ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ವಿದ್ಯಮಾನಗಳು ಚುರುಕುಗೊಂಡಿವೆ. ಪಕ್ಷದ ನಾಯಕತ್ವದ ವಿರುದ್ಧ ಸಮರ ಸಾರಿರುವ ಭಿನ್ನಮತಿಯರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಪಕ್ಷದ ನಿಷ್ಠಾವಂತ ನಾಯಕರು ಆಗ್ರಹಿಸಿದ್ದಾರೆ.
ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ನಿವಾಸದಲ್ಲಿ ಸಭೆ ಸೇರಿದ 20ಕ್ಕೂ ಹೆಚ್ಚು ಹಿರಿಯ ಮುಖಂಡರು ರಾಜ್ಯ ಸರ್ಕಾರದ ಅಕ್ರಮಗಳ ವಿರುದ್ಧ ಪಕ್ಷದ ಅಧ್ಯಕ್ಷ ವಿಜಯೇಂದ್ರ ಮತ್ತು ಪ್ರತಿ ಪಕ್ಷ ನಾಯಕರ ನೇತೃತ್ವದಲ್ಲಿ ಹೋರಾಟ ನಡೆಯಬೇಕು ಎಂದು ಒತ್ತಾಯಿಸಿದ್ದಾರೆ.
ವಕ್ಫ್ ಒತ್ತುವರಿ ತೆರವು ವಿರೋಧಿ ಹೋರಾಟದ ಹೆಸರಿನಲ್ಲಿ ಪಕ್ಷದ ಕೆಲವು ನಾಯಕರು ಅನಗತ್ಯವಾಗಿ ಗೊಂದಲ ಸೃಷ್ಟಿಸುತ್ತಿದ್ದಾರೆ ಇದು ಪಕ್ಷ ಸಂಘಟನೆ ಮತ್ತು ಕಾರ್ಯಕರ್ತರ ಮೇಲೆ ಗಂಭೀರ ಪರಿಣಾಮ ಬೀರುತ್ತದೆ ಈ ಹಿನ್ನೆಲೆಯಲ್ಲಿ ಹೈಕಮಾಂಡ್ ತಕ್ಷಣವೇ ಮಧ್ಯ ಪ್ರವೇಶಿಸಿ ಎಲ್ಲ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿದ್ದಾರೆ.
ಪಕ್ಷದ ರಾಜ್ಯ ಘಟಕದ ಅಧ್ಯಕ್ಷರು ಮತ್ತು ಪ್ರತಿ ಪಕ್ಷ ನಾಯಕರನ್ನು ಹೈಕಮಾಂಡ್ ನೇಮಕ ಮಾಡಿದೆ ಈ ವಿಷಯವಾಗಿ ಹೈಕಮಾಂಡ್ ತೀರ್ಮಾನಕ್ಕೆ ಎಲ್ಲರೂ ತಲೆಬಾಗಬೇಕು. ಆದರೆ ಕೆಲವರು ಈ ನಾಯಕತ್ವ ಒಪ್ಪುವುದಿಲ್ಲ ಎಂದು ಹೈಕಮಾಂಡ್ ಗೆ ಸೆಡ್ಡು ಹೊಡೆಯಲು ಮುಂದಾಗಿದ್ದಾರೆ ಇಂಥವರನ್ನು ಯಾವುದೇ ಕಾರಣಕ್ಕೂ ಸಹಿಸಬಾರದು ಎಂದು ಹೈಕಮಾಂಡ್ ಗೆ ಮನವರಿಕೆ ಮಾಡಿಕೊಡಲು ಈ ಸಭೆ ತೀರ್ಮಾನಿಸಿದೆ.
ಬಿಪಿಎಲ್ ಕಾರ್ಡು ರದ್ದು, ವಕ್ಫ್ ಆಸ್ತಿ ತೆರವು,ಮುಡಾ ಹಗರಣ ಸೇರಿದಂತೆ ರಾಜ್ಯ ಸರ್ಕಾರದ ಹಲವಾರು ಅಕ್ರಮಗಳ ವಿರುದ್ಧ ಪಕ್ಷದ ಅಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ಯಶಸ್ವಿ ಹೋರಾಟ ನಡೆಸಲಾಗುತ್ತಿದೆ ಇದಕ್ಕೆ ದೊಡ್ಡ ಪ್ರಮಾಣದಲ್ಲಿ ಜನಬೆಂಬಲ ಸಿಕ್ಕಿದೆ ಇದು ಸಹಿಸಲಾರದೆ ಕೆಲವರು ಆಡಳಿತ ಪಕ್ಷದ ಜೊತೆ ಸೇರಿ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಸಭೆಯಲ್ಲಿ ಹಾಜರಿದ್ದ ಹಲವು ನಾಯಕರು ಆಪಾದಿಸಿದ್ದಾರೆ.
ಕೆಲವೇ ಕೆಲವು ಮಂದಿ ನಡೆಸುತ್ತಿರುವ ಚಟುವಟಿಕೆಗಳಿಂದ ಪಕ್ಷದಲ್ಲಿ ದೊಡ್ಡ ಪ್ರಮಾಣದ ಗೊಂದಲ ಶಕ್ತಿಯಾಗುತ್ತದೆ ಇದನ್ನು ತಪ್ಪಿಸಿ ಭಿನ್ನಮತೀಯರಿಗೆ ಎಚ್ಚರಿಕೆ ಸಂದೇಶ ರವಾನಿಸುವ ಅಗತ್ಯವಿದೆ ಎಂದು ತಿಳಿಸುವ ದೃಷ್ಟಿಯಿಂದ ನಿಯೋಗದಲ್ಲಿ ದೆಹಲಿಗೆ ತೆರಳಲು ಈ ಸಭೆ ತೀರ್ಮಾನಿಸಿದೆ.
ಬಿಪಿಎಲ್ ಪಡಿತರ ಚೀಟಿ ರದ್ದು, ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ನಿಗದಿಪಡಿಸಿದ್ದ ಅನುದಾನ ವರ್ಗಾವಣೆ ಮತ್ತು ಪರಿಶಿಷ್ಟ ಜಾತಿಗಳ ಒಳ ಮೀಸಲಾತಿಗೆ ಆಗ್ರಹಿಸಿ ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ನೇತೃತ್ವದಲ್ಲಿ ಹಿಂದುಳಿದ ಮತ್ತು ದಲಿತ ಸಮುದಾಯಗಳ ಸಮಾವೇಶ ನಡೆಸಲು ಸಭೆಯಲ್ಲಿ ನಿರ್ಧರಿಸಲಾಗಿದೆ.
ವಿಧಾನಸಭೆ ಉಪಚುನಾವಣೆ ಮತ್ತು ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಫಲಿತಾಂಶ ಹೊರ ಬಿದ್ದ ನಂತರ ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಮತ್ತು ರೇಣುಕಾಚಾರ್ಯ ನೇತೃತ್ವದಲ್ಲಿ ನಿಯೋಗ ಒಂದು ದೆಹಲಿಗೆ ತೆರಳಿ, ಪಕ್ಷದ ಅಧ್ಯಕ್ಷ ಬಿಜೆಪಿ ನಡ್ಡಾ ಅವರನ್ನು ಭೇಟಿ ಮಾಡಲು ನಿರ್ಧರಿಸಿದೆ.
ವಿಧಾನಮಂಡಲದ ಅಧಿವೇಶನಕ್ಕೂ ಮುನ್ನ ಹೈಕಮಾಂಡ್ ರಾಜ್ಯ ಬಿಜೆಪಿಯಲ್ಲಿ ಉಂಟಾಗಿರುವ ಎಲ್ಲಾ ಗೊಂದಲಗಳಿಗೆ ತೆರೆ ಎಳೆಯಬೇಕು ಮತ್ತು ಹಿಂದುಳಿದ ಮತ್ತು ದಲಿತ ಸಮುದಾಯಗಳ ಬೃಹತ್ ಸಮಾವೇಶ ನಡೆಸಲು ಅನುಮತಿ ನೀಡುವಂತೆ ಕೋರಲು ನಿರ್ಧರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ವಿದೇಶಿ ವ್ಯಾಸಂಗದ ನಿರೀಕ್ಷೆಯಲ್ಲಿದ್ದವರಿಗೆ ಗಮನಕ್ಕೆ: ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
‘ಬಗರ್ ಹುಕುಂ’ ಸಾಗುವಳಿ ಚೀಟಿಗೆ ಅರ್ಜಿ ಸಲ್ಲಿಸಿದ್ದ ರೈತರಿಗೆ ಗುಡ್ ನ್ಯೂಸ್: ‘ಕಡತ ಪರಿಶೀಲನೆ’ ಆರಂಭ
BREAKING : ಭಾರತವನ್ನು ‘ಹಿಂದೂ ರಾಷ್ಟ್ರ’ ವನ್ನಾಗಿ ಮಾಡಲು ನಾವು ಬಿಡಲ್ಲ : ಯತೀಂದ್ರ ಸಿದ್ದರಾಮಯ್ಯ ವಿವಾದ!