ನವದೆಹಲಿ : ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಸಂಬಂಧ ಇಂದು ದೆಹಲಿಯಲ್ಲಿ ಗೃಹ ಸಚಿವ ಅಮಿತಾ ಶಾ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದ್ದು, ಸಿಎಂ ಬಸವರಾಜ ಬೊಮ್ಮಾಯಿ, ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ, ಅಧಿಕಾರಿಗಳು ಭಾಗಿಯಾಗಲಿದ್ದಾರೆ.
BIGG NEWS : ಅಕ್ರಮ-ಸಕ್ರಮ : ಸರ್ಕಾರಿ ಜಮೀನುಗಳಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ಇಲ್ಲಿದೆ ಮುಖ್ಯ ಮಾಹಿತಿ
ಇಂದು ಸಂಜೆ 7 ಗಂಟೆಗೆ ಸಭೆ ನಿಗದಿಯಾಗಿದ್ದು, ಈ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಸಂಜೆ 4 ಗಂಟೆಗೆ ದೆಹಲಿಗೆ ತೆಳಲಿದ್ದಾರೆ. ಅಲ್ಲಿಂದ ನೇರವಾಗಿ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸಭೆಯಲ್ಲಿ ಉಭಯ ರಾಜ್ಯಗಳ ನಡುವಿನ ಗಡಿಯಲ್ಲಿನ ವಾಸ್ತವ ಪರಿಸ್ಥಿತಿ ಹಾಗೂ ಕಾನೂನು ಸುವ್ಯವಸ್ಥೆ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ.
ಗಡಿ ವಿವಾದ ಸಂಬಮಧ ನಾವು ನಮ್ಮ ನಿಲುವಿನ ಬಗ್ಗೆ ತಿಳಿಸುತ್ತೇವೆ. ಗಡಿ ಪ್ರಕರನ ಕುರಿತು ಸುಪ್ರೀಂಕೋರ್ಟ್ ನಲ್ಲಿರುವ ವರದಿ, ಗಡಿ ವಿಚಾರದ ಕುರಿತಾದ ಕಾನೂನು ನಿಯಮಗಳ ಬಗ್ಗೆ ಗೃಹ ಸಚಿವರಿಗೆ ಮಾಹಿತಿ ನೀಡುತ್ತೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.