ಬೆಂಗಳೂರು: ಕರ್ನಾಟಕ ಸಹಕಾರ ಸಂಘಗಳ ವಿಧೇಯಕವನ್ನು ಇಂದು ವಿಧಾನಪರಿಷತ್ತಿನಲ್ಲಿ ರಾಜ್ಯ ಸರ್ಕಾರದಿಂದ ಮಂಡಿಸಲಾಗಿತ್ತು. ಆದರೇ ರಾಜ್ಯ ಸರ್ಕಾರಕ್ಕೆ ಹಿನ್ನಡೆ ಎನ್ನುವಂತೆ ಸಭಾಪತಿಗಳು ವಿಧೇಯಕವನ್ನು ಸೆಲೆಕ್ಟ್ ಕಮಿಟಿಗೆ ಹಾಕಿದ್ದಾರೆ. ಈ ಮೂಲಕ ವಿಧಾನ ಪರಿಷತ್ತಿನಲ್ಲಿ ಸರ್ಕಾರಕ್ಕೆ ಭಾರೀ ಹಿನ್ನಲೆಯುಂಟಾದಂತೆ ಆಗಿದೆ.
ವಿಧಾನಸಭೆಯಲ್ಲಿ ಮಂಡನೆಯಾಗಿ, ಕರ್ನಾಟಕ ಸಹಕಾರ ಸಂಘಗಳ ತಿದ್ದುಪಡಿ ವಿಧೇಯಕವನ್ನು ರಾಜ್ಯ ಸರ್ಕಾರ ಮಂಡಿಸಿ ಅಂಗೀಕಾರವನ್ನು ಪಡೆದಿತ್ತು. ಆ ಬಳಿಕ ಇಂದು ವಿಧಾನಪರಿಷತ್ತಿನಲ್ಲಿ ಕರ್ನಾಟಕ ಸಹಕಾರ ಸಂಘಗಳ ತಿದ್ದುಪಡಿ ವಿಧೇಯಕವನ್ನು ಮಂಡಿಸಲಾಗಿತ್ತು.
ವಿಧಾನಸೌಧದದಲ್ಲಿ ಪಾಕಿಸ್ತಾನ್ ಜಿಂದಾಬಾಂದ್ ಘೋಷಣೆಯ ವಿಚಾರವಾಗಿ ಸನದಲ್ಲಿ ಆಡಳಿತ, ವಿಪಕ್ಷಗಳ ನಡುವೆ ವಾಕ್ ಸಮರವೇ ನಡೆಯಿತು. ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕರು ಹೀಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡು, ಸದನದ ಭಾವಿಗೆ ಇಳಿದು ಪ್ರತಿಭಟನೆಯನ್ನು ನಡೆಸಲಾಯಿತು.
ಈ ಪ್ರತಿಭಟನೆಯ ನಡುವೆಯೂ ಕರ್ನಾಟಕ ಸಹಕಾರ ಸಂಘಗಳ ತಿದ್ದುಪಡಿ ವಿಧೇಯಕವನ್ನು ಮಂಡಿಸಲಾಯಿತ್ತು. ಆದ್ರೇ ಈ ವಿಧೇಯಕವನ್ನು ಸಭಾಪತಿ ಬಸವರಾಜ ಹೊರಟ್ಟಿಯವರು ಮತಕ್ಕೆ ಹಾಕದೇ ಸೆಲೆಕ್ಟ್ ಕಮಿಟಿಗೆ ಹಾಕಿದ ಕಾರಣ, ರಾಜ್ಯ ಸರ್ಕಾರಕ್ಕೆ ಹಿನ್ನಡೆ ಆದಂತೆ ಆಗಿದೆ.
ಅಂದಹಾಗೇ ವಿಧಾನಸಭೆಯಲ್ಲಿ ಅಂಗೀಕರಗೊಂಡು, ಪರಿಷತ್ ನಲ್ಲಿ ಮಂಡಿಸಲಾಗಿದ್ದಂತ ಹಿಂದೂ ಧಾರ್ಮಿಕ ತಿದ್ದುಪಡಿ ಕಾಯ್ದೆ ಕೂಡ ಅಂಗೀಕರಗೊಂಡಿರಲಿಲ್ಲ. ಈ ವಿಧೇಯಕವನ್ನು ವಿರೋಧಿಸಿ ಹೆಚ್ಚು ಮತಗಳು ಚಲಾವಣೆಗೊಂಡ ಕಾರಣ, ಸರ್ಕಾರಕ್ಕೆ ಹಿನ್ನಡೆಯಾಗಿತ್ತು.
ನಾಳೆ ಸಂಜೆಯೊಳಗೆ ‘ನಾಮಫಲಕ’ಗಳಲ್ಲಿ ಶೇ.60ರಷ್ಟು ‘ಕನ್ನಡ’ ಬಳಸದ ‘ಅಂಗಡಿ ಬಂದ್’- ‘BBMP’ ಎಚ್ಚರಿಕೆ
ಪಾಕಿಸ್ತಾನ ಪರ ಘೋಷಣೆ ಆರೋಪ : ತುಮಕೂರಲ್ಲಿ ‘ಬಿಜೆಪಿ ಕಾರ್ಯಕರ್ತರ’ ಪ್ರತಿಭಟನೆ ವೇಳೆ ‘Dysp’ ಮೇಲೆ ಹಲ್ಲೆ