ಬೆಂಗಳೂರು : ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಕಿಚ್ಚು ಹೆಚ್ಚಾಗಿದೆ. ಮಹಾರಾಷ್ಟ್ರದಲ್ಲಿ ಶಿವಸೇನೆ ಉದ್ಧವ್ ಠಾಕ್ರೆ ಬಣದ ಪುಂಡರು ನಿನ್ನೆ ಕರ್ನಾಟಕದ ವಾಹನಗಳಿಗೆ ಮತ್ತೆ ಮಸಿ ಬಳಿದು ಸಿಎಂ ಬೊಮ್ಮಾಯಿ ಭಾವಚಿತ್ರಕ್ಕೆ ಕೂಡ ಮಸಿ ಹಚ್ಚಿ ಪುಂಡಾಟ ಮೆರೆದಿದ್ದರು.

ಇದೀಗ ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದದ ಕುರಿತು ಕರವೇ ನಾರಾಯಣ ಗೌಡ ಅವರು ಸಿಎಂ ಬಸವರಾಜ ಬೊಮ್ಮಾಯಿಗೆ ಪತ್ರ ಬರೆದಿದ್ದು, ನೀವು ಕ್ರಮ ತೆಗೆದುಕೊಳ್ಳದಿದ್ದರೆ ನಾವು ಪ್ರತಿಭಟನೆ ತೀವ್ರಗೊಳಿಸಬೇಕಾಗುತ್ತೆ ಎಂದು ಎಚ್ಚರಿಕೆ ನೀಡಿದ್ದಾರೆ.

ಮಹಾರಾಷ್ಟ್ರದಲ್ಲಿ ಕನ್ನಡಿಗರ ಮೇಲೆ ವಿನಾಕಾರಣ ದೌರ್ಜನ್ಯವೆಸಗಲಾಗುತ್ತಿದೆ. ಕನ್ನಡಿಗರ ಆಸ್ತಿಪಾಸ್ತಿಗಳ ಮೇಲೆ ದಾಳಿಗಳಾಗುತ್ತಿವೆ. ವಿಧ್ವಂಸಕ ಕೃತ್ಯಗಳನ್ನು ಎಸಗಲಾಗುತ್ತಿದೆ. ಕನ್ನಡಿಗರ ಮೇಲಿನ ದಾಳಿ-ದೌರ್ಜನ್ಯಗಳು ಭಯೋತ್ಪಾದನೆಗೆ ಸಮನಾದ ಹೇಯಕೃತ್ಯಗಳಾಗಿರುತ್ತವೆ. ಇದನ್ನು ಕರ್ನಾಟಕ ರಕ್ಷಣಾ ವೇದಿಕೆ ತೀವ್ರವಾಗಿ ಖಂಡಿಸುತ್ತದೆ ಮತ್ತು ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸುತ್ತದೆ, ನೀವು ಕ್ರಮ ತೆಗೆದುಕೊಳ್ಳದಿದ್ದರೆ ನಾವು ಪ್ರತಿಭಟನೆ ತೀವ್ರಗೊಳಿಸಬೇಕಾಗುತ್ತೆ ಎಂದು ಕರವೇ ನಾರಾಯಣ ಗೌಡ ಅವರು ಸಿಎಂ ಬಸವರಾಜ ಬೊಮ್ಮಾಯಿಗೆ ಪತ್ರ ಬರೆದಿದ್ದಾರೆ .

ನಮ್ಮ ತಂಟೆಗೆ ಬಂದರೆ ಹುಷಾರ್
ನಮ್ಮ ತಂಟೆಗೆ ಬಂದರೆ ಹುಷಾರ್..ಕರ್ನಾಟಕದ ಗಡಿ ದಾಟಿ ಒಂದೂ ಮಹಾರಾಷ್ಟ್ರ ವಾಹನವನ್ನು ಬರಲು ಬಿಡುವುದಿಲ್ಲ ಎಂದು ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಎಚ್ಚರಿಕೆ ನೀಡಿದ್ದಾರೆ.ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್ ನಲ್ಲಿ ಕರವೇ ಪ್ರತಿಭಟನೆ ನಡೆಸಿದ್ದು, ಮಹಾ ಪುಂಡರಿಗೆ ಎಚ್ಚರಿಕೆ ನೀಡಿದ್ದಾರೆ.
ಮಹಾರಾಷ್ಟ್ರ ಸರ್ಕಾರ ಹಾಗೂ ಎಂಇಎಸ್ ಪುಂಡದ ವಿರುದ್ಧ ಆಕ್ರೋಶ ಹೊರ ಹಾಕಿದ ಕರವೇ ನಾರಾಯಣ ಗೌಡ ‘ ಬೆಳಗಾವಿ ರಾಜಕಾರಣಿಗಳು ರಣಹೇಡಿಗಳಾಗಿದ್ದಾರೆ, ಮರಾಠಿ ಜನರ ಮತ ಪಡೆಯಲು ಬಾಯಿ ಮುಚ್ಚಿಕೊಂಡು ಕುಳಿತಿದ್ದಾರೆ ಎಂದು ಕಿಡಿಕಾರಿದರು.

ಮತ ಕೇಳುವ ನೈತಿಕತೆ ಇದ್ದರೆ ಕನ್ನಡಿಗರ ಪರ ರಾಜಕಾರಣಿಗಳು ದನಿ ಎತ್ತಬೇಕು, ಇನ್ನೆರಡು ದಿನ ಗಡುವು ನೀಡುತ್ತೇವೆ, ಅಷ್ಟರಲ್ಲಿ ಸರಿಯಾಗದಿದ್ದರೆ ಸಂಸದೀರ ಮನೆ ಮುಂದೆ ಪ್ರತಿಭಟನೆ ನಡೆಸುತ್ತೇವೆ, ಪೊಲೀಸರು ನಮ್ಮ ಪ್ರತಿಭಟನೆಯನ್ನು ಪ್ರಶ್ನಿಸಬಾರದು ಎಂದರು. ಇನ್ನೂ ಮಹಾ ಪುಂಡರು ನಮ್ಮ ತಂಟೆಗೆ ಬಂದರೆ ಹುಷಾರ್..ಕರ್ನಾಟಕದ ಗಡಿ ದಾಟಿ ಒಂದೂ ಮಹಾರಾಷ್ಟ್ರ ವಾಹನವನ್ನು ಬರಲು ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ಗದಗದಲ್ಲಿ ಕರವೇ ಪ್ರತಿಭಟನೆ
ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಕಿಚ್ಚು ಹೆಚ್ಚಾಗಿದೆ. ಮಹಾರಾಷ್ಟ್ರದಲ್ಲಿ ಶಿವಸೇನೆ ಉದ್ಧವ್ ಠಾಕ್ರೆ ಬಣದ ಪುಂಡರು ನಿನ್ನೆ ಕರ್ನಾಟಕದ ವಾಹನಗಳಿಗೆ ಮತ್ತೆ ಮಸಿ ಬಳಿದು ಸಿಎಂ ಬೊಮ್ಮಾಯಿ ಭಾವಚಿತ್ರಕ್ಕೆ ಕೂಡ ಮಸಿ ಹಚ್ಚಿ ಪುಂಡಾಟ ಮೆರೆದಿದ್ದರು.

ಮರಾಠಿ ಪುಂಡರ ಕೃತ್ಯಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಗದಗದಲ್ಲಿ ಭಾರೀ ಪ್ರತಿಭಟನೆ ನಡೆಸಿದ್ದಾರೆ. ಗದಗದ ಗಾಂಧಿ ಸರ್ಕಲ್ ನಲ್ಲಿ ಇಂದು ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಮಹಾರಾಷ್ಟ್ರ ವಾಹನಗಳಿಗೆ ಮಸಿ ಬಳಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಹಾ ಪುಂಡರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

BIG BREAKING NEWS: ಮುಂದಿನ ವಾರಾಂತ್ಯ ‘ಶಿಕ್ಷಕರ ಅರ್ಹತಾ ಪರೀಕ್ಷೆ’ ಫಲಿತಾಂಶ ಪ್ರಕಟ – ಸಚಿವ ಬಿ.ಸಿ ನಾಗೇಶ್ | Karnataka TET Exam -2022

ಬೆಂಗಳೂರಿನಲ್ಲಿ ನಾವಿನ್ಯತಾ ಅನುಭವ ವಸ್ತು ಸಂಗ್ರಹಾಲಯ ಸ್ಥಾಪನೆ – ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ

Share.
Exit mobile version