ಬೆಂಗಳೂರು: ತಮಿಳುನಾಡಿಗೆ ಜುಲೈ.31ರವರೆಗೆ ಪ್ರತಿನಿತ್ಯ 1 ಟಿಎಂಸಿ ಕಾವೇರಿ ನದಿ ನೀರು ಹರಿಸುವಂತೆ ಸೂಚಿಸಿದ್ದಂತ ಆದೇಶಕ್ಕೆ ವಿರುದ್ಧವಾಗಿ ಸಿಡಬ್ಲ್ಯೂಆರ್ ಸಿಗೆ ಮೇಲ್ಮನವಿ ಸಲ್ಲಿಸಲು ಇಂದಿನ ಸರ್ವ ಪಕ್ಷಗಳ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸದಂತೆ ವಿಪಕ್ಷಗಳ ನಾಯಕರು ಸಲಹೆ ನೀಡಿದ್ದಾರೆ. ನಾಳೆಯಿಂದ ನಿತ್ಯ 8,000 ಕ್ಯೂಸೆಕ್ಸ್ ಕಾವೇರಿ ನದಿ ನೀರು ಹರಿಸಲು ನಿರ್ಧರಿಸಲಾಗಿದೆ ಅಂತ ಸಿಎಂ ಸಿದ್ಧರಾಮಯ್ಯ ಹೇಳಿದರು.
ಇಂದು ವಿಧಾನಸೌಧದಲ್ಲಿ ಸರ್ವ ಪಕ್ಷ ಸಭೆಯ ಬಳಿಕ ಸಿಎಂ ಸಿದ್ಧರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ನಾಳೆಯಿಂದ ತಮಿಳುನಾಡಿಗೆ ಕಾವೇರಿ ನದಿಯ ನೀರನ್ನು 11,000 ಕ್ಯೂಸೆಕ್ಸ್ ಬದಲಾಗಿ 8,000 ಕ್ಯೂಸೆಕ್ಸ್ ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ. ಅಲ್ಲದೇ 1 ಟಿಎಂಸಿ ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಸುವಂತೆ ಸೂಚಿರಿಸುವಂತ CWRC ಆದೇಶಕ್ಕೆ ಮೇಲ್ಮನವಿ ಸಲ್ಲಿಸಲು ಇಂದಿನ ಸರ್ವಪಕ್ಷಗಳ ಸಭೆಯಲ್ಲಿ ನಿರ್ಧರಿಸಲಾಗಿದೆ ಅಂತ ತಿಳಿಸಿದರು.