ಬೆಂಗಳೂರು ; ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA ) ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 14/11/2022ರೊಳಗೆ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.

ಹೊಸನಗರದಲ್ಲಿ ‘ಹೃದಯ ವಿದ್ರಾವಕ’ ಘಟನೆ : ತಾಯಿಯ ಅಂತ್ಯಕ್ರಿಯೆ ಮುಗಿಸಿ ಮನೆಗೆ ಬಂದಿದ್ದ ಮಗ ಸಾವು 

ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಬೆಂಗಳೂರು ಇಲ್ಲಿ ಗುತ್ತಿಗೆ ಆಧಾರದ ಮೇಲೆ ವಿವಿಧ ಹುದ್ದೆ ಭರ್ತಿ ಮಾಡಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ಇ-ಮೇಲ್ ಮೂಲಕ ಅರ್ಜಿ ಸಲ್ಲಿಸಬೇಕು.

ಹೊಸನಗರದಲ್ಲಿ ‘ಹೃದಯ ವಿದ್ರಾವಕ’ ಘಟನೆ : ತಾಯಿಯ ಅಂತ್ಯಕ್ರಿಯೆ ಮುಗಿಸಿ ಮನೆಗೆ ಬಂದಿದ್ದ ಮಗ ಸಾವು 

ಟೆಕ್ನಿಕಲ್ ಹೆಡ್ ಕಂಪ್ಯೂಟರ್ ಸೆಕ್ಷನ್ 1, ಸೀನಿಯರ್ ಪ್ರೋಗ್ರಾಮರ್ 3, ಪ್ರೋಗ್ರಾಮರ್ 8, ಡೇಟಾಬೇಸ್ ಅಡ್ಮಿನಿಸ್ಟ್ರೇಟರ್ 2, ಡೇಟಾ ಅನಲಿಸ್ಟ್ 4, ಟ್ರೈನಿ/ ಅಪ್ರೆಂಟಿಸ್ 3 ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ.

ಈಗಾಗಲೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಹಿಂದಿನ ಪ್ರಕಟಣೆಗಳ ಅನುಸಾರ ಇ-ಮೇಲ್ ಅಥವ ಖುದ್ದಾಗಿ ರೆಸ್ಯೂಮ್‌ಗಳನ್ನು ಕಳುಹಿಸಿರುವ/ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಅವಕಾಶವಿರುವುದಿಲ್ಲ.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್‌ಸೈಟ್‌ಗೆ ಭೇಟಿ ನೀಡಬಹುದು. ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಕೆ ಮಾಡಲು ವಿಳಾಸ keaopportunities@gmail.com.

ಧಾರವಾಡದಲ್ಲಿ ನೇರ ಸಂದರ್ಶನ

ಕೇಂದ್ರ ಸರ್ಕಾರದ ಪ್ರತಿಷ್ಠಿತ ಯೋಜನೆಯಾದ ಆತ್ಮ ಯೋಜನೆಯಡಿ ಕೃಷಿ ವಿಶ್ವವಿದ್ಯಾಲಯ (ಕೃಷಿ ಮಾರುಕಟ್ಟೆ) ಉಪನಿರ್ದೇಶಕರ ಹುದ್ದೆಗೆ ಅರ್ಜಿ ಕರೆಯಲಾಗಿದೆ. ತಾತ್ಕಾಲಿಕ ಈ ಹುದ್ದೆಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸುವವರು ಕೃಷಿ ಮಾರುಕಟ್ಟೆ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು.

ಆಸಕ್ತರು ಅರ್ಜಿ ನಮೂನೆಯ ಎರಡು ಪ್ರತಿಗಳೊಂದಿಗೆ ನವೆಂಬರ್ 22 ರಂದು ಬೆಳಗ್ಗೆ 11 ಗಂಟೆಗೆ ನೇರ ಸಂದರ್ಶನಕ್ಕೆ ಹಾಜರಾಗಬಹುದು.

ಸಂದರ್ಶನ ನಡೆಯುವ ವಿಳಾಸ

ವಿಸ್ತರಣಾ ನಿರ್ದೇಶನಾಲಯ, ಕೃಷಿ ಮಹಾವಿದ್ಯಾಲಯ, ಧಾರವಾಡದಲ್ಲಿ ಸಂದರ್ಶನಕ್ಕೆ ಹಾಜರಾಗಬಹುದು. ಆಸಕ್ತರು ಹೆಚ್ಚಿನ ಮಾಹಿತಿಗಾಗಿ www.uasd.edu ವೆಬ್‌ಸೈಟ್‌ಗೆ ಭೇಟಿ ನೀಡಬಹುದು.

ಹೊಸನಗರದಲ್ಲಿ ‘ಹೃದಯ ವಿದ್ರಾವಕ’ ಘಟನೆ : ತಾಯಿಯ ಅಂತ್ಯಕ್ರಿಯೆ ಮುಗಿಸಿ ಮನೆಗೆ ಬಂದಿದ್ದ ಮಗ ಸಾವು 

Share.
Exit mobile version