ಬೆಂಗಳೂರು: ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ, ಸಂಸದ ಸ್ಥಾನಕ್ಕೆ ಕರಡಿ ಸಂಗಣ್ಣ ಅವರು ರಾಜೀನಾಮೆ ಸಲ್ಲಿಸಿದ್ದಾರೆ. ಈ ಮೂಲಕ ಬಿಜೆಪಿ ಪಕ್ಷಕ್ಕೆ ಗುಡ್ ಬೈ ಹೇಳಿ, ಕರಡಿ ಸಂಗಣ್ಣ ರಾಜೀನಾಮೆ ನೀಡಿ ಹೊರ ನಡೆದಿದ್ದಾರೆ.
ಈಗಾಗಲೇ ಲೋಕಸಭಾ ಚುನಾವಣೆ ಹೊತ್ತಿನಲ್ಲೇ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷವನ್ನು ಸಂಸದ ಕರಡಿ ಸಂಗಣ್ಣ ಸೇರಲಿದ್ದಾರೆ ಎನ್ನಲಾಗುತ್ತಿತ್ತು. ಇದಕ್ಕೆ ಪುಷ್ಠಿ ನೀಡುವಂತೆ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ, ಸಂಸದ ಸ್ಥಾನಕ್ಕೆ ಕರಡಿ ಸಂಗಣ್ಣ ರಾಜೀನಾಮೆ ನೀಡಿದ್ದಾರೆ.
ಇ-ಮೇಲ್ ಮೂಲಕ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಸಂಸದ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ ಪತ್ರವನ್ನು ಕಳುಹಿಸಿದ್ದರೇ, ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ.