ಬೆಂಗಳೂರು: 2024ನೇ ಸಾಲಿನ ಲೋಕಸಭೆಗೆ ಸಾರ್ವತ್ರಿಕ ಚುನಾವಣೆ ಘೋಷಣೆಯಾಗಿದ್ದು, ಕರ್ನಾಟಕ ರಾಜ್ಯದ ನೆರೆ ರಾಜ್ಯಗಳಾಗಿರುವ ತಮಿಳುನಾಡು ರಾಜ್ಯದಲ್ಲಿ ಏಪ್ರಿಲ್ 29 ರ ಶುಕ್ರವಾರದಂದು ಹಾಗೂ ಆಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಲ್ಲಿ ಮೇ 13 ರ ಸೋಮವಾರದಂದು ಮತದಾನ ಮಾಡಲು ನಿಗಧಿಯಾಗಿದೆ.

ಚುನಾವಣಾ ಮತದಾನ ನಿಗಧಿಯಾಗಿರುವ ಈ 03 ರಾಜ್ಯಗಳಲ್ಲಿ ಮತದಾರರಾಗಿರುವವರು ಕರ್ನಾಟಕ ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಾಧ್ಯತೆ ಇರುವುದರಿಂದ ಅಂತಹ ಮತದಾರರಿಗೆ ಮತದಾನದ ದಿನಾಂಕಗಳಂದು ಆಯಾ ಗಡಿ ಜಿಲ್ಲೆಗಳಲ್ಲಿನ ಕೈಗಾರಿಕೆಗಳು, ಕಾರ್ಖಾನೆಗಳು ಹಾಗೂ ಇನ್ನಿತರೆ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮತದಾರರಿಗೆ ಮಾತ್ರ ಸೀಮಿತವಾಗಿ ಮತದಾನ ಮಾಡಲು ಅನುಕೂಲವಾಗುವಂತೆ Representation of People’s Act, 1951 ರ ಸೆಕ್ಷನ್ 135-ಬಿ ಅಡಿಯಲ್ಲಿ ವೇತನ ಸಹಿತ ರಜೆಯನ್ನು ಘೋಷಿಸಲಾಗಿದೆ. ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ( ರಾಜ್ಯ ಶಿಷ್ಠಾಚಾರ) ಸರ್ಕಾರದ ಅಧೀನ ಕಾರ್ಯದರ್ಶಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share.
Exit mobile version