ಬೆಂಗಳೂರು:BBMP ಚುನಾವಣೆಯಲ್ಲಿ OBC ಮತ್ತು ಮಹಿಳಾ ಮೀಸಲಾತಿಗಾಗಿ ಸರ್ಕಾರದ ಅಧಿಸೂಚನೆಯನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ, ಇದೇ ವೇಳೇ ನವೆಂಬರ್ 30 ರೊಳಗೆ ಹೊಸ ಅಧಿಸೂಚನೆಯನ್ನು ಹೊರಡಿಸಲು ಮತ್ತು ಡಿಸೆಂಬರ್ 31 ರೊಳಗೆ ಬಿಬಿಎಂಪಿ ಚುನಾವಣೆಯನ್ನು ನಡೆಸುವಂತೆ ನ್ಯಾಯಾಲಯ ಆದೇಶಿಸಿದೆ.

ಈ ನಡುವೆ  ಬಿಬಿಎಂಪಿ ಚುನಾವಣೆಗೆ ಅಂತಿಮ ಮತದಾರರ ಪಟ್ಟಿ ( |BBMP Election )  ಪ್ರಕಟವಾಗಿದೆ. ಚುನಾವಣೆ ಆಯೋಗದ  ಪ್ರಕಾರ 243 ವಾರ್ಡ್​ಗಳಲ್ಲಿ ಒಟ್ಟು 79,19,563 ಮತದಾರರು ಇದ್ದಾರೆ. ಈ ಪೈಕಿ 41,14,383 ಪುರುಷರು, 38,03,747 ಮಹಿಳೆಯರು ಹಾಗೂ 1433 ಇತರೆ ಮತದಾರರು ಇದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಅಂತಿಮ ಮತದಾರರ ಪಟ್ಟಿಯನ್ನು ಬಿಬಿಎಂಪಿ ವೆಬ್​ಸೈಟ್ bbmp.gov.in ನಲ್ಲಿ ಅಪ್ಲೋಡ್ ಮಾಡಲಾಗಿದ್ದು, ಹೊಸದಾಗಿ ಮತದಾರರಾಗಿ ನೊಂದಾಯಿಸಿಕೊಳ್ಳಲು ಮೊಬೈಲ್ Voter Helpline App ಮತ್ತು NVSP Portal ವೆಬ್‌ಸೈಟ್  ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಮುಂಬರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ -2022 ರ ಚುನಾವಣೆ ಸಂಬಂಧ ಮಾನ್ಯ ಆಯುಕ್ತರು, ರಾಜ್ಯ ಚುನಾವಣಾ ಆಯೋಗ ರವರ ಸುತ್ತೋಲೆ ಸಂಖ್ಯೆ: ರಾಚುಅ 149 ಇಯುಬಿ 2022, ದಿನಾಂಕ: 29-07-2022 ರಂತೆ ವಾರ್ಡ್ ವಾರು ಮತದಾರರ ಪಟ್ಟಿಯನ್ನು ತಯಾರಿಸುವ ಸಂಬಂಧ ಸೂಚನೆ ಮತ್ತು ವೇಳಾಪಟ್ಟಿಯನ್ನು ನೀಡಲಾಗಿರುತ್ತದೆ.

ದಿನಾಂಕ: 09.09.2022 ರವರೆಗಿನ ಮತದಾರರ ಮಾಹಿತಿಯನ್ನು ಒದಗಿಸಿದ್ದು, ಸದರಿ ಮಾಹಿತಿಯನ್ನು ಬಳಸಿಕೊಂಡು “ಅಂತಿಮ ಮತದಾರರ ಪಟ್ಟಿ”ಯನ್ನು ಸಿದ್ಧಗೊಳಿಸಿ, ದಿನಾಂಕ: 29.09.2022 ರಂದು ಪ್ರಕಟಿಸಲಾಗುತ್ತದೆ. ಈ ಪೈಕಿ ಪಾಲಿಕೆಯ 243 ವಾರ್ಡ್ ಗಳಲ್ಲಿ ಒಟ್ಟು 7919563 ಮತದಾರರಿರುತ್ತಾರೆ. ಅದರಲ್ಲಿ 4114383 ಪುರುಷರು, 3803747 ಮಹಿಳೆಯರು ಹಾಗೂ 1433 ಇತರೆ ಮತದಾರರಿದ್ದಾರೆ. ಸಾರ್ವಜನಿಕರು ತಮ್ಮ ಹಾಗೂ ಕುಟುಂಬ ಸದಸ್ಯರ ಮಾಹಿತಿಯನ್ನು ಮತದಾರರ ಪಟ್ಟಿಯಲ್ಲಿ ಪರಿಶೀಲಿಸಿಕೊಳ್ಳಬಹುದಾಗಿದೆ.

ಅಂತಿಮ ಮತದಾರರ ಪಟ್ಟಿಯನ್ನು ಬಿಬಿಎಂಪಿ BBMP Website: bbmp.gov.in ನಲ್ಲಿ Upload ಮಾಡಲಾಗುವುದು ಹಾಗೂ ಎಲ್ಲಾ ಮತದಾರರ ನೊಂದಣಾಧಿಕಾರಿ/ಸಹಾಯಕ ಮತದಾರರ ನೊಂದಣಾಧಿಕಾರಿಗಳ ಕಛೇರಿಗಳಲ್ಲೂ ಹಾಗೂ ವಾರ್ಡ್ ಕಛೇರಿಗಳಲ್ಲೂ ಸಾರ್ವಜನಿಕರ ವೀಕ್ಷಣೆಗೆ ಮಾಹಿತಿ ಲಭ್ಯವಿರಿಸಲಾಗುತ್ತದೆ. ಮುಂದುವರೆದು, ಹೊಸದಾಗಿ ಮತದಾರರಾಗಿ ನೊಂದಾಯಿಸಿಕೊಳ್ಳಲು ಮೊಬೈಲ್ ಪ್ ಆದ Voter Helpline App ಮತ್ತು NVSP Portal ವೆಬ್‌ಸೈಟ್ ಮುಖೇನಾ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಸಾರ್ವಜನಿಕರು/ಮತದಾರರು ಸದುಪಯೋಗಪಡಿಸಿಕೊಳ್ಳಲು ಕೋರಿದೆ.

 

 

Share.
Exit mobile version