ಬೆಂಗಳೂರು : ಶ್ರೀಮಾನ್ ಸಿದ್ದರಾಮಯ್ಯನವರೇ ನಿಮ್ಮ ‘ಸಿದ್ವಿಲಾಸ’ಕ್ಕೆ ಉಘೇ ಉಘೇ ಎನ್ನಲೇಬೇಕು, ಅಂದುಹಗರಣಗಳಿಂದ ಪಾರಾಗಲು ಲೋಕಾಯುಕ್ತಕ್ಕೇ ಸಮಾಧಿ ಕಟ್ಟಿ ಎಸಿಬಿ ರಚನೆ ಮಾಡಿಕೊಂಡಿ̧ರಿ ಇಂದು ಮುಡಾಹಗರಣದಿಂದ ಬಚಾವಾಗಲು ನಿಮಗೀಗ ಅದೇ ಲೋಕಾಯುಕ್ತವೇ ಗತಿ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಹೆಚ್.ಡಿ.ಕುಮಾರಸ್ವಾಮಿ,ಶ್ರೀಮಾನ್ ಸಿದ್ದರಾಮಯ್ಯನವರೇ..ನಿಮ್ಮ ‘ಸಿದ್ವಿಲಾಸ’ಕ್ಕೆ ಉಘೇಉಘೇ ಎನ್ನಲೇಬೇಕು. ಅಂದು: ಹಗರಣಗಳಿಂದ ಪಾರಾಗಲು ಲೋಕಾಯುಕ್ತಕ್ಕೇ ಸಮಾಧಿ ಕಟ್ಟಿ ಎಸಿಬಿ ರಚನೆ ಮಾಡಿಕೊಂಡಿರಿ! ಇಂದು: ಮೂಡಾಗರಣದಿಂದ ಬಚಾವಾಗಲು ನಿಮಗೀಗ ಅದೇ ಲೋಕಾಯುಕ್ತವೇsss ಗತಿ!! Karma Hit back ಎಂದರೇ ಇದೇ ಅಲ್ಲವೇ ಸಿದ್ದರಾಮಯ್ಯನವರೇ? ನಿಮ್ಮ ಗ್ರಹಚಾರಕ್ಕೆ ಎಸಿಬಿಯನ್ನೂ ಹೈಕೋರ್ಟ್ ಬರ್ಖಾಸ್ತು ಮಾಡಿಬಿಟ್ಟಿತು.
ಶ್ರೀಮಾನ್ ಸಿದ್ದರಾಮಯ್ಯನವರೇ..
ನಿಮ್ಮ 'ಸಿದ್ವಿಲಾಸ'ಕ್ಕೆ ಉಘೇಉಘೇ ಎನ್ನಲೇಬೇಕು.ಅಂದು: ಹಗರಣಗಳಿಂದ ಪಾರಾಗಲು ಲೋಕಾಯುಕ್ತಕ್ಕೇ ಸಮಾಧಿ ಕಟ್ಟಿ ಎಸಿಬಿ ರಚನೆ ಮಾಡಿಕೊಂಡಿರಿ!
ಇಂದು: ಮೂಡಾಗರಣದಿಂದ ಬಚಾವಾಗಲು ನಿಮಗೀಗ ಅದೇ ಲೋಕಾಯುಕ್ತವೇsss ಗತಿ!!
Karma Hit back ಎಂದರೇ ಇದೇ ಅಲ್ಲವೇ @siddaramaiah ನವರೇ?
ನಿಮ್ಮ ಗ್ರಹಚಾರಕ್ಕೆ…— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) September 27, 2024
ಈಗ ಲೋಕಾಯುಕ್ತವನ್ನೇ ಗುರಾಣಿ ಮಾಡಿಕೊಂಡು ಸಿಬಿಐ ರಾಜ್ಯ ಪ್ರವೇಶಕ್ಕೆ ಸಂಪುಟದಿಂದ ಬಾಗಿಲು ಬಂದ್ ಮಾಡಿಸಿದ್ದೀರಿ. ಅಲ್ಲಿಗೆ ಆರೋಪಿ ಅಪರಾಧಿಯಾದ ಎಂದೇ ಲೆಕ್ಕ. ‘ ಸಿದ್ದಾಪರಾದ’ ಸಾಬೀತಿಗೆ ಇನ್ನೊಂದೇ ಹೆಜ್ಜೆ ಬಾಕಿ. ನಾನು ಭಾವಿಸಿದಷ್ಟು ಧೈರ್ಯವಂತರಲ್ಲ ನೀವು..ಮಗೂ ಭಯವಿದೆ. ಅದೇ ಈ ನೆಲದ ಕಾನೂನಿನ ಶಕ್ತಿ ಎಂದು ವಾಗ್ದಾಳಿ ನಡೆಸಿದ್ದಾರೆ.