೂಲಕ ಖ್ಯಾತ ಕವಿ ಡಾ.ಸಿದ್ದಲಿಂಗಯ್ಯ ಇನ್ನಿಲ್ಲವಾಗಿದ್ದಾರೆ. ಈ ಮೂಲಕ ಸಾಹಿತ್ಯ ಲೋಕದ ಕೊಂಡಿಯೊಂದು ಕಳಚಿದಂತೆ ಆಗಿದೆ.

ಸಾಹಿತಿ ಡಾ.ಸಿದ್ದಲಿಂಗಯ್ಯ ಅವರ ಬದುಕಿನ ಹಿನ್ನೋಟ

ಸಿದ್ಧಲಿಂಗಯ್ಯನವರು ಕನ್ನಡದ ಲೇಖಕರಲ್ಲೊಬ್ಬರು. ‘ದಲಿತ ಕವಿ’ ಎಂದೇ ಪ್ರಸಿದ್ಧರಾದ ಸಿದ್ಧಲಿಂಗಯ್ಯನವರು ದಲಿತ ಹೋರಾಟ ಮತ್ತು ಸಾಮಾಜಿಕ ಸಮಾನತೆಗಾಗಿ ಕಾವ್ಯ ಸಾಹಿತ್ಯಗಳನ್ನು ರಚಿಸಿದ್ದರು. ಕಾವ್ಯ, ನಾಟಕ, ಪ್ರಬಂಧ, ವಿಮರ್ಶೆ, ಸಂಶೋಧನೆ, ಆತ್ಮಕಥನ ಮುಂತಾದ ಪ್ರಕಾರಗಳಲ್ಲಿ ಸಾಹಿತ್ಯ ರಚನೆ ಮಾಡಿದವರು. ಎರಡು ಬಾರಿ ವಿಧಾನಪರಿಷತ್ತಿನ ಸದಸ್ಯರಾಗಿದ್ದರು. ಅಧ್ಯಾಪನ-ಬರವಣಿಗೆಗಳಲ್ಲಿ ತೊಡಗಿಕೊಂಡಿದ್ದವರು.

ಜನನ, ಜೀವನ

ಸಿದ್ಧಲಿಂಗಯ್ಯನವರು ಬೆಂಗಳೂರು ಗ್ರಾಮಾಂತರ ಜಿಲ್ಲೆ ‘ಮಾಗಡಿ’ ತಾಲ್ಲೋಕಿನ ‘ಮಂಚನಬೆಲೆ’ ಗ್ರಾಮದಲ್ಲಿ 1954ರಲ್ಲಿ ಜನಿಸಿದರು. ತಂದೆ ದೇವಯ್ಯ, ತಾಯಿ ಶ್ರೀಮತಿ ವೆಂಕಮ್ಮ. ಮಲ್ಲೇಶ್ವರಂನ ಸರ್ಕಾರಿ ಪ್ರೌಢಶಾಲೆ ಇವರ ವಿದ್ಯಾಕೇಂದ್ರವಾಗಿತ್ತು. ಆ ವೇಳೆಗಾಗಲೇ ಕವಿತೆ ಬರೆವ ಅಭ್ಯಾಸ ಇವರಿಗಿತ್ತು. ವಿದ್ಯಾರ್ಥಿ ದೆಸೆಯಲ್ಲಿಯೇ ಇವರು ಉತ್ತಮ ಭಾಷಣಕಾರರಾಗಿದ್ದರು. ಅಂಬೇಡ್ಕರ್, ಪೆರಿಯಾರ್, ವಸುದೇವಭೂಪಾಲ, ಲೋಹಿಯಾ ಮುಂತಾದವರ ವಿಚಾರಧಾರೆಗಳಿಂದ ಆಕರ್ಷಿತರಾಗಿದ್ದರು.

ಕೃತಿಗಳು

  • ಪಿ.ಎಚ್ ಡಿ ಸಂಶೋಧನಾಪ್ರಬಂಧ – ಗ್ರಾಮ ದೇವತೆಗಳು, 1997

ಕವನ ಸಂಕಲನಗಳು

  1. ಹೊಲೆ ಮಾದಿಗರ ಹಾಡು, 1975
  2. ಮೆರವಣಿಗೆ, 2000
  3. ಸಾವಿರಾರು ನದಿಗಳು, 1979
  4. ಕಪ್ಪು ಕಾಡಿನ ಹಾಡು, 1983
  5. ಆಯ್ದಕವಿತೆಗಳು, 1997
  6. ಅಲ್ಲೆಕುಂತವರೆ
  7. ನನ್ನ ಜನಗಳು ಮತ್ತು ಇತರ ಕವಿತೆಗಳು, 2005
  8. ಸಮಕಾಲೀನ ಕನ್ನಡ ಕವಿತೆ ಭಾಗ-3, 4 (ಸಂಪಾದನೆ ಇತರರೊಂದಿಗೆ), 2003

ವಿಮರ್ಶನಾ ಕೃತಿಗಳು

  1. ಹಕ್ಕಿ ನೋಟ, 1991
  2. ರಸಗಳಿಗೆಗಳು
  3. ಎಡಬಲ
  4. ಉರಿಕಂಡಾಯ, 2009

ಲೇಖನಗಳ ಸಂಕಲನ

  1. ಅವತಾರಗಳು, 1991
  2. ಸದನದಲ್ಲಿ ಸಿದ್ದಲಿಂಗಯ್ಯ ಭಾಗ -1, 1996
  3. ಸದನದಲ್ಲಿ ಸಿದ್ದಲಿಂಗಯ್ಯ ಭಾಗ -2, 2004
  4. ಜನಸಂಸ್ಕೃತಿ, 2007

ನಾಟಕಗಳು

  • ಏಕಲವ್ಯ, 1986
  • ನೆಲಸಮ, 1980
  • ಪಂಚಮ, 1980

ಆತ್ಮಕಥೆ

  • ಊರುಕೇರಿ- ಭಾಗ-1, 1997
  • ಊರುಕೇರಿ- ಭಾಗ-2, 2006

ಗೌರವ, ಪ್ರಶಸ್ತಿಗಳು

  1. ಉತ್ತಮ ಚಲನಚಿತ್ರಗೀತ ರಚನೆಗಾಗಿ ಕರ್ನಾಟಕ ಸರ್ಕಾರ ಪ್ರಶಸ್ತಿ-1984
  2. ರಾಜ್ಯೋತ್ಸವ ಪ್ರಶಸ್ತಿ -ಕರ್ನಾಟಕ ಸರ್ಕಾರ-1986
  3. ಡಾ.ಅಂಬೇಡ್ಕರ್ ಶತಮಾನೋತ್ಸವ ವಿಶೇಷ ಪ್ರಶಸ್ತಿ -1992
  4. ಕರ್ನಾಟಕ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ -1996
  5. ಜಾನಪದ ತಜ್ಞ ಪ್ರಶಸ್ತಿ -2001
  6. 2 ಬಾರಿ ಕರ್ನಾಟಕ ರಾಜ್ಯ ವಿಧಾನ ಪರಿಷತ್ ಸದಸ್ಯ.
  7. ಸಂದೇಶ್ ಪ್ರಶಸ್ತಿ -2001
  8. ಡಾ.ಅಂಬೇಡ್ಕರ್ ಪ್ರಶಸ್ತಿ -2002
  9. ಸತ್ಯಕಾಮ ಪ್ರತಿಷ್ಠಾನ ಪ್ರಶಸ್ತಿ -2002
  10. ಬಾಬುಜಗಜೀವನರಾಮ್ ಪ್ರಶಸ್ತಿ -2005
  11. ನಾಡೋಜ ಪ್ರಶಸ್ತಿ -2007
  12. ಪ್ರೆಸಿಡೆನ್ಸಿ ಇನ್ಷಿಟ್ಯೂಷನ್ ಪ್ರಶಸ್ತಿ -2012
  13. ಆಳ್ವಾಸ್ ನುಡಿಸಿರಿ ಪ್ರಶಸ್ತಿ -2012
  14. ಶ್ರವಣಬೆಳಗೊಳದಲ್ಲಿ ನಡೆದ 81ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರು.
  15. ನೃಪತುಂಗ ಪ್ರಶಸ್ತಿ -2018
  16. ಪಂಪ ಪ್ರಶಸ್ತಿ – 2019

ಹೀಗೆ ಕನ್ನಡ ಸಾಹಿತ್ಯ ಲೋಕಕ್ಕೆ ತನ್ನದೇ ಆದಂತ ಕೊಡುಗೆಯನ್ನು ನೀಡಿದ್ದಂತ ಕವಿ ಡಾ.ಸಿದ್ದಲಿಂಗಯ್ಯ ಇನ್ನಿಲ್ಲವಾಗಿದ್ದಾರೆ. ಈ ಮೂಲಕ ಸಾಹಿತ್ಯಲೋಕದ ಕೊಂಡಿಯೊಂದು ಕಳಚಿದಂತೆ ಆಗಿದ್ದು, ಕನ್ನಡ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟ ಉಂಟಾದಂತೆ ಆಗಿದೆ.

ವರದಿ : ವಸಂತ ಬಿ ಈಶ್ವರಗೆರೆ