ಬೆಂಗಳೂರು: ಜನವರಿ.22ರ ನಾಳೆ ಅಯೋಧ್ಯೆಯ ರಾಮಮಂದಿರಲ್ಲಿ ರಾಮನ ಮೂರ್ತಿ ಪ್ರತಿಷ್ಠಾಪನೆ ಮಾಡೋ ಕಾರ್ಯಕ್ರಮ ನಡೆಯಲಿದೆ. ಅಲ್ಲದೇ ಪ್ರಾಣ ಪ್ರತಿಷ್ಠಾಪನೆ ಮಾಡಲಾಗುತ್ತಿದೆ. ಈ ಸಂದರ್ಭದಲ್ಲಿ ಸರ್ಕಾರಿ ರಜೆಯನ್ನು ಈಗಾಗಲೇ ಅನೇಕ ರಾಜ್ಯಗಳಲ್ಲಿ ಘೋಷಣೆ ಮಾಡಲಾಗಿದೆ. ಕರ್ನಾಟಕದಲ್ಲೂ ರಜೆ ಘೋಷಣೆ ಮಾಡೋ ಒತ್ತಾಯ ಹೆಚ್ಚಾಗಿದೆ. ಇಂತಹ ಸಂದರ್ಭದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಏನು ಹೇಳಿದ್ರು ಅಂತ ಮುಂದೆ ಓದಿ.
ಅಯೋಧ್ಯೆಯಲ್ಲಿ ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆ ಸಂದರ್ಭದ ವೇಳೆಯಲ್ಲಿ 16ಕ್ಕೂ ಹೆಚ್ಚು ರಾಜ್ಯಗಳಲ್ಲಿ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಕರ್ನಾಟಕದಲ್ಲೂ ನಾಳೆ ಸರ್ಕಾರಿ ರಜೆ ಘೋಷಣೆ ಮಾಡಬೇಕು ಎಂಬುದಾಗಿ ಬಿಜೆಪಿಯ ನಾಯಕರು ಆಗ್ರಹಿಸಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ವಿಪಕ್ಷ ನಾಯಕ ಆರ್.ಅಶೋಕ್ ಸೇರಿದಂತೆ ವಿವಿಧ ನಾಯಕರು ರಾಜ್ಯ ಸರ್ಕಾರ ನಾಳೆ ಸರ್ಕಾರಿ ರಜೆ ನೀಡಬೇಕು. ಅಯೋಧ್ಯೆ ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠಾನೆ ಮಾಡುವಂತ ಕಾರ್ಯಕ್ರಮವನ್ನು ಎಲ್ಲರೂ ಕಣ್ ತುಂಬಿಕೊಳ್ಳುವಂತೆ ಆಗಬೇಕು ಎಂಬುದಾಗಿ ಒತ್ತಾಯಿಸಿದ್ದಾರೆ.
ಈ ಕುರಿತಂತೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ನಾವು ಭಕ್ತಿ, ಗೌರವ, ಧರ್ಮ ಪ್ರಚಾರಕ್ಕೆ ಮಾಡೋದಿಲ್ಲ. ನಮ್ಮ ಭಾವನೆ ಇದೆಯಲ್ಲ ಎಂದಿದ್ದಾರೆ.
ಅಯೋಧ್ಯೆಯ ರಾಮ ಮಂದಿರ ದೇಗುಲಗಳಲ್ಲಿ ಏನು ಆಚರಣೆ ಮಾಡಬೇಕೋ ಮಾಡ್ತಾರೆ. ಏನು ಪೂಜೆ, ಪುರಸ್ಕಾರ ಮಾಡಬೇಕೋ ಮಾಡ್ತಾರೆ. ಸರ್ಕಾರಿ ರಜೆ ಘೋಷಣೆ ಮಾಡೋ ಬಗ್ಗೆ ನಾವು ಸದ್ಯಕ್ಕೆ ಯಾವ ತೀರ್ಮಾನ ಕೈಗೊಂಡಿಲ್ಲ. ಆ ಬಗ್ಗೆ ಸಿಎಂ ಜೊತೆಗೆ ಚರ್ಚಿಸಿ ಹೇಳೋದಾಗಿ ತಿಳಿಸಿದರು.
BREAKING: ನಾಳೆ ಮೈಸೂರಲ್ಲಿ ನಡೆಸಲು ನಿರ್ಧರಿಸಿದ್ದಂತ ‘ಲಕ್ಷ ದೀಪೋತ್ಸವ’ಕ್ಕೆ ಪೊಲೀಸರು ಅನುಮತಿ ನಿರಾಕರಣೆ