ಬೆಂಗಳೂರು : ಸರ್ವ ಜನಾಂಗದ ಶಾಂತಿಯ ತೋಟ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಕೈಗೆ ಸಿಕ್ಕು ತಾಲಿಬಾನ್ ಆಗಿ ಬದಲಾಗುತ್ತಿದೆ ಎಂದು ರಾಜ್ಯ ಬಿಜೆಪಿ ಘಟಕ ಕಿಡಿಕಾರಿದೆ.
ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, ಬೆಂಗಳೂರಿನ ಸಿದ್ದಣ್ಣ ಗಲ್ಲಿ ಜುಮ್ಮಾ ಮಸೀದಿ ರಸ್ತೆಯಲ್ಲಿರುವ ಮೊಬೈಲ್ ಅಂಗಡಿಗೆ ನುಗ್ಗಿದ ಮತಾಂಧ ಕಿಡಿಗೇಡಿಗಳು ಮುಖೇಶ್ ಎಂಬ ಹಿಂದೂ ಯುವಕನ ಮೇಲೆ ಹಿಗ್ಗಾಮುಗ್ಗ ಹಲ್ಲೆ ನಡೆಸಿ ಓಡಿ ಹೋಗಿದ್ದಾರೆ. ಅಂಗಡಿ ಮಾಲೀಕ ಮುಖೇಶ್ ಸಂಜೆ ಪೂಜೆ ಸಮಯದಲ್ಲಿ ಭಕ್ತಿ ಗೀತೆಗಳನ್ನು ಹಾಕಿದ್ದೇ ಮತಾಂಧ ದುರುಳರು ಹಲ್ಲೆ ಮಾಡಲು ಕಾರಣ ಎಂದು ವಾಗ್ದಾಳಿ ನಡೆಸಿದೆ.
ಹಲ್ಲೆಗೊಳಗಾದ ಮುಖೇಶ್ ಹಲಸೂರು ಪೊಲೀಸ್ ಠಾಣೆಗೆ ಬಂದು ದೂರು ನೀಡಿದರೂ, ಪೊಲೀಸರು ದೂರು ದಾಖಲಿಸಿಕೊಳ್ಳದೆ ಹಿಂದೇಟು ಹಾಕುತ್ತಿದ್ದಾರೆ ಎಂದರೆ, ಇದರ ಹಿಂದೆ ಮಜಾವಾದಿ ಸಿದ್ದರಾಮಯ್ಯ ಸರ್ಕಾರದ ಕಳಂಕಿತ ಕೈಗಳ ಕೈವಾಡ ಇರುವುದು ಮೇಲ್ನೋಟಕ್ಕೆ ತಿಳಿಯುತ್ತಿದೆ. ಕೂಡಲೇ ಪಾ’ಕೈ’ಸ್ತಾನ್ ಸರ್ಕಾರ ಮತಾಂಧ ಗೂಂಡಾ ಬ್ರದರ್ಸ್‌ಗಳನ್ನು ಬಂಧಿಸಿ ಕ್ರಮಕೈಗೊಳ್ಳದೆ ಹೋದರೆ, ಉಗ್ರ ಹೋರಾಟ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದೆ.