ಹುಬ್ಬಳ್ಳಿ : ಕರ್ನಾಟಕ ಹಾಗೂ ಮಹಾರಾಷ್ಟ್ರ ಗಡಿ ವಿವಾದದ ಬಗ್ಗೆ ಸಂಬಂಧ ಪಟ್ಟ ಅಧಿಕಾರಿಗಳ ಜೊತೆ ಚರ್ಚಿಸುವುದಕ್ಕಾಗಿ ಸಿಎಂ ಬೊಮ್ಮಾಯಿ ದೆಹಲಿ ತಲುಪಿದ್ದಾರೆ.
ಕರ್ನಾಟಕ ಹಾಗೂ ಮಹಾರಾಷ್ಟ್ರ ಗಡಿ ವಿವಾದದ ಕುರಿತು ಇಂದು ಸಂಜೆ 7:30 ಕ್ಕೆ ಅಮಿತ್ ಶಾ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ. ಸಂಸತ್ ಭವನದ ಗ್ರಂಥಾಲಯ ಕಟ್ಟಡದಲ್ಲಿ ಅಮಿತ್ ಶಾ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ. ಸಭೆಯಲ್ಲಿ ಸಿಎಂ ಬೊಮ್ಮಾಯಿ ಭಾಗಿಯಾಗಲಿದ್ದಾರೆ. ಗೃಹ ಸಚಿವ ಆರಗ ಜ್ಞಾನೇಂದ್ರ, ಸಚಿವ ಗೋವಿಂದ ಕಾರಜೋಳ ಮತ್ತಿತರರು ಭಾಗಿಯಾಗಲಿದ್ದಾರೆ.
ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದ ವಿಶೇಷ ವಿಮಾನದ ಮೂಲಕ ಸಿಎಂ ಬೊಮ್ಮಾಯಿ ದೆಹಲಿಗೆ ಭೇಟಿ ನೀಡಿದ್ದು, . ಕರ್ನಾಟಕ ಹಾಗೂ ಮಹಾರಾಷ್ಟ್ರ ಗಡಿ ವಿವಾದ ಸೇರಿ ಹಲವು ವಿಚಾರಗಳ ಜೊತೆ ಸಿಎಂ ಬೊಮ್ಮಾಯಿ ದೆಹಲಿಯಲ್ಲಿ ವರಿಷ್ಟರ ಜೊತೆ ಚರ್ಚಿಸಲಿದ್ದಾರೆ.
ಸಿಎಂ ಬಸವರಾಜ ಬೊಮ್ಮಾಯಿ, ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ, ಅಧಿಕಾರಿಗಳು ಭಾಗಿಯಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ದೆಹಲಿಗೆ ತೆರಳಿದ್ದಾರೆ.. ಸಭೆಯಲ್ಲಿ ಉಭಯ ರಾಜ್ಯಗಳ ನಡುವಿನ ಗಡಿಯಲ್ಲಿನ ವಾಸ್ತವ ಪರಿಸ್ಥಿತಿ ಹಾಗೂ ಕಾನೂನು ಸುವ್ಯವಸ್ಥೆ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ.
ದೇಶದ ಹಿರಿಯ ನಾಗರೀಕರಿಗೆ ಬಿಗ್ ಶಾಕ್: ಸದ್ಯಕ್ಕಿಲ್ಲ ರಿಯಾಯಿತಿ ಪ್ರಯಾಣ, ಸಂಸತ್ತಿನಲ್ಲಿ ರೈಲ್ವೆ ಸಚಿವ ಸ್ಪಷ್ಟನೆ
BIG BREAKING NEWS: ಶಿಕ್ಷಕರ ಅರ್ಹತಾ ಪರೀಕ್ಷೆಯ (TET) ಫಲಿತಾಂಶ ಪ್ರಕಟ | Karnataka TET Exam Result 2022