ಬೆಂಗಳೂರು: ಕರ್ನಾಟಕದಲ್ಲಿ ದಿನೇ ದಿನೇ ಕೊಲೆ, ಹತ್ಯೆಗಳು ಹೆಚ್ಚಾಗುತ್ತಿವೆ. ಶಾಂತಿ, ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ಕರ್ನಾಟಕದಲ್ಲಿ ಕಾಂಗ್ರೆಸ್ ಆಡಳಿತದಲ್ಲಿ ರೌಡಿ ರಾಜ್ಯವಾಗಿ ಮಾರ್ಪಟ್ಟಿದೆ ಅಂತ ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ.
ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಕಾಂಗ್ರೆಸ್ ಕೈಗೆ ಅಧಿಕಾರ ಕೊಟ್ಟರೆ. ರೌಡಿಗಳ ಕೈಯಲ್ಲಿ ಮಚ್ಚು ಲಾಂಗು. ಉಗ್ರರ ಕೈಯಲ್ಲಿ ಬಾಂಬು ಕೊಟ್ಟಂಗೆ ಅಂತ ವಾಗ್ಧಾಳಿ ನಡೆಸಿದ್ದಾರೆ.
ಶಾಂತಿ, ಸುವ್ಯವಸ್ಥೆ, ಕಾನೂನು ಪರಿಪಾಲನೆಗೆ ಹೆಸರುವಾಸಿಯಾಗಿದ್ದ ಕರ್ನಾಟಕ ಕಾಂಗ್ರೆಸ್ ಆಡಳಿತದಲ್ಲಿ ಅಕ್ಷರಶಃ ರೌಡಿ ರಾಜ್ಯವಾಗಿ ಮಾರ್ಪಟ್ಟಿದೆ. ಕಾಂಗ್ರೆಸ್ ಸರ್ಕಾರ ರಾಜ್ಯದ ಆಡಳಿತ ಚುಕ್ಕಾಣಿ ಹಿಡಿದಿದ್ದೇ ತಡ, ಭಯೋತ್ಪಾದಕರು, ರೌಡಿ ಶೀಟರ್ ಗಳು, ಕೊಲೆಗಡುಕರು, ಬಾಂಬು, ಮಚ್ಚು, ಲಾಂಗು ಹಿಡಿದು ರಾಜ್ಯದಲ್ಲಿ ಅಶಾಂತಿಯ ವಾತಾವರಣ ಸೃಷ್ಟಿಸಿದ್ದಾರೆ ಅಂತ ಕಿಡಿಕಾರಿದ್ದಾರೆ.
ಚನ್ನಗಿರಿಯಲ್ಲಿ ಪೊಲೀಸ್ ಠಾಣೆ ಧ್ವಂಸ ಮಾಡಿರುವ ಘಟನೆ, ಉಡುಪಿಯಲ್ಲಿ ನಡುರಸ್ತೆಯಲ್ಲೇ ಗ್ಯಾಂಗ್ ವಾರ್ ನಡೆದಿರುವ ಘಟನೆ ಇವನ್ನೆಲ್ಲ ನೋಡುತ್ತಿದ್ದರೆ ರಾಜ್ಯದಲ್ಲಿ ಕಾನೂನಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ ಎನ್ನುವುದು ಸ್ಪಷ್ಟವಾಗುತ್ತದೆ ಎಂದು ಹೇಳಿದ್ದಾರೆ.
ಸಿಎಂ ಸಿದ್ಧರಾಮಯ್ಯನವರೇ, ರಾಜ್ಯದಲ್ಲಿ ಎಗ್ಗಿಲ್ಲದೆ ನಡೆಯುತ್ತಿರುವ ಹತ್ಯೆಗಳು, ಅತ್ಯಾಚಾರಗಳು, ಗ್ಯಾಂಗ್ ವಾರ್ ಗಳು, ಗಾಂಜಾ ಮಾರಾಟ ದಂಧೆಗಳು, ರೇವ್ ಪಾರ್ಟಿಗಳು, ಕೋಮು ಗಲಭೆಗಳು, ಗಲಾಟೆಗಳಿಂದ ಕರ್ನಾಟಕದ ಗೌರವ ಮಣ್ಣುಪಾಲಗುತ್ತಿದೆ. ನಿಮ್ಮ ಕೈಯಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಿ. ಕನ್ನಡಿಗರು ನೆಮ್ಮದಿಯಿಂದ ಬದುಕಲು ಬಿಡಿ ಅಂತ ಆಗ್ರಹಿಸಿದ್ದಾರೆ.
ಕಾಂಗ್ರೆಸ್ ಕೈಗೆ ಅಧಿಕಾರ ಕೊಟ್ಟರೆ,
ರೌಡಿಗಳ ಕೈಯಲ್ಲಿ ಮಚ್ಚು ಲಾಂಗು,
ಉಗ್ರರ ಕೈಯಲ್ಲಿ ಬಾಂಬು ಕೊಟ್ಟಂಗೆಶಾಂತಿ, ಸುವ್ಯವಸ್ಥೆ, ಕಾನೂನು ಪರಿಪಾಲನೆಗೆ ಹೆಸರುವಾಸಿಯಾಗಿದ್ದ ಕರ್ನಾಟಕ @INCKarnataka ಆಡಳಿತದಲ್ಲಿ ಅಕ್ಷರಶಃ ರೌಡಿ ರಾಜ್ಯವಾಗಿ ಮಾರ್ಪಟ್ಟಿದೆ.
ಕಾಂಗ್ರೆಸ್ ಸರ್ಕಾರ ರಾಜ್ಯದ ಆಡಳಿತ ಚುಕ್ಕಾಣಿ ಹಿಡಿದಿದ್ದೇ ತಡ, ಭಯೋತ್ಪಾದಕರು,… pic.twitter.com/XcBRu56W2o
— R. Ashoka (ಮೋದಿ ಅವರ ಕುಟುಂಬ) (@RAshokaBJP) May 25, 2024
ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ : ʻನಿವೃತ್ತ ವೇತನʼ ಕ್ಕೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ
ರಾಹುಲ್ ದ್ರಾವೀಡ್ ಬದಲಿಗೆ ʻಟೀಂ ಇಂಡಿಯಾʼದ ನೂತನ ಕೋಚ್ ಆಗಿ ʻಗೌತಮ್ ಗಂಭೀರ್ʼ ಆಸಕ್ತಿ : ವರದಿ