ಸುಭಾಷಿತ :

Thursday, April 2 , 2020 10:08 AM

ಸಮೃದ್ದಿ ಬೇಕೇ..? ನಿಮ್ಮ ಮನೆಯಲ್ಲಿ ಇರಲಿ ಈ ಫೋಟೋ..!


Tuesday, December 3rd, 2019 2:52 pm


ಸಿನಿಮಾಡೆಸ್ಕ್: ನಿಮ್ಮ ಮನೆಯಲ್ಲಿ ಗಣೇಶ, ಲಕ್ಷ್ಮೀ ಹಾಗೂ ಸರಸ್ವತಿ ಫೋಟೋ ಇರಬೇಕು. ಮುಖ್ಯವಾಗಿ ಕೆಲಸಗಳಿಗೆ ವಿಘ್ನಗಳು ಎದುರಾಗದಂತೆ ಗಣೇಶನ ಕೃಪೆ ಅವಶ್ಯಕ.  ಇದಕ್ಕೆ ಲಕ್ಷ್ಮೀ ಕಟಾಕ್ಷ ಬೇಕು. ಅದಕ್ಕಾಗಿ ಶ್ರೀ ಲಕ್ಷ್ಮೀ ಮನೆಯಲ್ಲಿ ಸ್ಥಿರಗೊಂಡಿರಬೇಕು. ಪ್ರಾಣಕ್ಕೂ ಕೂಡ ಅಪಾಯ ಕಟ್ಟಿಟ್ಟ ಬುತ್ತಿ. ಹೀಗಾಗಿ ಜ್ಞಾನವನ್ನು ಹೊಂದಬೇಕಾದರೆ ಸರಸ್ವತಿಯ ಕೃಪೆ ತುಂಬಾ ಆವಶ್ಯಕವಾಗಿದೆ. ಗಣೇಶನ ಆರಾಧನೆಯಿಂದಾಗಿ ಶಿವ ಪಾರ್ವತಿಯರು ಪ್ರಸನ್ನಗೊಳ್ಳುತ್ತಾರೆ. ಶ್ರೀ ಲಕ್ಷ್ಮೀಯ ಪ್ರಸನ್ನತೆ ಇದ್ದಲ್ಲಿ ವಿಷ್ಣುವಿನ ಆಶೀರ್ವಾದ ಕಟ್ಟಿಟ್ಟ ಬುತ್ತಿ. ಸರಸ್ವತಿಯೇ ಪ್ರಜಾಪಿತನಾದ ಬ್ರಹ್ಮನ ಪತ್ನಿಯಾಗಿರುವುದರಿಂದ ಶ್ರೀವಾಣಿಯ ಕೃಪೆಯಿಂದಾಗಿ ಬ್ರಹ್ಮನ ಅನುಗ್ರಹ ಕೂಡ ಪ್ರಾಪ್ತಿಯಾಗುತ್ತದೆ.

ಅಂತೂ ಗಣೇಶ ಲಕ್ಷ್ಮೀ ಸರಸ್ವತಿಯರಿಂದಾಗಿ ನಿರ್ವಿಘ್ನತೆ ಸಂಪತ್ತು ಹಾಗೂ ಜ್ಞಾನದ ಕೊಡಗಳು ತುಂಬಿರುತ್ತವೆ ಬದುಕು ಹಸನಾಗಿರುತ್ತದೆ. ಸೃಷ್ಟಿ ಸ್ಥಿತಿ ಹಾಗೂ ಲಯಗಳಿಗೆ ಅಧಿಪತಿಗಳಾದ ಬ್ರಹ್ಮ ವಿಷ್ಣು ಮಹೇಶ್ವರರ ಕೃಪಾಶೀರ್ವಾದಗಳು ಕೂಡ ನಿಸ್ಸಂಶಯ ಆಸ್ತಿ. ಇದರಿಂದಾಗಿ ಮೂವತ್ಮೂರು ಕೋಟಿ ದೇವತೆಗಳ ರಕ್ಷಣಾತ್ಮಕ ನಿಲುವು ಅಷ್ಟ ದಿಗ್ಗಜಗಳು ಅಷ್ಟಾಂಗಗಳು, ಅಷ್ಟ ಸಿದ್ಧಿಗಳು ಅಷ್ಟ ಶೋಭೆಗಳು, ಅಷ್ಟ ಭೋಗಗಳು ಅಷ್ಟ ಮಂಗಲಾವೃತ ಸುಸ್ಥಿತಿಗಳು, ಅಷ್ಟ ದಿಕ್ಕುಗಳಿಂದ ಉತ್ತಮ ಫ‌ಲಗಳು, ಅಷ್ಟ ಐಶ್ವರ್ಯಗಳು, ಪ್ರಸನ್ನತೆಯೊಂದಿಗೆ ಒದಗಿಬರುತ್ತದೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions