ಬೆಂಗಳೂರು: ಪಿ.ಸಿ.ಗದ್ದಿಗೌಡರ್ ಹಾಗೂ ರಮೇಶ್ ಜಿಗಜಿಣಗಿ ಅವರನ್ನು 2 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸಬೇಕು ಎಂದು ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರು ಮನವಿ ಮಾಡಿದರು.
ಬಾಗಲಕೋಟೆಯಲ್ಲಿ ಇಂದು ಏರ್ಪಡಿಸಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿಯವ ಬೃಹತ್ ಸಾರ್ವಜನಿಕ ಸಭೆಯ ಸಂದರ್ಭದಲ್ಲಿ ಅವರು ಮಾತನಾಡಿದರು. ರಾಜ್ಯದಲ್ಲಿ ಕುಡಿಯುವ ನೀರಿನ ಹಾಹಾಕಾರ ಇದೆ. ರೈತರು ಸಂಕಷ್ಟದಲ್ಲಿದ್ದರೂ ಈ ಸರಕಾರ ಕೈಕಟ್ಟಿ ಕೂತಿದೆ ಎಂದು ಟೀಕಿಸಿದರು. ಇಂಥ ಬೇಜವಾಬ್ದಾರಿ ಸರಕಾರವು ಕರ್ನಾಟಕದಲ್ಲಿ ಮುಂದುವರೆಯಲು ಯಾವುದೇ ನೈತಿಕ ಹಕ್ಕಿಲ್ಲ ಎಂದು ತಿಳಿಸಿದರು.
ಶಾಸಕ ಬಿ.ಆರ್.ಪಾಟೀಲ ಯತ್ನಾಳ್ ಅವರು ಮಾತನಾಡಿ, ಸನಾತನ ಧರ್ಮ ಉಳಿಸಲು ಬಿಜೆಪಿಗೆ ಮತ ಕೊಡಿ ಎಂದು ವಿನಂತಿಸಿದರು. ಹುಬ್ಬಳ್ಳಿ ಘಟನೆ ನೆನಪಿರಲಿ; ಬಾಗಲಕೋಟೆ ಹೆಣ್ಮಕ್ಕಳ ರಕ್ಷಣೆಗಾಗಿ ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸಿ ಎಂದು ತಿಳಿಸಿದರು. ಬಟಾಟೆಯಿಂದ ಚಿನ್ನ ತೆಗೆಯುವ ರಾಹುಲ್ ಗಾಂಧಿ, ಪಿತ್ರಾರ್ಜಿತ ಆಸ್ತಿಗೂ ಶೇ 55 ತೆರಿಗೆ ಹಾಕುತ್ತಾರೆ ಎಂಬುದು ನೆನಪಿರಲಿ ಎಂದು ವಿವರಿಸಿದರು.
ಮಾಜಿ ಡಿಸಿಎಂ ಗೋವಿಂದ ಕಾರಜೋಳ ಅವರು ಮಾತನಾಡಿ, ಕಾಂಗ್ರೆಸ್ ಎಂದರೆ ಮೋಸದಾಟದ ಪಕ್ಷ. ಮೋದಿಜೀ ಅವರ ಗ್ಯಾರಂಟಿ ಎಂದರೆ ಅಭಿವೃದ್ಧಿಯ ಖಚಿತತೆ. ಬಿಜೆಪಿ- ಜೆಡಿಎಸ್ ಪಕ್ಷದ ಅಭ್ಯರ್ಥಿಗಳನ್ನುÀ ಎಲ್ಲ 28 ಸ್ಥಾನಗಳಲ್ಲಿ ಗೆಲ್ಲಿಸಿ ಎಂದು ಮನವಿ ಮಾಡಿದರು.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಅಭ್ಯರ್ಥಿಗಳಾದ ರಮೇಶ್ ಜಿಗಜಿಣಗಿ, ಪಿ.ಸಿ.ಗದ್ದಿಗೌಡರ್, ಮಾಜಿ ಸಚಿವರು, ಶಾಸಕರು, ಪಕ್ಷದ ರಾಜ್ಯ- ಜಿಲ್ಲಾ ಪದಾಧಿಕಾರಿಗಳು, ಪಕ್ಷದ ಮುಖಂಡರು ವೇದಿಕೆಯಲ್ಲಿದ್ದರು. ವಿವಿಧ ಯೋಜನೆಗಳ ಮಹಿಳಾ ಫಲಾನುಭವಿಗಳು ಇದೇ ಸಂದರ್ಭದಲ್ಲಿ ಪ್ರಧಾನಿಯರಿಗೆ ಕೃತಜ್ಞತೆ ಸಲ್ಲಿಸಲು ಶಾಲು ಹೊದಿಸಿ ಸನ್ಮಾನ ಮಾಡಿದರು. ಕಂಬಳಿ ಹೊದಿಸಿ ಗೌರವಾರ್ಪಣೆ ಮಾಡಲಾಯಿತು.
BREAKING : ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ : ಅಸ್ಸಾಂ ಪೊಲೀಸರಿಂದ ಮೊದಲ ಆರೋಪಿ ಬಂಧನ