ಸುಭಾಷಿತ :

Saturday, December 7 , 2019 7:00 PM

ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆ : ಮತದಾನ ಆರಂಭ


Thursday, December 5th, 2019 7:35 am

ಬೆಂಗಳೂರು : ರಾಜ್ಯದಲ್ಲಿ ತೀವ್ರ ಕುತೂಹಲ ಕೆರಳಿಸಿರುವ 15 ಕ್ಷೇತ್ರಗಳ ವಿಧಾನಸಭಾ ಉಪಚುನಾವಣೆಗೆ ಇಂದು ಬೆಳಗ್ಗೆ 7 ಗಂಟೆಯಿಂದ ಆರಂಭವಾಗಿದೆ. ಮತದಾರರು ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸುತ್ತಿದ್ದಾರೆ.

ಹಿರೇಕೆರೂರು, ಯಲ್ಲಾಪುರ, ರಾಣೆಬೆನ್ನೂರು, ವಿಜಯನಗರ, ಚಿಕ್ಕಬಳ್ಳಾಪುರ, ಕೆ.ಆರ್.ಪುರ, ಯಶವಂತಪುರ, ಶಿವಾಜಿನಗರ, ಹೊಸಕೋಟೆ, ಕೆ.ಆರ್.ಪೇಟೆ, ಹುಣಸೂರು, ಮಹಾಲಕ್ಷ್ಮೀ ಲೇಔಟ್, ಗೋಕಾಕ್, ಕಾಗವಾಡ, ಅಥಣಿ ಕ್ಷೇತ್ರಗಳಲ್ಲಿ ಇಂದು ಮತದಾನ ನಡೆಯಲಿದೆ.

ಇನ್ನು ಮತದಾನಕ್ಕೆ ಚುನಾವಣಾ ಆಯೋಗದ ಗುರುತಿನ ಚೀಟಿ ಇಲ್ಲದವರು ಪಾಸ್ ಪೋರ್ಟ್, ಡಿಎಲ್, ಕೇಂದ್ರ, ರಾಜ್ಯ, ಸಾರ್ವಜನಿಕ ಸಂಸ್ಥೆಗಳ ಪೋಟೋವುಳ್ಳ ಸೇವಾ ಗುರುತಿನ ಚೀಟಿ, ಬ್ಯಾಂಕ್, ಅಂಚೆ ಕಚೇರಿ ಪಾಸ್ ಬುಕ್, ಪಾನ್ ಕಾರ್ಡ್, ಎನ್ ಸಿಆರ್ ಸ್ಮಾರ್ಟ್, ನರೇಗಾ, ಹೆಲ್ತ್ ಕಾರ್ಡ್, ಪೋಟುವುಳ್ಳ ಪಿಂಚಣಿ ದಾಖಲೆ ಬಳಸಿ ಮತದಾನ ಮಾಡಬಹುದಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions