ಚಾಮರಾಜನಗರ: ಕರ್ನಾಟಕ ಹಾಗೂ ಮಹಾರಾಷ್ಟ್ರ ಗಡಿ ವಿವಾದದ ಬಗ್ಗೆ ಸಂಬಂಧ ಪಟ್ಟ ಅಧಿಕಾರಿಗಳ ಜೊತೆ ಚರ್ಚಿಸುವುದಕ್ಕಾಗಿ, ನಾಳೆ ದೆಹಲಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೆರಳಲಿದ್ದಾರೆ.
ಸಾಹಿತ್ಯ ಪ್ರೇಮಿಗಳ ಗಮನಕ್ಕೆ: ‘ಹಾವೇರಿ ಸಮ್ಮೇಳನ’ದ ಪ್ರತಿನಿಧಿಗಳ ನೋಂದಣಿ ಅವಧಿ ವಿಸ್ತರಣೆ, ನೇರ ನೋಂದಣಿಗೂ ಅವಕಾಶ
ಈ ಬಗ್ಗೆ ಸುದ್ದಿಗಾರರೊಂದಿಗೆ ಇಂದು ಮಾತನಾಡಿದಂತ ಅವರು ಗಡಿ ವಿವಾದ ಸಂಬಂಧ ರಾಜ್ಯದ ತೀರ್ಮಾನವನ್ನು ಪೋನ್ ನಲ್ಲಿ ತಿಳಿಸಲಾಗಿದೆ. ನಾಳೆ ಇದನ್ನು ಸಂಬಂಧಿಸಿದವರಿಗೆ ಖುದ್ದಾಗಿ ತಿಳಿಸುತ್ತೇನೆ. ಮಹಾಜನ್ ವರದಿ ಬಗ್ಗೆ ಈಗ ಮಾತನಾಡುವುದಿಲ್ಲ ಎಂಬುದಾಗಿ ಹೇಳಿದರು.
ಇದೇ ವೇಳೆ ಮಲೆ ಮಹದೇಶ್ವರ ದೇವಸ್ಥಾನದ ಸುತ್ತ ಮುತ್ತಲಿನ ಗ್ರಾಮದ ಮಕ್ಕಳಿಗೆ ಶಾಲೆಗೆ ತೆರಳಲು ಅನುಕೂಲ ವಾಗುವಂತೆ ಬಸ್ ವ್ಯವಸ್ಥೆ ಕಲ್ಪಿಸಿಕೊಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.
Rain In Karnataka: ಬೆಂಗಳೂರು ಸೇರಿದಂತೆ ರಾಜ್ಯಾಧ್ಯಂತ ಇನ್ನೂ 5 ದಿನ ಮಳೆ – ಹವಾಮಾನ ಇಲಾಖೆ ಮುನ್ಸೂಚನೆ
ಅಮೃತ ಯೋಜನೆಯಡಿ ನಗರ ಪ್ರದೇಶದ ಅಭಿವೃದ್ಧಿಗೆ 7000 ಕೋಟಿ ಯೋಜನೆಗೆ ಮಂಜೂರಾತಿ ನೀಡಲಾಗಿದೆ. ಈ ಜಿಲ್ಲೆಯ ಕುಡಿಯುವ ನೀರಿನ ಯೋಜನೆಗೆ 274 ಕೋಟಿ ರೂ. ಅಮೃತ್-2 ಯೋಜನೆಯಡಿ ನೀಡಲಾಗುತ್ತಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಹಕಾರದಿಂದ ರಾಜ್ಯ ಅಭಿವೃದ್ಧಿಯಾಗುತ್ತಿದೆ. ಈ ಸರ್ಕಾರದ ಅವಧಿಯಲ್ಲಿ ಹಾಳೆಯಲ್ಲಿನ ಸರ್ಕಾರದ ಯೋಜನೆಗಳು ಭೌಧಿಕವಾಗಿ ಜನರಿಗೆ ತಲುಪುತ್ತಿವೆ. ಅಭಿವೃದ್ಧಿ ನಿರಂತವಾಗಿ ನಡೆಯುತ್ತದೆ. ಹಿಂದುಳಿದ ಜಿಲ್ಲೆಗಳ ಸಮಗ್ರ ಅಭಿವೃದ್ಧಿಗೆ ಸಕಲ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಕೊಳ್ಳೇಗಾಲ ತಾಲ್ಲೂಕಿನಲ್ಲಿ 7 ಕೆರೆ ತುಂಬಿಸುವ ಯೋಜನೆ ಪ್ರಮುಖವಾಗಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು. ಕೈಗಾರಿಕೆಗಳಲ್ಲಿ ಎಸ್ ಸಿ ಎಸ್ ಟಿಗಳಿಗೆ ಪ್ರಾತಿನಿಧ್ಯ, ಆಸ್ಪತ್ರೆ ನಿರ್ಮಾಣ, ರೈತರಿಗೆ ಸಾಗುವಳಿ ಪತ್ರ ನೀಡಲು ಕಾನೂನು ಕ್ರಮ , ಉಡುತೊರೆ ನೀರಾವರಿ ಯೋಜನೆಗೆ ಮಂಜೂರಾತಿ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.