ಚಿಕ್ಕಮಗಳೂರು : ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಸಂಬಂಧ ಕನ್ನಡ, ಭಾಷೆ, ನೆಲ, ಜಲಕ್ಕಾಗಿ ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ ಎಂದು ಇಂಧನ ಸಚಿವ ಸುನೀಲ್ ಕುಮಾರ್ ಹೇಳಿದ್ದಾರೆ.
BREAKING NEWS : ಕಲಬುರಗಿಯಲ್ಲಿ ಭೀಕರ ರಸ್ತೆ ಅಪಘಾತ : ಲಾರಿಗೆ ಕಾರು ಡಿಕ್ಕಿಯಾಗಿ ದಂಪತಿ ಸ್ಥಳದಲ್ಲೇ ಸಾವು
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕನ್ನಡ, ಭಾಷೆ, ನೆಲ, ಜಲಕ್ಕಾಗಿ ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ. ಗಡಿ ವಿವಾದದಲ್ಲಿ ಶಾಂತಿ ಕದಡುವವ ಚಟುವಟಿಕೆಗಳನ್ನು ರಾಜ್ಯ ಸರ್ಕಾರ ಸಹಿಸುವುದಿಲ್ಲ. ಎಂಇಎಸ್ ಕಿಡಿಗೇಡಿಗಳ ವಿರುದ್ಧ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲಿದೆ. ಕನ್ನಡ ಭಾಷೆ, ಸಂಸ್ಕೃತಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ.
ಇನ್ನು ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದಲ್ಲಿ ಕರ್ನಾಟಕದ ಕೆಎಸ್ಆರ್ ಟಿಸಿ ಬಸ್ ಗಳ ಮೇಲೆ ಕಪ್ಪು ಮಸಿ ಬಳಿದು, ಜೈ ಮಹಾರಾಷ್ಟ್ರ ಎಂದು ಬರೆಯಲಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಿಂದ ಮಹಾರಾಷ್ಟ್ರಕ್ಕೆ ಹೋಗಬೇಕಿದ್ದ 150 ಕ್ಕೂ ಹೆಚ್ಚು ಕೆಎಸ್ ಆರ್ ಟಿಸಿ ಬಸ್ ಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.
ರಾಜ್ಯದ ನಾನಾ ಬಾಗಗಳಿಂದ ಮಹಾರಾಷ್ಟ್ರಕ್ಕೆ 150 ಕ್ಕೂ ಹೆಚ್ಚು ಬಸ್ ಗಳು ಸಂಚಾರ ಮಾಡುತ್ತಿದ್ದವು. ಆದರೆ ಮಹಾರಾಷ್ಟ್ರದಲ್ಲಿ ಎಂಇಎಸ್, ಶಿವಸೇನೆ ಹಾಗೂ ನವನಿರ್ಮಾಣ ಸೇನೆ ಕಾರ್ಯಕರ್ತರು ಕರ್ನಾಟಕದ ಬಸ್ ಗಳ ಮೇಲೆ ಕಪ್ಪು ಬಸಿ ಬಳಿದು, ಜೈ ಮಹಾರಾಷ್ಟ್ರ ಎಂದು ಬರೆದಿದ್ದು. ಈ ಹಿನ್ನೆಲೆಯಲ್ಲಿ ಪೊಲೀಸರ ಸೂಚನೆ ಮೇರೆಗೆ ಪರಿಸ್ಥಿತಿ ಸುಧಾರಿಸುವವರೆಗೂ ಕೆಎಸ್ ಆರ್ ಟಿಸಿ ಬಸ್ ಸಂಚಾರವನ್ನು ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ.