ಬೆಂಗಳೂರು : ಕಪ್ಪತ್ತಗುಡ್ಡ ವನ್ಯಜೀವಿಧಾಮದ 10 ಕಿ.ಮೀ ವ್ಯಾಪ್ತಿಯಲ್ಲಿನ ಗಣಿಗಾರಿಕೆ ಪ್ರಸ್ತಾವನೆಗಳಿಗೆ ಅವಕಾಶ ಕೋರಿದ್ದ ಒಟ್ಟು 28 ಪ್ರಸ್ತಾವನೆಗಳನ್ನು ಮುಂದೂಡಲು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ವನ್ಯಜೀವಿ ಮಂಡಳಿ ಸಭೆ ನಿರ್ಧರಿಸಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.
ಸಭೆಯ ಬಳಿಕ ಸುದ್ದಿಗಾರರಿಗೆ ವಿವರ ನೀಡಿದ ಅವರು, 16ನೇ ರಾಜ್ಯ ವನ್ಯಜೀವಿ ಮಂಡಳಿಯಲ್ಲಿ ಈ ಕುರಿತು ಚರ್ಚಿಸಿ ಕಪ್ಪತ್ತಗುಡ್ಡ ವನ್ಯಜೀವಿಧಾಮದ 1 ಕಿ.ಮೀ ವ್ಯಾಪ್ತಿಯಲ್ಲಿ ಚಾಲನೆಯಲ್ಲಿರುವ ಅನಧಿಕೃತ ಗಣಿಗಾರಿಕೆಗಳಿಗೆ ಗಣಿಗಾರಿಕೆಯನ್ನು ಸ್ಥಗಿತಗೊಳಿಸಲು ನೋಟೀಸ್ ನೀಡುವಂತೆ ಸೂಚಿಸಲಾಗಿತ್ತು. ಈ ಬಗ್ಗೆ ಪರಿಶೀಲಿಸಿ, ಅನಧಿಕೃತ ಗಣಿಗಾರಿಕೆಗಳ ಕುರಿತು ವಾಸ್ತವಾಂಶದ ವರದಿ ನೀಡುವಂತೆ ಮತ್ತು ಸರ್ವೋಚ್ಚ ನ್ಯಾಯಾಲಯದ ಆದೇಶ ಮತ್ತು ಕಾನೂನಿನ ಅಂಶಗಳನ್ನು ಒಳಗೊಂಡ ವರದಿಯೊಂದಿಗೆ ಮೇಲ್ಕಂಡ ಪ್ರಸ್ತಾವನೆಗಳನ್ನು ಮುಂದಿನ ರಾಜ್ಯ ವನ್ಯಜೀವಿ ಮಂಡಳಿಯ ಸಭೆಯಲ್ಲಿ ಮರು ಮಂಡಿಸಲು ಸೂಚಿಸಲಾಗಿತ್ತು.
ಅದರಂತೆ ಇಂದು ಈ ಪ್ರಸ್ತಾಪ ಮಂಡನೆಯಾಯಿತು. ಆದರೆ ಈ ಪ್ರಸ್ತಾವನೆ ಮುಂದೂಡಲುಇರುವ ತೀರ್ಮಾನಿಸಲಾಯಿತು ಎಂದು ಈಶ್ವರ ಖಂಡ್ರೆ ತಿಳಿಸಿದರು.
ಇಂದು ಬೇಕಾಗಿರೋದು ‘ಚಾಯ್ ಪೇ ಚರ್ಚಾ’ವಲ್ಲ, ಆಹಾರ ಸಂಸ್ಕೃತಿಯಂತಹ ಮೌಲಿಕ ಚರ್ಚೆಗಳು: ಸಿಎಂ ಸಿದ್ಧರಾಮಯ್ಯ