ಬೆಂಗಳೂರು : ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ರಾಜ್ಯದ 224 ಕ್ಷೇತ್ರಗಳ ಮತದಾರರ ಪಟ್ಟಿ ಪ್ರಕಟಿಸಿದರು. ಇದರಲ್ಲಿ ಬದಲಾವಣೆ, ತಿದ್ದುಪಡಿ ಇದ್ದರೆ ಫಾರ್ಮ್ 8 ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದೆ. ಇಂದಿನಿಂದ ನಾಮಪತ್ರ ಸಲ್ಲಿಕೆಯ ಕೊನೆಯ ದಿನಾಂಕದ ಮುಂಚಿತ 10 ದಿನದ ಒಳಗಾಗಿ ಅರ್ಜಿ ಸಲ್ಲಿಸಬಹುದು. ಅಂತಿಮ ಪಟ್ಟಿಯಲ್ಲಿ ಈಗ 5,37,85,815 ಮತದಾರರಿದ್ದಾರೆ. ಇದರಲ್ಲಿ 2,69,33,750 ಪುರುಷರು ಹಾಗೂ 2,68,47,145 ಮಹಿಳೆಯರಿದ್ದಾರೆ ಎಂದು ಮಾಹಿತಿ ನೀಡಿದರು. ಕರಡು ಪಟ್ಟಿಗೆ ಹೋಲಿಸಿದರೆ ಮಹಿಳಾ ಮತದರಾರು ಸಂಖ್ಯೆ 2,77,717 ರಷ್ಟು ಗಮನಾರ್ಹ ಹೆಚ್ಚಾಗಿದೆ. 17,47,518 ಮತದಾರರ ಗುರುತಿನ ಚೀಟಿಗಳನ್ನು ಪೋಸ್ಟ್ ಮೂಲಕ ಕಳುಹಿಸಲಾಗಿದೆ. ಈಗ 10,76,506 ಮತದಾರರ ಗುರುತಿನ ಚೀಟಿ ಮುದ್ರಣವಾಗಿದ್ದು, ರವಾನಿಸುವ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಪಟ್ಟಿಯಲ್ಲಿ 10,34,018 ಯುವ ಮತದಾರರಿದ್ದಾರೆ. ಇದರಲ್ಲಿ 3,88,527 ರಷ್ಟು ಯುವಕರು ಹೊಸದಾಗಿ ನೋಂದಾಯಿಸಿಕೊಂಡಿದ್ದಾರೆ. ಅನಿವಾಸಿ ಭಾರತೀಯರ ಮತದಾರರ ಸಂಖ್ಯೆ 3,165 ಇದೆ. 80 ವರ್ಷ ಮೇಲ್ಪಟ್ಟ ವಯೋಮಾನದ ಮತದಾರರ ಸಂಖ್ಯೆ 12,71,862 ಇದೆ. 100 ವರ್ಷ ಮೇಲ್ಪಷ್ಟ ಮತದಾರರ ಸಂಖ್ಯೆ 17,937 ಇದೆ ಎಂದು ಮಾಹಿತಿ ನೀಡಿದರು. ಒಟ್ಟು ಮತಗಟ್ಟೆಗಳ ಸಂಖ್ಯೆ 58,834 ಇದೆ. ಕರಡು ಹಾಗೂ ಅಂತಿಮ ಪಟ್ಟಿಯಲ್ಲಿ ಒಟ್ಟು 35,02,328 ಸೇರ್ಪಡೆಗೊಳಿಸಲಾಗಿದೆ. 11,14,257 ಮತದಾರರ ಹೆಸರನ್ನು ತೆಗೆದು ಹಾಕಲಾಗಿದೆ. 13,43,123 ಜನರ ಹೆಸರುಗಳನ್ನು ತಿದ್ದುಪಡಿ ಮಾಡಲಾಗಿದೆ. ಒಟ್ಟು ಜನಸಂಖ್ಯೆಯಲ್ಲಿ ಶೇ 69.74 ರಷ್ಟು ಮತದಾರರಾಗಿದ್ದಾರೆ. ಪ್ರತಿ 1000 ವೋಟರ್ ಅನುಪಾತದಲ್ಲಿ 997 ಮಹಿಳಾ ಮತದಾರರಿದ್ದಾರೆ. ಆನ್ಲೈನ್ ಮೂಲಕ ಹೆಸರು ಸರಿಯಾಗಿದೆಯೇ ಎಂದು ಪರಿಶೀಲಿಸಬಹುದು. ಚುನಾವಣಾ ಆಯೋಗದ ವೆಬ್ಸೈಟ್ನಲ್ಲಿ ಮತರದಾರರ ಸಂಖ್ಯೆ ನಿರಂತರವಾಗಿ ಅಪ್ಡೇಟ್ ಆಗಲಿದೆ. ಪಾರ್ಮ್ 8 ಮೂಲಕ ಹೆಸರನ್ನು ಒಂದು ಕ್ಷೇತ್ರದಿಂದ ಇನ್ನೊಂದು ಕ್ಷೇತ್ರಕ್ಕೆ ವರ್ಗಾವಣೆ ಮಾಡಬಹುದು. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಮಾಹಿತಿ ಕೊಟ್ಟರು.