ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ನಿವೃತ್ತ ನ್ಯಾಯಮೂರ್ತಿ ಮೈಕೆಲ್ ಡಿ ಕುನ್ಹಾ ಅವರ ಆಯೋಗವು ಸಲ್ಲಿಸಿರುವ ವರದಿಯನ್ನು ಅಂಗೀಕರಿಸಲು ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ನಿವೃತ್ತ ನ್ಯಾಯಮೂರ್ತಿ ಮೈಕೆಲ್ ಡಿ ಕುನ್ಹಾ ಅವರ ಆಯೋಗವು ಸಲ್ಲಿಸಿರುವ ವರದಿಯನ್ನು ಅಂಗೀಕರಿಸಲು ಇಂದು ಮುಖ್ಯಮಂತ್ರಿ @siddaramaiah ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.#CabinetDecisions pic.twitter.com/ya2omDBck5
— CM of Karnataka (@CMofKarnataka) July 24, 2025
ಆರ್.ಸಿ.ಬಿ ವಿಜಯೋತ್ಸವದ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಉಂಟಾದ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಶ್ರೀ ಜಾನ್ ಮೈಕಲ್ ಕುನ್ಹಾ ಅವರ ನೇತೃತ್ವದಲ್ಲಿ ಏಕ ಸದಸ್ಯ ವಿಚಾರಣಾ ಆಯೋಗವನ್ನು ರಚಿಸಲಾಗಿತ್ತು. ಕುನ್ಹಾ ಅವರ ವರದಿಯನ್ನು ರಾಜ್ಯ ಸಚಿವ ಸಂಪುಟ ಒಪ್ಪಿದೆ. ಚರ್ಚೆಯ ನಂತರ ಜೂನ್ 4, 2025ರ ವಿಜಯೋತ್ಸವ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಉಂಟಾದ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಸಲ್ಲಿಸಿಕೆಯಾದ ವರದಿಯನ್ನು ಅಂಗೀಕರಿಸಲಾಗಿದೆ. ವರದಿಯಲ್ಲಿ ಉಲ್ಲೇಖಿಸಿರುವ ಖಾಸಗಿ ಸಂಸ್ಥೆಗಳ ಹಾಗೂ ಸರ್ಕಾರಿ ಅಧಿಕಾರಿಗಳ ವಿರುದ್ಧ ಕೈಗೊಳ್ಳಬೇಕಿರುವ ಕ್ರಮಗಳನ್ನು ಕಾನೂನು ರೀತ್ಯಾ ಕ್ರಮ ಕೈಗೊಳ್ಳಲು ಹಾಗೂ ಸರ್ಕಾರಿ ಅಧಿಕಾರಿಗಳ ವಿರುದ್ಧ ಇಲಾಖಾ ವಿಚಾರಣೆಯನ್ನು ನಡೆಸಲು ಸಚಿವ ಸಂಪುಟ ನಿರ್ಧರಿಸಿತು.
ಆರ್.ಸಿ.ಬಿ, ಡಿ.ಎನ್. ಎ ಎಂಟರ್ ಟೈನ್ ಮೆಂಟ್ ನೆಟ್ ವರ್ಕ್ಸ್ ಪ್ರೈವೇಟ್ ಲಿಮಿಟೆಡ್, ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್, , ಕೆ ಎಸ್. ಸಿ ಎ ಅಧ್ಯಕ್ಷ ರಘುರಾಮ್ ಭಟ್, ಕೆ ಎಸ್ ಸಿ ಎ ಮಾಜಿ ಅಧ್ಯಕ್ಷ, ಎ ಶಂಕರ್, ಕೆ ಎಸ್ ಸಿ ಎ ಮಾಜಿ ಖಜಾಂಚಿ ಜಯರಾಮ್ ಇ.ಎಸ್, ರಾಜೇಶ್ ಮೆನನ್, ಉಪಾಧ್ಯಕ್ಷರು, ಆರ್.ಸಿ.ಬಿ.ಎಸ್.ಪಿ ಎಲ್, ಡಾ: ವೆಂಕಟವರ್ಧನ್, ಎಂ.ಡಿ. ಡಿಎನ್ಎ ಎಂಟರ್ಟೈನ್ಮೆಂಟ್ ನೆಟ್ ವರ್ಕ್ಸ್ ಇವರುಗಳ ಮೇಲೆ ಕ್ರಮ ಜರುಗಿಸಲು ತೀರ್ಮಾನಿಸಲಾಗಿದೆ.
BREAKING: 7 ಮಸೂದೆಗಳನ್ನು ಕರ್ನಾಟಕ ವಿಧಾನಮಂಡಲದಲ್ಲಿ ಮಂಡಿಸಲು ತೀರ್ಮಾನ: ಸಿಎಂ ಸಿದ್ಧರಾಮಯ್ಯ
ಸಾಗರದ ಮಳೆಹಾನಿ ಸಂತ್ರಸ್ತರಿಗೆ ಗುಡ್ ನ್ಯೂಸ್: ನಾಳೆ ಶಾಸಕ ಗೋಪಾಲಕೃಷ್ಣ ಬೇಳೂರು ಪರಿಹಾರದ ಚೆಕ್ ವಿತರಣೆ