ಬೆಂಗಳೂರು: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕನ್ನಡ ರಾಜ್ಯೋತ್ಸವದ ಮುನ್ನಾದಿನದಂದು ರಾಜ್ಯದ ಜನತೆಗೆ ಶುಭ ಕೋರಿದ್ದಾರೆ
ರಾಜ್ಯದ ಸಾಂಸ್ಕೃತಿಕ ಪರಂಪರೆಯನ್ನು ಪೋಷಿಸುವಂತೆ ಅವರು ಜನರಿಗೆ ಕರೆ ನೀಡಿದರು.
ಎಲ್ಲರಿಗೂ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. ಈ ನವೆಂಬರ್ 1 ರಂದು ನಾವು ಕರ್ನಾಟಕದ ಏಕೀಕರಣವನ್ನು ಆಚರಿಸುತ್ತಿರುವಾಗ, ನಮ್ಮ ರಾಜ್ಯದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಪೋಷಿಸೋಣ” ಎಂದು ಗೆಹ್ಲೋಟ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.
“ಇಂದು, ಕರ್ನಾಟಕದ ಏಕತೆ ಮತ್ತು ಸಮೃದ್ಧಿಗಾಗಿ ತಮ್ಮನ್ನು ಸಮರ್ಪಿಸಿಕೊಂಡ ದಾರ್ಶನಿಕರನ್ನು ನಾವು ಗೌರವಿಸುತ್ತೇವೆ. ನಮ್ಮ ಪ್ರೀತಿಯ ಕರ್ನಾಟಕದ ಪ್ರಗತಿಗಾಗಿ ನಾವು ಒಟ್ಟಾಗಿ ಕೆಲಸ ಮಾಡುವಾಗ ಏಕತೆ, ಸಹೋದರತ್ವ ಮತ್ತು ಸಾಮಾಜಿಕ ಸಾಮರಸ್ಯವನ್ನು ಉತ್ತೇಜಿಸಲು ಅವರ ಪರಂಪರೆ ನಮಗೆ ಸ್ಫೂರ್ತಿ ನೀಡಲಿ” ಎಂದಿದ್ದಾರೆ.