ಬೆಂಗಳೂರು: ರಾಜ್ಯದ 7 ನಿಗಮಗಳನ್ನು ಮುಚ್ಚುವಂತೆ, 9 ನಿಗಮಗಳನ್ನು ವಿಲೀನ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಆಡಳಿತ ಸುಧಾರಣಾ ಆಯೋಗವು ಶಿಫಾರಸ್ಸು ಮಾಡಿದೆ.
ಈ ಬಗ್ಗೆ ಮಾಹಿತಿಯನ್ನು ಕರ್ನಾಟಕ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ ದೇಶಪಾಂಡೆ ಅವರು ಮಾಹಿತಿ ನೀಡಿದ್ದು, 9ನೇ ವರದಿಯಲ್ಲಿ 449 ಹೊಸ ಶಿಫಾರಸ್ಸುಗಳನ್ನು ಮಾಡಿ, ಸಿಎಂಗೆ ವರದಿಯನ್ನು ಸಲ್ಲಿಸಲಾಗಿದೆ ಎಂದಿದ್ದಾರೆ.
ಕರ್ನಾಟಕ ಆಡಳಿತ ಸುಧಾರಣಾ ಆಯೋಗ ಸಲ್ಲಿಸಿರುವಂತ ಶಿಫಾರಸ್ಸು ವರದಿಯಲ್ಲಿ 7 ಬೋರ್ಡ್, ಕಾರ್ಪೊರೇಷನ್ ಗಳನ್ನು ಮುಚ್ಚಲು ಸಲಹೆ ಮಾಡಲಾಗಿದೆ. ಜೊತೆಗೆ 9 ಬೋರ್ಡ್ ಕಾರ್ಪೊರೇಷನ್ ಗಳನ್ನು ವಿಲೀನ ಮಾಡುವುದಕ್ಕೂ ಶಿಫಾರಸ್ಸು ಮಾಡಿರುವುದಾಗಿ ಹೇಳಿದ್ದಾರೆ.
ವಿಲೀನಕ್ಕೆ ಶಿಫಾರಸ್ಸು ಮಾಡಿರುವಂತ ನಿಗಮಗಳ ಪಟ್ಟಿ ಈ ಕೆಳಗಿನಂತಿದೆ..
1.ಕರ್ನಾಟಕ ರಾಜ್ಯ ಏಡ್ಸ್ ತಡೆಗಟ್ಟುವ ಸೊಸೈಟಿ (ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯೋಂದಿಗೆ ವೀಲಿನ)
2.ಕರ್ನಾಟಕ ರೇಷ್ಮೆ ಕೈಗಾರಿಕೆ ನಿಗಮ ನಿಯಮಿತ (ಕರ್ನಾಟಕ ರೇಷ್ಮೆ ಮಾರುಕಟ್ಟೆ ಮಂಡಳಿ ಲಿಮಿಟೆಡ್ ವಿಲೀನ ಮಾಡಬೇಕು)
3.ಆಹಾರ ಕರ್ನಾಟಕ ಲಿಮಿಟೆಡ್ (ಕರ್ನಾಟಕ ರಾಜ್ಯ ಕೃಷಿ ಉತ್ಪನ್ನ, ಸಂಸ್ಕರಣೆ ಮತ್ತು ರಫ್ತು ನಿಗಮ ನಿಯಮಿತದಲ್ಲಿ ವಿಲೀನ)
4.ಬೆಂಗಳೂರು ಸಬ್ ಅರ್ಬನ್ ರೈಲ್ವೆ ಕಂಪನಿ ಲಿಮಿಟೆಡ್ (ಬಿ-ರೈಡ್) (ರೈಲು ಮೂಲಸೌಕರ್ಯ ಅಭಿವೃದ್ಧಿ ಕಂಪನಿ (ಕರ್ನಾಟಕ) ಲಿಮಿಟೆಡ್ (ಕೆ-ರೈಡ್))
5.ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತ (ಜವಳಿ ಮೂಲಸೌಕರ್ಯ ಅಭಿವೃದ್ಧಿ ನಿಗಮ)
6.ಮೈಸೂರು ಕ್ರೋಮ್ ಟ್ಯಾನಿಂಗ್ ಕಂಪನಿ ಲಿಮಿಟೆಡ್ (ಮೈಸೂರು ಸೇಲ್ಸ್ ಇಂಟರ್ನ್ಯಾಷನಲ್ ಲಿಮಿಟೆಡ್‌ನಲ್ಲಿ ವಿಲೀನ)
7.ಕರ್ನಾಟಕ ಗೇರು ಅಭಿವೃದ್ಧಿ ನಿಗಮ ನಿಯಮಿತ (ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕೆ ನಿಗಮ ನಿಯಮಿತ)
8.ಕರ್ನಾಟಕ ರಾಜ್ಯ ರೇಷ್ಮೆ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಕೃಷಿ ವಿಜ್ಞಾನ ವಿಶ್ವವಿದ್ಯಾಲಯ (ಜಿಕೆವಿಕೆ)
9.ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ (ಸಿಎಡಿಎ) (ಸಂಬಂಧಿಸಿದ ನೀರಾವರಿ ನಿಗಮಗಳು)
ಮುಟ್ಟೋದಕ್ಕೆ ಶಿಫಾರಸ್ಸು ಮಾಡಲಾದಂತ ನಿಗಮಗಳ ಪಟ್ಟಿ ಹೀಗಿದೆ..
1.ಕರ್ನಾಟಕ ರಾಜ್ಯ ಸಮಾಜಕಲ್ಯಾಣ ಮಂಡಳಿ
2.ಕರ್ನಾಟಕ ರಾಜ್ಯ ಸಂಯಮ ಮಂಡಳಿ
3.ಕರ್ನಾಟಕ ಸಹಕಾರಿ ಕೋಳಿ ಸಾಕಾಣಿಕೆ ಒಕ್ಕೂಟ
4.ಕರ್ನಾಟಕ ವುಲ್ಪ್ ವುಡ್ ಲಿಮಿಟೆಡ್
5.ಕರ್ನಾಟಕ ರಾಜ್ಯ ಅಗ್ರೋ-ಕಾರ್ನ್ ಪ್ರಾಡಕ್ಟ್ ಲಿಮಿಟೆಡ್
6.ಮೈಸೂರು ಲ್ಯಾಂಪ್ ವರ್ಕ್ಸ್ ಲಿಮಿಟೆಡ್
7.ಕರ್ನಾಟಕ ಆಗ್ರೋ ಇಂಡಸ್ಟ್ರೀಸ್ ಕಾರ್ಪೋರೇಷನ್ ಲಿಮಿಟೆಡ್
ಜಾತಿಗಣತಿ ಸಮೀಕ್ಷೆ: 45 ನಿಮಿಷಗಳ ಕಾಲ ಸಮಾಧಾನದಿಂದ ವಿವರ ನೀಡಿದ ಸಿಎಂ ಸಿದ್ಧರಾಮಯ್ಯ
ದೀಪಾವಳಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್: ಈ ಮಾರ್ಗದಲ್ಲಿ ವಿಶೇಷ ರೈಲುಗಳ ಸಂಚಾರದ ವ್ಯವಸ್ಥೆ