ಬೆಂಗಳೂರು: ಶಿಗ್ಗಾವಿ, ಸಂಡೂರು ಹಾಗೂ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆ ಮಾಡಲಾಗಿತ್ತು. ಈ ಮೂರು ಕ್ಷೇತ್ರಗಳಲ್ಲಿ ಎರಡು ಕ್ಷೇತ್ರಗಳಿಗೆ ಬಿಜೆಪಿಯಿಂದ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ಶಿಗ್ಗಾವಿ ವಿಧಾನಸಭಾ ಉಪ ಚುನಾವಣೆಗೆ ಬಿಜೆಪಿ ಪಕ್ಷದಿಂದ ಮಾಜಿ ಸಿಎಂ, ಹಾಲಿ ಸಂಸದ ಬಸವರಾಜ ಬೊಮ್ಮಾಯಿ ಅವರ ಪುತ್ರನಿಗೆ ಟಿಕೆಟ್ ಹಂಚಿಕೆ ಮಾಡಲಾಗಿದೆ.
ಇಂದು ಕೇಂದ್ರ ಬಿಜೆಪಿಯಿಂದ ಪಟ್ಟಿ ಬಿಡುಗಡೆ ಮಾಡಲಾಗಿದೆ. ವಯನಾಡಿನ ಒಂದು ಕ್ಷೇತ್ರ, ಅಸ್ಸಾಂನ ಮೂರು, ಬಿಹಾರದ ಎರಡು, ಛತ್ತೀಸ್ ಗಡದ ಒಂದು, ಕರ್ನಾಟಕದ ಶಿಗ್ಗಾವಿಯ ವಿಧಾನಸಭಾ ಉಪ ಚುನಾವಣೆಗೆ ಭರತ್ ಬಸವರಾಜ ಬೊಮ್ಮಾಯಿ ಹಾಗೂ ಸಂಡೂರು ಎಸ್ಟಿ ಮೀಸಲು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಬಂಗಾರು ಹನುಮಂತು ಅವರಿಗೆ ಟಿಕೆಟ್ ನೀಡಲಾಗಿದೆ.
ಇನ್ನೂ ಕೇರಳದ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಅಭ್ಯರ್ಥಿ ಘೋಷಿಸಿದ್ದರೇ, ಮಧ್ಯಪ್ರದೇಶದ ಎರಡು, ರಾಜಸ್ಥಾನದ 6 ಕ್ಷೇತ್ರಗಳು ಪಶ್ಚಿಮ ಬಂಗಾಳದ 6 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಬಿಜೆಪಿಯಿಂದ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗಿದೆ.
ರಾಜ್ಯದ ‘ಬ್ರಾಹ್ಮಣ ವಿದ್ಯಾರ್ಥಿ’ಗಳಿಗೆ ವಿದ್ಯಾರ್ಥಿ ವೇತನ ಬಿಡುಗಡೆ ಮಾಡಲು ಸಿಎಂಗೆ ರಮೇಶ್ ಬಾಬು ಪತ್ರ
BREAKING : ‘ಮುಡಾ’ ಹಗರಣದಲ್ಲಿ ಸಿಎಂಗೆ ಮತ್ತೆ ಸಂಕಷ್ಟ : ಪತ್ನಿ ಪಾರ್ವತಿ ವಿರುದ್ಧ ಮತ್ತೊಂದು ‘ಭೂ’ ಅಕ್ರಮ ಆರೋಪ!