ಬೆಳಗಾವಿ: ಜಿಲ್ಲೆಯಲ್ಲಿ ಸಾರಿಗೆ ಬಸ್ ಕಂಡಕ್ಟರ್ ಮೇಲೆ ಮರಾಠಿಗರು ನಡೆಸಿದಂತ ದಾಳಿಯನ್ನು ಎಂಇಎಸ್ ಪುಂಡನೊಬ್ಬ ಸಮರ್ಥಿಸಿಕೊಂಡಿದ್ದಾನೆ. ಅಲ್ಲದೇ ಕನ್ನಡಿಗರು ನಾಲಾಯಕ್ ಎಂಬುದಾಗಿ ನಾಡದ್ರೋಹಿಯೊಬ್ಬ ನಾಲಿಗೆಯನ್ನು ಹರಿಬಿಟ್ಟಿದ್ದಾನೆ.
ಈ ಸಂಬಂಧ ವೀಡಿಯೋ ಬಿಡುಗಡೆ ಮಾಡಿರುವಂತ ಎಂಇಎಸ್ ಮುಖಂಡ ಶುಭಂ ಶಳಕೆ ಎಂಬಾತ, ಬೆಳಗಾವಿಯಲ್ಲಿ ಇದ್ದೇ ಎಂಇಎಸ್ ಪುಂಡಾಟವನ್ನು ಸಮರ್ಥಿಸಿಕೊಂಡಿದ್ದಾರೆ. ಕಂಡಕ್ಟರ್ ಮೇಲಿನ ಹಲ್ಲೆ ಸರಿ ಎನ್ನೋದಾಗಿ ವೀಡಿಯೋ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಮತ್ತೊಂದೆಡೆ ಕಂಡಕ್ಟರ್ ಮೇಲಿನ ಹಲ್ಲೆ ಪ್ರಕರಣದಲ್ಲಿ ಮತ್ತೋರ್ವ ಆರೋಪಿಯನ್ನು ಬೆಳಗಾವಿಯ ಮಾರಿಹಾಳ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ಸಂಬಂಧ ಮಂಗಳವಾರದಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ನಾರಾಯಣಗೌಡ ಅವರು ಮಂಗಳವಾರ ಬೆಳಗಾವಿಗೆ ಭೇಟಿ ಕೂಡ ನೀಡಲಿದ್ದಾರೆ.
ಅಸಮರ್ಪಕ ವಿದ್ಯುತ್ ಪೂರೈಕೆ: ನಾಳೆ ಸಾಗರದ ಅವಿನಹಳ್ಳಿ ಮೆಸ್ಕಾಂ ಕಚೇರಿ ಎದುರು ರೈತರ ಪ್ರತಿಭಟನೆ
Watch Video: ಹಮಾಸ್ ಸೈನಿಕನ ಹಣೆಗೆ ಮುತ್ತಿಟ್ಟ ಬಿಡುಗಡೆಗೊಂಡ ಇಸ್ರೇಲಿ ಒತ್ತೆಯಾಳು | Israel-Hamas war