ನವದೆಹಲಿ : ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಲೆ ಅವರು ಗುರುವಾರ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.
ನವದೆಹಲಿಯ ಸುಪ್ರೀಂ ಕೋರ್ಟ್ ಆವರಣದಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರು ನ್ಯಾಯಮೂರ್ತಿ ವರಲೆ ಅವರಿಗೆ ಪ್ರಮಾಣ ವಚನ ಬೋಧಿಸಿದರು.
#WATCH | Delhi | Justice Prasanna B Varale takes oath as a Supreme Court judge. Chief Justice of India DY Chandrachud administers the oath of office to him.
(Video: Supreme Court of India YouTube) pic.twitter.com/8WRDq57QN8
— ANI (@ANI) January 25, 2024
ನ್ಯಾಯಮೂರ್ತಿ ವರಲೆ ಅವರ ನೇಮಕದೊಂದಿಗೆ, ಸುಪ್ರೀಂ ಕೋರ್ಟ್ ಈಗ ಭಾರತದ ಮುಖ್ಯ ನ್ಯಾಯಮೂರ್ತಿ ಸೇರಿದಂತೆ 34 ನ್ಯಾಯಾಧೀಶರ ಪೂರ್ಣ ಬಲವನ್ನ ತಲುಪಿದೆ. ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್ ಅವರು ಡಿಸೆಂಬರ್ 25 ರಂದು ನಿವೃತ್ತರಾದ ನಂತರ ಸುಪ್ರೀಂ ಕೋರ್ಟ್ನಲ್ಲಿ ಒಬ್ಬ ನ್ಯಾಯಾಧೀಶರ ಕೊರತೆ ಇತ್ತು.
ನ್ಯಾಯಮೂರ್ತಿ ವರಲೆ ಅವರನ್ನ ಸುಪ್ರೀಂಕೋರ್ಟ್ ನ್ಯಾಯಾಧೀಶರನ್ನಾಗಿ ನೇಮಕ ಮಾಡಲಾಗಿದೆ ಎಂದು ಕಾನೂನು ಮತ್ತು ನ್ಯಾಯ ಸಚಿವಾಲಯ ಬುಧವಾರ ಪ್ರಕಟಿಸಿದೆ.
“2047ರ ವೇಳೆಗೆ ಭಾರತವನ್ನ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವುದು ನಮ್ಮ ಗುರಿ”: ಪ್ರಧಾನಿ ಮೋದಿ