ಬೆಂಗಳೂರು: ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯಕ್ಕೆ ಮಹಾತ್ಮ ಗಾಂಧಿ ಅವರ ಹೆಸರಿಡುವ ಮಸೂದೆಯನ್ನು ವಿಧಾನಸಭೆ ಗುರುವಾರ ಅಂಗೀಕರಿಸಿತು.
ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ (ತಿದ್ದುಪಡಿ) ಮಸೂದೆಯನ್ನು ಯಾವುದೇ ಚರ್ಚೆಯಿಲ್ಲದೆ ಅಂಗೀಕರಿಸಲಾಯಿತು.
2025-26ನೇ ಸಾಲಿನ ಬಜೆಟ್ ನಲ್ಲಿ ಬೆಂಗಳೂರು ನಗರ ವಿಶ್ವವಿದ್ಯಾಲಯಕ್ಕೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಹೆಸರಿಡಲಾಗುವುದು ಎಂದು ಸರ್ಕಾರ ಘೋಷಿಸಿದೆ.