ಮಡಿಕೇರಿ : ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರ ಹಾಗೂ ನೈರುತ್ಯ ಪದವೀಧರರ ಕ್ಷೇತ್ರಗಳಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ನಡೆಯಲಿರುವ ಚುನಾವಣೆ ಸಂಬಂಧ ಭಾರತ ಚುನಾವಣಾ ಆಯೋಗವು ಹಿರಿಯ ಐಎಎಸ್ ಅಧಿಕಾರಿಗಳನ್ನು ಚುನಾವಣಾ ವೀಕ್ಷಕರನ್ನಾಗಿ ನೇಮಕ ಮಾಡಿ ಆದೇಶಿಸಿದೆ.
ಕರ್ನಾಟಕ ನೈರುತ್ಯ ಪದವೀಧರರ ಕ್ಷೇತ್ರಕ್ಕೆ (ಕೊಡಗು ಜಿಲ್ಲೆ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆ) ಚುನಾವಣಾ ವೀಕ್ಷಕರಾಗಿ ಅನಿಲ್ ಕುಮಾರ್ ಟಿ.ಕೆ, ಸಹಾಯಕ ಅಧಿಕಾರಿಯಾಗಿ ಮೈಸೂರು ಜಿಲ್ಲೆ ತೋಟಗಾರಿಕೆ ಇಲಾಖೆಯ ವಿಭಾಗೀಯ ಜಂಟಿ ನಿರ್ದೇಶಕರ ಕಚೇರಿಯ ಉಪ ನಿರ್ದೇಶಕರಾದ ರುದ್ರೇಶ್ ಕೆ. ದೂ. ಸಂ.9964174107, 7204064565.
ಕರ್ನಾಟಕ ನೈರುತ್ಯ ಶಿಕ್ಷಕರ ಕ್ಷೇತ್ರ(ಕೊಡಗು ಜಿಲ್ಲೆ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆ) ಕ್ಕೆ ಹರ್ಷ್ ಗುಪ್ತ ಅವರನ್ನು ಚುನಾವಣಾ ವೀಕ್ಷಕರಾಗಿ ಹಾಗೂ ಸಹಾಯಕ ಅಧಿಕಾರಿಯಾಗಿ ಮೈಸೂರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ.ಎಂ.ಡಿ.ಸುದರ್ಶನ್ ಅವರನ್ನು ನೇಮಕ ಮಾಡಿದೆ. ದೂ.ಸಂ.9448244340, 7204294565.
ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರ(ಮೈಸೂರು, ಮಂಡ್ಯ, ಚಾಮರಾಜನಗರ ಮತ್ತು ಹಾಸನ ಜಿಲ್ಲೆ)ಕ್ಕೆ ಡಾ.ರವಿಶಂಕರ್ ಅವರನ್ನು ಚುನಾವಣಾ ವೀಕ್ಷಕರಾಗಿ ಹಾಗೂ ಸಹಾಯಕ ಅಧಿಕಾರಿಯಾಗಿ ಮೈಸೂರು ನಗರದ ಅಬಕಾರಿ ಉಪ ಆಯುಕ್ತರಾದ ಎಸ್.ನಾಗರಾಜಪ್ಪ ಅವರನ್ನು ನೇಮಕ ಮಾಡಿದೆ. ದೂ.9449597178, 7204214565 ನ್ನು ಸಂಪರ್ಕಿಸಬಹುದು.
ಮೂರು ಕ್ಷೇತ್ರಗಳ ಚುನಾವಣಾ ವೀಕ್ಷಕರು ಈಗಾಗಲೇ ಚುನಾವಣಾಧಿಕಾರಿಗಳ ಕಚೇರಿಗೆ ಆಗಮಿಸಿ ಸಂಬಂಧಪಟ್ಟ ಕ್ಷೇತ್ರಗಳ ಚುನಾವಣಾ ಕೆಲಸ ಕಾರ್ಯಗಳ ವೀಕ್ಷಣೆ ನಡೆಸುತ್ತಿದ್ದಾರೆ. ಈ ಚುನಾವಣಾ ವೀಕ್ಷಕರನ್ನು ಭೇಟಿ ಮಾಡಲು/ ಸಂಪರ್ಕಿಸಲು ದೂರವಾಣಿ ಸಂಖ್ಯೆ 7204064565, 7204294565 ಮತ್ತು 7204214565 ಗೆ ಕರೆ ಮಾಡಬಹುದು ಎಂದು ಕರ್ನಾಟಕ ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರ ಮತ್ತು ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರಾದ ಡಾ.ಜಿ.ಸಿ.ಪ್ರಕಾಶ್ ಅವರು ತಿಳಿಸಿದ್ದಾರೆ.
ಪರಿಷತ್ ಚುನಾವಣೆ: ದಕ್ಷಿಣ ಶಿಕ್ಷಕರ 13, ಪದವೀಧರ ಕ್ಷೇತ್ರದ 11 ಅಭ್ಯರ್ಥಿಗಳ ‘ನಾಮಪತ್ರ ಅಂಗೀಕಾರ’
BREAKING: ರಾಜ್ಯ ಸರ್ಕಾರದಿಂದ ‘ಅಭಿವೃದ್ಧಿ ಕಾಮಗಾರಿ’ಗಳಿಗೆ ‘ಮಾದರಿ ನೀತಿ ಸಂಹಿತೆ’ಯಿಂದ ವಿನಾಯ್ತಿ ನೀಡಿ ಆದೇಶ